Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:2 - ಕನ್ನಡ ಸತ್ಯವೇದವು C.L. Bible (BSI)

2 ಈ ಕಾರಣ, ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸಂಪಾದನೆಗೆ ತಕ್ಕಂತೆ ಸ್ವಲ್ಪ ಹಣವನ್ನು ಪ್ರತಿ ವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ ಇಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಬಂದಾಗ ಹಣ ವಸೂಲುಮಾಡಬೇಕಾದ ಅವಶ್ಯವಾಗದಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದ ಸಂಪಾದನೆಯ ಮೇರೆಗೆ ವಾರವಾರದ ಮೊದಲನೆಯ ದಿನದಲ್ಲಿ ಗಂಟುಮಾಡಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮ್ಮಲ್ಲಿ ಪ್ರತಿಯೊಬ್ಬನು ತನಗಾದ ಅಭಿವೃದ್ಧಿಗೆ ತಕ್ಕಂತೆ ನಿಮ್ಮಿಂದ ಸಾಧ್ಯವಾದಷ್ಟು ಹಣವನ್ನು ಪ್ರತಿವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ, ವಿಶೇಷವಾದ ಸ್ಥಳವೊಂದರಲ್ಲಿ ಇಟ್ಟಿರಬೇಕು. ಆಗ ನಾನು ನಿಮ್ಮಲ್ಲಿಗೆ ಬಂದ ನಂತರ ಹಣವನ್ನು ಸಂಗ್ರಹಿಸುವ ಅವಶ್ಯಕತೆಯಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಆದಾಯಕ್ಕೆ ತಕ್ಕಂತೆ ವಾರದ ಮೊದಲನೆಯ ದಿನದಲ್ಲಿ ಕೂಡಿಟ್ಟುಕೊಂಡಿರಲಿ. ಹೀಗೆ ಮಾಡಿದರೆ, ನಾನು ಬಂದಾಗ ನೀವು ಹಣ ಕೂಡಿಸುವ ಅವಶ್ಯವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಹರ್ ಎಕ್ ಆಯ್ತಾರ್‍ಚೆ ತುಮ್ಚ್ಯಾತ್ಲೊ ಹರಿ ಎಕ್ಲೊ ಅಪ್ನಾಚ್ಯಾನ್ ಹೊತಾ ತೌಡೆ ಉಲ್ಲೆ ಪೈಸೆ ಕಡೆಕ್ ಕಾಡುನ್ ಥಂವ್ದಿತ್; ಅಶೆ ಮಿಯಾ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ಪೈಸೆ ಉಸುಲಿ ಕರ್‍ತಲೆ ಲಾಗಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:2
22 ತಿಳಿವುಗಳ ಹೋಲಿಕೆ  

ವಾರದ ಮೊದಲನೆಯ ದಿನ ‘ರೊಟ್ಟಿ ಮುರಿಯುವ’ ಸಹಭೋಜನಕ್ಕೆ ನಾವು ಜೊತೆಕೂಡಿದ್ದೆವು. ಪೌಲನು ಮಾರನೆಯ ದಿನ ಅವರನ್ನು ಬಿಟ್ಟುಹೊರಡಬೇಕಾದ್ದರಿಂದ ಉಪನ್ಯಾಸ ಮಾಡಲಾರಂಭಿಸಿ, ಮಧ್ಯರಾತ್ರಿಯವರೆಗೂ ಮುಂದುವರೆಸಿದನು.


ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ. ಸಣ್ಣ ವಿಷಯಗಳಲ್ಲಿ ದ್ರೋಹ ಮಾಡುವವನು ದೊಡ್ಡ ವಿಷಯಗಳಲ್ಲೂ ದ್ರೋಹಮಾಡುತ್ತಾನೆ.


ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮಗೆ ಮನಮುಟ್ಟುವ ರೀತಿಯಲ್ಲಿ ನೆರವೇರಿಸಿದ್ದಾರೆ. ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವ ಸಾಮರ್ಥ್ಯವನ್ನು ಕೊಟ್ಟಿದ್ದಾರೆ ಎಂಬುದನ್ನು ಜ್ಞಾಪಕಮಾಡಿಕೊಳ್ಳಿ.


ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.


ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು.


ಭಾನುವಾರ ಮುಂಜಾನೆ ಆ ಮಹಿಳೆಯರು ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಯ ಬಳಿಗೆ ಬಂದರು.


ಚಾದೋಕ್ ಸಂತಾನದ ಮಹಾಯಾಜಕ ಅಜರ್ಯನು, “ಜನರು ದೇವರಾದ ಸರ್ವೇಶ್ವರನಿಗೆ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಸರ್ವೇಶ್ವರ ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.


ಇಸಾಕನು ಆ ನಾಡಿನಲ್ಲಿ ವ್ಯವಸಾಯ ಮಾಡಿ ಅದೇ ವರ್ಷದಲ್ಲಿ ನೂರ್ಮಡಿ ಬೆಳೆ ಎತ್ತಿದನು. ಸರ್ವೇಶ್ವರ ಸ್ವಾಮಿಯ ಆಶೀರ್ವಾದ ಅವನ ಮೇಲಿತ್ತು.


ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು.


ತನ್ನಿಂದ ಏನು ಸಾಧ್ಯವೋ ಅದನ್ನು ಈಕೆ ಮಾಡಿದ್ದಾಳೆ; ನನ್ನ ದೇಹವನ್ನು ಮುಂಚಿತವಾಗಿಯೇ ಸುಗಂಧ ತೈಲದಿಂದ ಲೇಪಿಸಿ ಅದನ್ನು ಶವಸಂಸ್ಕಾರಕ್ಕಾಗಿ ಸಿದ್ಧಪಡಿಸಿದ್ದಾಳೆ.


ದೇವರ ಕೃಪೆಯಿಂದ ನನಗೆ ಬೇಕಾದುದೆಲ್ಲ ಇದೆ; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ತಾವು ದಯವಿಟ್ಟು ಅಂಗೀಕರಿಸಬೇಕು,” ಎಂದು ಹೇಳಿ ಒತ್ತಾಯಪಡಿಸಿದ್ದರಿಂದ ಏಸಾವನು ಆ ಕಾಣಿಕೆಯನ್ನು ತೆಗೆದುಕೊಂಡನು.


ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿಮ್ಮ ವಾಗ್ದಾನವನ್ನು ನೆರವೇರಿಸಿದ್ದೀರಿ. ನಾನು ಅದಕ್ಕೆ ಕೇವಲ ಅಪಾತ್ರನು. ನಾನು ಮೊದಲು ಈ ಜೋರ್ಡನ್ ನದಿಯನ್ನು ದಾಟಿದಾಗ ನನಗಿದ್ದುದು ಒಂದು ಊರುಗೋಲು ಮಾತ್ರ. ಈಗ ಎರಡು ಪರಿವಾರಗಳಿಗೆ ಒಡೆಯನಾಗಿದ್ದೇನೆ.


ನಾನು ಬರುವುದಕ್ಕೆ ಮೊದಲು ನಿಮಗಿದ್ದ ಕೆಲವು ಈಗ ಬಹಳವಾಗಿ ಹೆಚ್ಚಿವೆ. ನಾನು ಹೋದ ಕಡೆಗಳಲ್ಲೆಲ್ಲ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸಿದ್ದಾರೆ. ಆದರೆ ನಾನು ನನ್ನ ಸ್ವಂತ ಮನೆತನಕ್ಕಾಗಿ ಸಂಪಾದಿಸುವುದು ಯಾವಾಗ?” ಎಂದನು.


ಅದಕ್ಕೆ ಲಾಬಾನನು, “ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ತಂಗಿರು. ಸರ್ವೇಶ್ವರ ಸ್ವಾಮಿ ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಗೊಳಿಸಿದ್ದಾರೆಂದು ಶಾಸ್ತ್ರೋಕ್ತವಾಗಿ ತಿಳಿದುಕೊಂಡಿದ್ದೇನೆ.


ಈ ವಿಷಯದಲ್ಲಿ ನನ್ನ ಸಲಹೆ ಏನೆಂದರೆ : ಒಂದು ವರ್ಷಕ್ಕೆ ಹಿಂದೆ ನೀವು ಪ್ರಾರಂಭಿಸಿದ ಈ ಸೇವಾಕಾರ್ಯವನ್ನು ಪೂರೈಸುವುದು ಲೇಸು. ಈ ಕಾರ್ಯವನ್ನು ಮೊದಲು ಆರಂಭಿಸಿದವರು ನೀವೇ. ಆರಂಭಿಸಬೇಕೆಂದು ಸೂಚಿಸಿದವರೂ ನೀವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು