Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:6 - ಕನ್ನಡ ಸತ್ಯವೇದವು C.L. Bible (BSI)

6 ಬಹುಶಃ ನಾನು ನಿಮ್ಮೊಡನೆ ತಂಗಬಹುದು. ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮಲ್ಲಿ ಕಳೆಯಬೇಕಾಗಬಹುದು. ಆಮೇಲೆ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಕಳುಹಿಸಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಥವಾ ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆಯುವೆನು; ಹಾಗೆಯೇ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಲು ಸಹಾಯಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆದೇನು; ಮತ್ತು ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ನಿಮ್ಮೊಂದಿಗೆ ಸ್ವಲ್ಪಕಾಲ ಇಳಿದುಕೊಳ್ಳಬಹುದು. ಒಂದುವೇಳೆ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮಲ್ಲಿ ಕಳೆಯಬೇಕಾಗಬಹುದು. ಬಳಿಕ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಕಳುಹಿಸಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬಹುಶಃ ನಾನು ಸ್ವಲ್ಪ ಸಮಯ ನಿಮ್ಮೊಂದಿಗೆ ಇದ್ದ ಮೇಲೆ ಅಥವಾ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮೊಂದಿಗೆ ಕಳೆಯಲು ಬಯಸುತ್ತೇನೆ. ಹೀಗೆ ನಾನು ಹೋಗಬೇಕಾದ ಸ್ಥಳಗಳಲ್ಲಿ ನೀವು ನನಗೆ ಸಹಾಯ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಸಾದ್ಯ್ ಹೊಲ್ಯಾರ್ ಮಿಯಾ ಉಲ್ಲೆ ದಿಸ್ ತುಮ್ಚ್ಯಾ ವಾಂಗ್ಡಾ ರ್‍ಹಾತಾ, ಅಶೆ ಥಂಡಿಚಿ ದಿಸಾ ಪತರ್ ತುಮ್ಚ್ಯಾ ವಾಂಗ್ಡಾಚ್ ರ್‍ಹಾಲ್ಯಾರ್‍ಬಿ ರ್‍ಹಾಲೊ, ಖರೆ ಮಿಯಾ ಥೈತ್ನಾ ಖೈ ಜಾತಲೆ ರ್‍ಹಾಲ್ಯಾರ್‍ಬಿ ತುಮಿಚ್ ಮಾಕಾ ಫಿಡೆ ಜಾವ್ಕ್ ಮಜತ್ ಕರ್‍ತಲೆ ಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:6
11 ತಿಳಿವುಗಳ ಹೋಲಿಕೆ  

ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು.


ನಾನು ಸ್ಪೇಯಿನ್ ದೇಶಕ್ಕೆ ಹೋಗುವ ಮಾರ್ಗದಲ್ಲಿ ಮೊದಲು ನಿಮ್ಮನ್ನು ಕಾಣಬೇಕೆಂದಿದ್ದೇನೆ. ಸ್ವಲ್ಪಕಾಲ ನಿಮ್ಮೊಡನೆ ಸಂತೋಷವಾಗಿ ತಂಗಿದ್ದು ಬಳಿಕ ನಿಮ್ಮ ಸಹಾಯದಿಂದ ಆ ದೇಶಕ್ಕೆ ಪ್ರಯಾಣವನ್ನು ಮುಂದುವರಿಸುತ್ತೇನೆ.


ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದಿರುವುದರಿಂದ ಅರ್ತೆಮನನ್ನಾಗಲೀ ತುಖಿಕನನ್ನಾಗಲೀ ನಿನ್ನ ಬಳಿಗೆ ಕಳಿಸುತ್ತೇನೆ. ಅವರಲ್ಲೊಬ್ಬನು ನಿನ್ನ ಬಳಿಗೆ ಬಂದಾಗ ನೀನು ಕೂಡಲೇ ನಿಕೊಪೊಲಿಗೆ ಬಂದುಬಿಡು.


ನಾನು ಮಕೆದೋನಿಯಕ್ಕೆ ಹೋಗುವ ದಾರಿಯಲ್ಲಿ ಒಮ್ಮೆ ನಿಮ್ಮನ್ನು ಭೇಟಿಮಾಡಬೇಕು ಎಂದಿದ್ದೆ; ಮಕೆದೋನಿಯದಿಂದ ಹಿಂದಿರುಗುವಾಗ ಇನ್ನೊಮ್ಮೆ ಭೇಟಿಯಿತ್ತು ನಿಮ್ಮ ನೆರವಿನಿಂದ ಜುದೇಯ ಪ್ರವಾಸವನ್ನು ಕೈಗೊಳ್ಳಬೇಕೆಂದು ಆಲೋಚಿಸಿದೆ.


ಯಾರೂ ಆತನನ್ನು ತಾತ್ಸಾರ ಮಾಡದಿರಲಿ. ಸಮಾಧಾನದಿಂದ ಆತನು ನನ್ನ ಬಳಿಗೆ ಬರುವಂತೆ ಕಳುಹಿಸಿಕೊಡಿ. ಆತನ ಆಗಮನವನ್ನು ನಾನು ಇತರ ಸಹೋದರರೊಡನೆ ಎದುರುನೋಡುತ್ತಿದ್ದೇನೆ.


ಈಗಾಗಲೇ ಮೂರು ತಿಂಗಳು ಕಳೆದಿದ್ದವು. ಅಲೆಕ್ಸಾಂಡ್ರಿಯಕ್ಕೆ ಸೇರಿದ ‘ಅಶ್ವಿನಿ’ ಎಂಬ ಹಡಗೊಂದು ಚಳಿಗಾಲದ ನಿಮಿತ್ತ ಅಲ್ಲಿ ಲಂಗರುಹಾಕಿತ್ತು. ನಾವು ಅದನ್ನು ಹತ್ತಿ ಪ್ರಯಾಣ ಮುಂದುವರಿಸಿದೆವು.


ಅಲ್ಲದೆ ಚಳಿಗಾಲವನ್ನು ಕಳೆಯಲು ಆ ಬಂದರು ಹಿತಕರವಾಗಿರಲಿಲ್ಲ. ಆದ್ದರಿಂದ ಅಲ್ಲಿಂದ ಹೊರಟು, ಸಾಧ್ಯವಾದರೆ, ಫೆನಿಕ್ಸ್ ಎಂಬ ಊರನ್ನು ಸೇರಿ, ಅಲ್ಲೇ ಚಳಿಗಾಲವನ್ನು ಕಳೆಯಬಹುದೆಂದು ಹೆಚ್ಚುಮಂದಿ ಅಭಿಪ್ರಾಯ ವ್ಯಕ್ತಪಡಿಸಿದರು. ಫೆನಿಕ್ಸ್, ಕ್ರೇಟ್ ದ್ವೀಪದ ಒಂದು ಬಂದರು. ಇದು ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.


ಆದರೂ, ಆ ದಿನಗಳು ಕಳೆದ ಮೇಲೆ, ಅವರನ್ನು ಬಿಟ್ಟು ನಮ್ಮ ಪ್ರಯಾಣವನ್ನು ಮುಂದುವರಿಸಲು ಅನುವಾದೆವು. ಅವರಾದರೋ, ಮಡದಿ ಮಕ್ಕಳೊಡನೆ ಪಟ್ಟಣ ಬಿಟ್ಟು ಸಮುದ್ರತೀರದವರೆಗೂ ನಮ್ಮೊಡನೆ ಬಂದರು. ಅಲ್ಲಿ ನಾವೆಲ್ಲರೂ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


‘ಇನ್ನೆಂದೂ ನೀವು ನನ್ನ ಮುಖವನ್ನು ಕಾಣಲಾರಿರಿ,’ ಎಂಬ ಅವನ ಮಾತು ಅವರನ್ನು ಅತೀವ ದುಃಖಕ್ಕೆ ಈಡುಮಾಡಿತ್ತು. ಅವರು ಹಡಗಿನವರೆಗೂ ಹೋಗಿ ಅವನನ್ನು ಬೀಳ್ಕೊಟ್ಟರು.


ಪೌಲನನ್ನು ಬಿಟ್ಟುಬರಲು ಹೋದವರು ಅವನ ಜೊತೆ ಅಥೆನ್ಸಿನವರೆಗೆ ಹೋದರು; ಅನಂತರ ಸೀಲ ಮತ್ತು ತಿಮೊಥೇಯರಿಬ್ಬರೂ ಸಾಧ್ಯವಾದಷ್ಟು ಬೇಗ ತನ್ನ ಬಳಿಗೆ ಬಂದುಸೇರಬೇಕೆಂಬ ಆಜ್ಞೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂದಿರುಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು