Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:1 - ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ದೇವರ ಸತ್ಯಾರ್ಥವನ್ನು ಸಾರಲು ನಿಮ್ಮಲ್ಲಿಗೆ ನಾನು ಬಂದಾಗ ವಾಕ್ಚಾತುರ್ಯವನ್ನಾಗಲಿ, ಜ್ಞಾನಾಡಂಬರವನ್ನಾಗಲಿ ಪ್ರದರ್ಶಿಸುತ್ತಾ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ನಾನು ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ನಾನಂತೂ ದೇವರು ಹೇಳಿಕೊಟ್ಟ ಮಾತನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ ಜ್ಞಾನಾಡಂಬರದಿಂದಾಗಲಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪ್ರಿಯ ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬಂದಿದ್ದಾಗ, ನಾನು ನಿಮಗೆ ದೇವರ ಸತ್ಯವನ್ನು ತಿಳಿಸಿದೆನು. ಆದರೆ ನಾನು ನಾಜೂಕಾದ ಪದಗಳನ್ನಾಗಲಿ ಮಹಾ ಜ್ಞಾನವನ್ನಾಗಲಿ ಉಪಯೋಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಮಾನವೀಯ ಜ್ಞಾನದಿಂದಾಗಲಿ ದೇವರ ವಾಕ್ಯವನ್ನು ಸಾರುವವನಾಗಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜ್ಯಾ ಭಾವಾನು ಅನಿ ಭೆನಿಯಾನು ದೆವಾಚೊ ಖರೊ ಗುಟ್ಟ್ ಪ್ರಚಾರ್ ಕರುಕ್ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ಮಿಯಾ ಮೊಟ್ಯಾ ಮೊಟ್ಯಾ ಗೊಸ್ಟಿಯಾ ಅನಿ ಶಿಕಾಪ್ ವಾಪ್ರುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:1
23 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ್‍ಚಾತುರ್ಯದಿಂದಲ್ಲ. ಹಾಗೆ ಸಾರಿದ್ದೇ ಆದರೆ, ಕ್ರಿಸ್ತಯೇಸುವಿನ ಶಿಲುಬೆಯೇ ನಿರರ್ಥಕವಾದೀತು.


ನಾವು ಇವುಗಳನ್ನು ಮಾನವ ಜ್ಞಾನ ಪ್ರೇರೇಪಿಸಿದ ಮಾತುಗಳಿಂದ ಹೇಳುವುದಿಲ್ಲ. ದೇವರ ಆತ್ಮದಿಂದ ಪ್ರೇರಿತವಾದ ಮಾತುಗಳಿಂದ ಹೇಳುತ್ತೇವೆ. ಹೀಗೆ ಆಧ್ಯಾತ್ಮಿಕ ಸತ್ಯಗಳನ್ನು, ಆಧ್ಯಾತ್ಮಿಕ ವ್ಯಕ್ತಿಗಳಿಗೆ ವಿವರಿಸುತ್ತೇವೆ.


ನನ್ನ ಬೋಧನೆ ಹಾಗು ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ, ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು.


ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಆದರೆ ಮೋಶೆ ಸರ್ವೇಶ್ವರನಿಗೆ, “ಸ್ವಾಮಿ, ನಾನು ವಾಕ್ಚಾತುರ್ಯ ಇಲ್ಲದವನು; ಮೊದಲಿನಿಂದಲೂ ಹಾಗು ತಾವು ನಿಮ್ಮ ದಾಸನ ಸಂಗಡ ಮಾತಾಡಿದ ಮೇಲೆಯೂ ಹಾಗೆಯೇ ಇದ್ದೇನೆ. ನನ್ನ ಮಾತು ತೊದಲು, ನನ್ನ ನಾಲಿಗೆ ಮಂದ,” ಎಂದನು.


ಮಾತಿನಲ್ಲಿ ಚತುರನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ನಿಮಗೆ ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.


ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.


ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ.


ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.


ಇದಲ್ಲದೆ, ಕ್ರಿಸ್ತಯೇಸುವನ್ನು ಕುರಿತ ಸಾಕ್ಷ್ಯವು ನಿಮ್ಮಲ್ಲಿ ನೆಲೆಗೊಂಡಿದೆ.


ಆಗ ಪ್ರಭುವೇ ನನಗೆ ದರ್ಶನವಿತ್ತು, ‘ತಡಮಾಡದೆ ನೀನು ಜೆರುಸಲೇಮಿನಿಂದ ಹೊರಟುಹೋಗು. ನನ್ನ ಬಗ್ಗೆ ನೀನು ಕೊಡುವ ಸಾಕ್ಷಿಯನ್ನು ಇಲ್ಲಿಯ ಜನರು ಸ್ವೀಕರಿಸುವುದಿಲ್ಲ,’ ಎಂದರು.


ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ಸ್ತುತ್ಯಾರ್ಹರೂ ಮಹಿಮಾಭರಿತರೂ ಆದ ದೇವರು ನನಗೆ ವಹಿಸಿರುವ ಶುಭಸಂದೇಶಕ್ಕೆ ಈ ಬೋಧನೆ ಅನುಗುಣವಾಗಿದೆ.


“ಪೌಲನ ಪತ್ರಗಳು ಪ್ರಬಲವಾದುವು, ತೀಕ್ಷ್ಣವಾದುವು; ಆದರೆ ಆತನು ಸ್ವತಃ ನಮ್ಮಲ್ಲಿಗೆ ಬಂದಾಗ ಆತನು ದುರ್ಬಲನು ಹಾಗೂ ಆತನ ಮಾತು ಸಹ ಕೆಲಸಕ್ಕೆ ಬಾರದವು,” ಎಂದು ಕೆಲವರು ಹೇಳುತ್ತಿದ್ದಾರಂತೆ.


“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.


ನಾನು ಸಾರುವ ಜ್ಞಾನ ದೇವರ ನಿಗೂಢ ಜ್ಞಾನ. ಮಾನವರಿಗೆ ಮುಚ್ಚಿಟ್ಟ ಜ್ಞಾನ. ನಮ್ಮನ್ನು ಮಹಿಮೆಗೊಳಿಸುವುದಕ್ಕಾಗಿ ಲೋಕದ ಉತ್ಪತ್ತಿಗೆ ಮೊದಲೇ ದೇವರು ನಿಯೋಜಿಸಿದ ಜ್ಞಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು