Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:10 - ಕನ್ನಡ ಸತ್ಯವೇದವು C.L. Bible (BSI)

10 ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಪಡಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ದೇವರು ತನ್ನ ಪವಿತ್ರಾತ್ಮನ ಮೂಲಕ ನಮಗೆ ಈ ಸಂಗತಿಗಳನ್ನು ಪ್ರಕಟಿಸಿದನು. ಪವಿತ್ರಾತ್ಮನು ಸಕಲವನ್ನೂ ದೇವರ ಅಗಾಧವಾದ ರಹಸ್ಯಗಳನ್ನೂ ತಿಳಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಮಗಾದರೋ ದೇವರು ತಮ್ಮ ಪವಿತ್ರಾತ್ಮರ ಮೂಲಕ ಇವುಗಳನ್ನು ಪ್ರಕಟಿಸಿದ್ದಾರೆ. ಪವಿತ್ರಾತ್ಮರು ಎಲ್ಲಾ ವಿಷಯಗಳನ್ನು ಹಾಗೂ ದೇವರ ಆಳವಾದ ರಹಸ್ಯಗಳನ್ನು ಪರಿಶೋಧಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ದೆವಾನ್ ತೆಚ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಹಿ ಸಗ್ಳಿ ಸಂಗ್ತಿಯಾ ಅಮ್ಕಾ ಕಳ್ವುಲ್ಯಾನಾಯ್. ಪವಿತ್ರ್ ಆತ್ಮೊ ಸಗ್ಳಿ ವಿಶಯಾ, ದೆವಾಚಿ ಖೊಲಾತ್ ಹೊತ್ತಿ ಉದ್ದೆಸಾ ಸೈತ್ ಹುಡಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:10
27 ತಿಳಿವುಗಳ ಹೋಲಿಕೆ  

ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ.


ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ದೇವರು ತಮ್ಮ ನಿಗೂಢ ಯೋಜನೆಯನ್ನು ನನಗೆ ಪ್ರಕಟಗೊಳಿಸಿದ್ದಾರೆ. ಇದರ ಬಗ್ಗೆ ನಾನು ಮೊದಲೇ ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.


ಈ ಶುಭಸಂದೇಶವನ್ನು ನಾನು ಮನುಷ್ಯರಿಂದ ಪಡೆಯಲಿಲ್ಲ; ಅದನ್ನು ಯಾರಿಂದಲೂ ಕಲಿತುಕೊಳ್ಳಲಿಲ್ಲ. ಯೇಸುಕ್ರಿಸ್ತರೇ ನನಗದನ್ನು ಶ್ರುತಪಡಿಸಿದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಹೇಗೂ ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮುಂದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು.


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ಮಾನವನ ಆಲೋಚನೆಗಳನ್ನು ಅವನ ಅಂತರಾತ್ಮವಲ್ಲದೆ ಮತ್ತಾರು ಬಲ್ಲರು? ಅಂತೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಅರಿಯಲಾರರು.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ಇರುಳಿನ ಆಳದಲ್ಲಿರುವವುಗಳನ್ನು ಬೆಳಗಿಸುತ್ತಾನೆ ಗಾಢಾಂಧಕಾರವನ್ನು ಪ್ರಕಾಶಗೊಳಿಸುತ್ತಾನೆ.


ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.


ಸಭೆಯಲ್ಲಿ ಕುಳಿತವರಲ್ಲಿ ಒಬ್ಬನಿಗೆ ದೇವರ ಶ್ರುತಿಲಭಿಸಿತೆಂದರೆ ಮೊದಲು ಮಾತನಾಡುತ್ತಿದ್ದವನು ಮೌನ ತಳೆಯಲಿ.


ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು.


ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.


ಬಂದು ಕೇಳಿ ಇದನ್ನು ಹತ್ತಿರದಿಂದ ನಾ ಮಾತಾಡಿಲ್ಲ ಗುಟ್ಟಾಗಿ ಆದಿಯಿಂದ ಪ್ರಸನ್ನನಾಗಿಹೆನು ಭುವಿ ಉಂಟಾದಂದಿನಿಂದ.” (ಕಳುಹಿಸಿದ್ದಾರೆ ದೇವರಾದ ಸರ್ವೇಶ್ವರ ನನ್ನನ್ನೀಗ ತಮ್ಮ ಪವಿತ್ರಾತ್ಮರ ಸಮೇತ).


ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಈ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು.


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೆ ಬಲಿಬಿದ್ದು, ದುರಾತ್ಮಗಳ ದುರುಪದೇಶಗಳಿಗೆ ಕಿವಿಗೊಟ್ಟು ವಿಶ್ವಾಸಭ್ರಷ್ಟರಾಗುವರೆಂದು ಪವಿತ್ರಾತ್ಮ ಸ್ಪಷ್ಟವಾಗಿ ತಿಳಿಸಿದ್ದಾರೆ.


“ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ: ಈ ದುರ್ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ‘ಸೈತಾನನ ಗೂಢ ರಹಸ್ಯಗಳು’ ಎನ್ನಲಾಗುವ ಈ ವಿಷಯಗಳನ್ನು ನೀವು ಅರಿತುಕೊಳ್ಳಲಿಲ್ಲ. ನಿಮ್ಮ ಮೇಲೆ ಹೆಚ್ಚಿನ ಹೊರೆಯನ್ನು ಹೊರಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು