Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:11 - ಕನ್ನಡ ಸತ್ಯವೇದವು C.L. Bible (BSI)

11 ಮಾನವನ ಆಲೋಚನೆಗಳನ್ನು ಅವನ ಅಂತರಾತ್ಮವಲ್ಲದೆ ಮತ್ತಾರು ಬಲ್ಲರು? ಅಂತೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಅರಿಯಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮನುಷ್ಯನೊಳಗಿನ ಆಲೋಚನೆಗಳು ಅವನಲ್ಲಿರುವ ಮನುಷ್ಯತ್ಮನಿಗಲ್ಲದೆ ಮತ್ತಾರಿಗೆ ತಿಳಿಯುವುದು? ಹಾಗೆಯೇ ದೇವರಾಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರಿಂದಲೂ ಗ್ರಹಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮನುಷ್ಯನ ಒಳಗಿನ ಆಲೋಚನೆಗಳು ಅವನಲ್ಲಿರುವ ಜೀವಾತ್ಮಕ್ಕೆ ಹೊರತು ಮತ್ತಾರಿಗೆ ತಿಳಿಯುವದು? ಹಾಗೆಯೇ ದೇವರ ಆಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇದು ಹೇಗೆಂದರೆ: ಒಬ್ಬನ ಆಲೋಚನೆಗಳು ಅವನ ಆಂತರ್ಯದಲ್ಲಿರುವ ಜೀವಾತ್ಮವೊಂದಕ್ಕೆ ಹೊರತು ಬೇರೆ ಯಾರಿಗೂ ತಿಳಿದಿರುವುದಿಲ್ಲ. ಅಂತೆಯೇ, ದೇವರ ಆಲೋಚನೆಗಳು ದೇವರಾತ್ಮನ ಹೊರತು ಬೇರೆ ಯಾರಿಗೂ ತಿಳಿದಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮನುಷ್ಯನ ಆಲೋಚನೆಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿಯುವುದು? ಹಾಗೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಗ್ರಹಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಾನ್ಸಾಚ್ಯಾ ಭುತ್ತುರ್ ಹೊತ್ತ್ಯಾ ಆತ್ಮ್ಯಾಕ್ ಸೊಡುನ್ ಕೊನಾಕ್‌ಬಿ ತೆಚ್ಯಾ ವಿಶಯಾತ್ ಸಗ್ಳೆ ಗೊತ್ತ್ ರ್‍ಹಾಯ್ನಾ. ತಸೆಚ್ ದೆವಾಚ್ಯಾ ಆತ್ಮ್ಯಾಕ್ ಸೊಡುನ್ ಕೊನಾಕ್ಬಿ ದೆವಾಚ್ಯಾ ವಿಶಯಾತ್ ಸಗ್ಳೆ ಗೊತ್ತ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:11
8 ತಿಳಿವುಗಳ ಹೋಲಿಕೆ  

ಮನುಷ್ಯನ ಆತ್ಮ ಸರ್ವೇಶ್ವರನು ಕೊಟ್ಟ ದೀಪ; ಅಂತರಂಗವನ್ನೆಲ್ಲ ಶೋಧಿಸಬಲ್ಲದು ಅದರ ಪ್ರಕಾಶ.


ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ಆಯಾಯ ಹೃದಯಕ್ಕೆ ಗೊತ್ತು ಅದರ ಗೋಳು; ಅದರ ಸಂತೋಷದಲ್ಲೂ ಪಾಲುಗೊಳ್ಳಲಾಗದು ಬೇರೆಯವರು.


ಮಾನವನ ಅಂತರಾಲೋಚನೆಗಳು ಆಳವಾದ ಜಲನಿಧಿ; ವಿವೇಕಿಯಾದ ವ್ಯಕ್ತಿ ಅದನ್ನು ಹೊರ ತೆಗೆಯಬಲ್ಲ ಸೇದಿ.


ದೇವರ ಆಲೋಚನಾಸಭೆಯಲಿ ನೀನು ಭಾಗವಹಿಸಿದ್ದೆಯೋ? ಜ್ಞಾನವೆಂಬುದು ನಿನಗೆ ಮಾತ್ರ ಮೀಸಲೋ?


ಪವಿತ್ರಾತ್ಮ ಮುಖಾಂತರ ಒಬ್ಬನಿಗೆ ಜ್ಞಾನೋಕ್ತಿಗಳು, ಇನ್ನೊಬ್ಬನಿಗೆ ಅವರ ಮುಖಾಂತರವೇ ವಿದ್ಯೋಕ್ತಿಗಳು ಲಭಿಸುತ್ತವೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು