1 ಕೊರಿಂಥದವರಿಗೆ 2:14 - ಕನ್ನಡ ಸತ್ಯವೇದವು C.L. Bible (BSI)14 ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಪ್ರಾಕೃತಮನುಷ್ಯನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತಾಗಿ ತೋರುತ್ತವೆ; ಅವು ಆತ್ಮವಿಚಾರದಿಂದ ತಿಳಿಯ ತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸಲಾರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಜೆ ಕೊನಾಕ್ಡೆ ಆತ್ಮೊ ನಾ ತೆನಿ ದೆವಾಚ್ಯಾ ಆತ್ಮ್ಯಾಕ್ನಾ ಯೆತಲಿ ಆಯಾರಾ ಘೆವ್ನ್ ಹೊಯ್ನಾ. ಅಸ್ಲ್ಯಾ ಲೊಕಾನ್ಕಿ ಖರೆಬಿ ತೆ ಅರ್ಥ್ ಹೊಯ್ನಾ, ತಿ ತೆಂಕಾ ಪಿಸೆಪಾನ್ ಸರ್ಕೆ ದಿಸಾತ್, ಕಶ್ಯಾಕ್ ಮಟ್ಲ್ಯಾರ್, ತೆಚಿ ಕಿಮ್ಮತ್ ಖಾಲಿ ಆತ್ಮಿಕ್ ಆದಾರಾಚ್ಯಾ ವೈನಾ ನ್ಯಾಯ್ ಕರುಕ್ ಹೊತಾ. ಅಧ್ಯಾಯವನ್ನು ನೋಡಿ |