Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:15 - ಕನ್ನಡ ಸತ್ಯವೇದವು C.L. Bible (BSI)

15 ದೇವರ ಆತ್ಮವನ್ನು ಹೊಂದಿದವನು ಎಲ್ಲವನ್ನೂ ವಿಚಾರಣೆಮಾಡಿ ತಿಳಿದುಕೊಳ್ಳುತ್ತಾನೆ. ಅವನನ್ನು ಯಾರೂ ವಿಚಾರಣೆಗೆ ಗುರಿಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೇವರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನಾದರೂ ವಿಚಾರಿಸಿ ತಿಳಿಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಆತ್ಮಿಕ ಮನುಷ್ಯನು ಎಲ್ಲಾ ವಿಷಯಗಳ ಬಗ್ಗೆ ತೀರ್ಪು ಮಾಡಬಲ್ಲನು. ಅವನಿಗೆ ಬೇರೆ ಯಾರೂ ತೀರ್ಪು ನೀಡಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಆತ್ಮಿಕ ಮನುಷ್ಯನು ಎಲ್ಲವನ್ನೂ ವಿವೇಚಿಸಿಕೊಳ್ಳುತ್ತಾನೆ. ಆದರೆ ಅವನಿಗೆ ಬೇರೆ ಯಾರೂ ತೀರ್ಪುಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆ ಕೊನಾಕ್ಡೆ ಆತ್ಮೊ ಹಾಯ್ ತೊ ಸಗ್ಳ್ಯಾಚಿ ಕಿಮ್ಮತ್ ಕಾಯ್ ಮನುನ್ ನ್ಯಾಯ್ ಕರುಕ್ ಸಕ್ತಾ, ಖರೆ ಕೊನಾಚ್ಯಾನ್ಬಿ ಅಸ್ಲ್ಯಾ ಮಾನ್ಸಾಚೆ ನ್ಯಾಯ್ ಕರುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:15
21 ತಿಳಿವುಗಳ ಹೋಲಿಕೆ  

ಅವುಗಳನ್ನೆಲ್ಲಾ ಪರಿಶೋಧಿಸಿ ಒಳ್ಳೆಯದನ್ನು ಅಂಗೀಕರಿಸಿ,


ಕೆಟ್ಟವರು ನ್ಯಾಯ ನೀತಿಯನ್ನು ಗ್ರಹಿಸರು; ಸರ್ವೇಶ್ವರನ ಭಕ್ತರು ಅದನ್ನು ಪೂರ್ತಿಯಾಗಿ ಗ್ರಹಿಸುವರು.


ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ನಿಮ್ಮಲ್ಲಿ ಯಾರಾದರೊಬ್ಬನು ತಾನು ದೇವರ ವಾಕ್ಯವನ್ನು ಬೋಧಿಸುವವನು ಅಥವಾ ಪವಿತ್ರಾತ್ಮ ಪ್ರೇರಣೆಯನ್ನು ಹೊಂದಿದವನು ಎಂದು ಭಾವಿಸುವುದಾದರೆ, ನಾನು ನಿಮಗೆ ಬರೆದಿರುವುದೆಲ್ಲ ಪ್ರಭುವಿನ ಆಜ್ಞೆಯೆಂದು ಚೆನ್ನಾಗಿ ತಿಳಿದುಕೊಳ್ಳಲಿ.


ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ.


ಪ್ರಿಯ ಸಹೋದರರೇ, ದೇವರ ಆತ್ಮವನ್ನು ಪಡೆದವರೊಡನೆ ಮಾತನಾಡಿದಂತೆ ನಿಮ್ಮೊಡನೆ ನಾವು ಮಾತನಾಡಲಿಲ್ಲ. ಲೌಕಿಕರು ನೀವು; ಕ್ರಿಸ್ತಯೇಸುವಿನಲ್ಲಿ ಹಸುಗೂಸುಗಳು ನೀವು ಎಂದು ಭಾವಿಸಿ ನಿಮ್ಮೊಡನೆ ಮಾತನಾಡಬೇಕಾಯಿತು.


ಹೀಗಿರುವುದರಿಂದ ಈ ವಿಷಯವನ್ನು ನಾವು ಕೇಳಿದ ದಿನದಿಂದಲೂ ನಿಮಗಾಗಿ ಸದಾ ಪ್ರಾರ್ಥಿಸುತ್ತಲೇ ಇದ್ದೇವೆ. ನೀವು ಪರಿಪೂರ್ಣ ವಿವೇಕದಿಂದಲೂ ಆಧ್ಯಾತ್ಮಿಕ ಜ್ಞಾನದಿಂದಲೂ ದೇವರ ಚಿತ್ತವನ್ನು ಸಂಪೂರ್ಣವಾಗಿ ಅರಿಯಬೇಕೆಂಬುದೇ ನಮ್ಮ ಕೋರಿಕೆ.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಪೌಲನು ತಿಮೊಥೇಯನನ್ನು ತನ್ನೊಡನೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆ ಪ್ರದೇಶಗಳಲ್ಲಿದ್ದ ಯೆಹೂದ್ಯರಿಗೆ ತಿಮೊಥೇಯನ ತಂದೆ ಗ್ರೀಕನೆಂದು ತಿಳಿದಿದ್ದುದರಿಂದ ಅವನಿಗೆ ಸುನ್ನತಿಮಾಡಿಸಿದನು.


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ರಾಜಾಜ್ಞೆಯನ್ನು ಪಾಲಿಸುವವನಿಗೆ ಕೇಡು ಸಂಭವಿಸದು. ಅದನ್ನು ಯಾವಾಗ, ಹೇಗೆ ಪಾಲಿಸಬೇಕೆಂದು ಜ್ಞಾನಿಗೆ ಮನದಟ್ಟಾಗಿರುತ್ತದೆ.


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ನನ್ನ ಒಡೆಯರಾದ ಅರಸರ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿಮ್ಮ ದಾಸಿಯಾದ ನಾನು ಬಂದೆ. ನ್ಯಾಯ ಅನ್ಯಾಯಗಳನ್ನು ಕಂಡು ಹಿಡಿಯುವುದರಲ್ಲಿ ನನ್ನ ಒಡೆಯರಾದ ಅರಸರು ದೇವದೂತನಂತೆ ಇರುತ್ತೀರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇರಲಿ!” ಎಂದಳು.


ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು