Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:4 - ಕನ್ನಡ ಸತ್ಯವೇದವು C.L. Bible (BSI)

4 ನನ್ನ ಬೋಧನೆ ಹಾಗು ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ, ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4-5 ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4-5 ನಿಮ್ಮ ನಂಬಿಕೆಯು ಮಾನುಷಜ್ಞಾನವನ್ನು ಆಧಾರಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಂಡಿರಬೇಕೆಂದು ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೆ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಉಪದೇಶವಾಗಲಿ ಮಾತುಕತೆಯಾಗಲಿ ಜನರನ್ನು ಒತ್ತಾಯಿಸುವಂಥ ಜ್ಞಾನವಾಕ್ಯಗಳನ್ನು ಒಳಗೊಂಡಿರಲಿಲ್ಲ. ಆದರೆ ಪವಿತ್ರಾತ್ಮನು ಕೊಡುವ ಶಕ್ತಿಯೇ ನನ್ನ ಉಪದೇಶಕ್ಕೆ ಆಧಾರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಜ್ಞಾನ ಹಾಗೂ ಮನವೊಲಿಸುವ ವಾಕ್ಯಗಳನ್ನು ಪ್ರಯೋಗಿಸದೆ, ದೇವರಾತ್ಮನ ಶಕ್ತಿಯನ್ನೇ ಪ್ರಯೋಗಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮಾಜೆ ಶಿಕಾಪ್ ಹೊಂವ್ದಿತ್ ಅನಿ ಮಾಜಿ ಬಾತ್ಮಿ ಬರಿ ಗೊಸ್ಟಿಯಾಂಚ್ಯಾ ಮಾನ್ಸಾಚ್ಯಾ ಶಾನ್‍ಪಾನಾಕ್ ಬರೆ ದಿಸಿ ಸಾರ್ಕೆ ನತ್ತೆ , ಖರೆ ಪವಿತ್ರ್ ಆತ್ಮ್ಯಾಚ್ಯಾ ಬಳಾಚಿ ಸಾಕ್ಷಿ ಹೊವ್ನ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:4
28 ತಿಳಿವುಗಳ ಹೋಲಿಕೆ  

ದೇವರ ಸಾಮ್ರಾಜ್ಯ ಮರುಳು ಮಾತಲ್ಲ, ಶಕ್ತಿಯ ಸಾಧನ,


ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.


ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ್‍ಚಾತುರ್ಯದಿಂದಲ್ಲ. ಹಾಗೆ ಸಾರಿದ್ದೇ ಆದರೆ, ಕ್ರಿಸ್ತಯೇಸುವಿನ ಶಿಲುಬೆಯೇ ನಿರರ್ಥಕವಾದೀತು.


ಸಹೋದರರೇ, ದೇವರ ಸತ್ಯಾರ್ಥವನ್ನು ಸಾರಲು ನಿಮ್ಮಲ್ಲಿಗೆ ನಾನು ಬಂದಾಗ ವಾಕ್ಚಾತುರ್ಯವನ್ನಾಗಲಿ, ಜ್ಞಾನಾಡಂಬರವನ್ನಾಗಲಿ ಪ್ರದರ್ಶಿಸುತ್ತಾ ಬರಲಿಲ್ಲ.


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ನಮ್ಮ ಪ್ರಭು ಯೇಸುಕ್ರಿಸ್ತರ ಶಕ್ತಿಸಾಮರ್ಥ್ಯವನ್ನು ಮತ್ತು ಅವರ ಪುನರಾಗಮನವನ್ನು ನಿಮಗೆ ತಿಳಿಯಪಡಿಸುವಾಗ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕತೆಗಳನ್ನು ಆಧರಿಸಿ ನಾವು ಮಾತನಾಡಲಿಲ್ಲ. ನಾವೇ ಅವರ ಮಹತ್ತನ್ನು ಕಣ್ಣಾರೆಕಂಡು ಅದನ್ನು ತಿಳಿಯಪಡಿಸಿದ್ದೇವೆ.


ನಾವು ಇವುಗಳನ್ನು ಮಾನವ ಜ್ಞಾನ ಪ್ರೇರೇಪಿಸಿದ ಮಾತುಗಳಿಂದ ಹೇಳುವುದಿಲ್ಲ. ದೇವರ ಆತ್ಮದಿಂದ ಪ್ರೇರಿತವಾದ ಮಾತುಗಳಿಂದ ಹೇಳುತ್ತೇವೆ. ಹೀಗೆ ಆಧ್ಯಾತ್ಮಿಕ ಸತ್ಯಗಳನ್ನು, ಆಧ್ಯಾತ್ಮಿಕ ವ್ಯಕ್ತಿಗಳಿಗೆ ವಿವರಿಸುತ್ತೇವೆ.


ಯಾರೂ ತಮ್ಮ ಕುತರ್ಕಗಳಿಂದ ನಿಮ್ಮನ್ನು ಮೋಸಗೊಳಿಸದಿರಲಿ.


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ಸರ್ವೇಶ್ವರ ಇಂತೆನ್ನುತ್ತಾರೆಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ; ಕೇಳಿಸಿದ ವಾಣಿ ಸುಳ್ಳು; ಸರ್ವೇಶ್ವರ ಅವರನ್ನು ಕಳುಹಿಸಲಿಲ್ಲ. ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


ಹೀಗೆ ಮೋಹಕ ಮಾತುಗಳಿಂದ ಒತ್ತಾಯಪಡಿಸುತ್ತಾಳೆ, ಅತಿಯಾದ ಒಲುಮೆಯಿಂದ ಪುಸಲಾಯಿಸುತ್ತಾಳೆ.


ಅದಕ್ಕೆ ಅಗ್ರಿಪ್ಪನು, “ಇಷ್ಟು ಅಲ್ಪಕಾಲದಲ್ಲೇ ನನ್ನನ್ನು ಕ್ರೈಸ್ತನನ್ನಾಗಿ ಮಾಡಬೇಕೆಂದು ಇಚ್ಛಿಸುತ್ತೀಯಾ?’ ಎಂದನು.


ಫಿಲಿಷ್ಟಿಯರ ಮುಖಂಡರು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನು ತಿಳಿದುಕೋ: ನಾವು ಅವನನ್ನು ಗೆದ್ದು, ಕಟ್ಟಿ, ಅಡಗಿಸುವ ವಿಧಾನವನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು, ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ಬೆಳ್ಳಿ ನಾಣ್ಯಗಳನ್ನು ಕೊಡುವೆವು,” ಎಂದು ಹೇಳಿದರು.


ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುತ್ತೇವೆ; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರಿಸಿದಿರೋ?” ಎಂದರು.


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ಗುಟ್ಟನ್ನು ರಟ್ಟು ಮಾಡದಿರನು ಚಾಡಿಕೋರ; ತುಟಿ ಬಿಗಿಹಿಡಿಯದವನ ಗೊಡವೆ ನಿನಗೆ ಬೇಡ.


ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ನಿರ್ಮಲ ಮನಸ್ಸು, ಸನ್ಮತಿ, ಸಹನೆ, ಸದಯತೆಯಿಂದಲೂ, ಪವಿತ್ರಾತ್ಮ, ನಿಷ್ಕಪಟ ಪ್ರೇಮ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು