Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:6 - ಕನ್ನಡ ಸತ್ಯವೇದವು C.L. Bible (BSI)

6 ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದುಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೂ ಪ್ರವೀಣರಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಇಲ್ಲದೆ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪರಿಣತರಾದ ಜನರಿಗೆ ನಾವು ಜ್ಞಾನವನ್ನೇ ಉಪದೇಶಿಸುತ್ತೇವೆ. ಇದು ಇಹಲೋಕದ ಜ್ಞಾನವೂ ಅಲ್ಲ. ಅಧಿಪತಿಗಳ ಜ್ಞಾನವೂ ಅಲ್ಲ. ಈ ಲೋಕದ ಅಧಿಪತಿಗಳು ತಮ್ಮ ಅಧಿಕಾರವನ್ನು ಕಳೆದುಕೊಳ್ಳುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗಿದ್ದರೂ ಪರಿಪೂರ್ಣರಲ್ಲಿ ಜ್ಞಾನದ ಬಗ್ಗೆ ಮಾತನಾಡುತ್ತೇವೆ. ಅದು ಇಹಲೋಕದ ಜ್ಞಾನವಲ್ಲ. ಅಳಿದು ಹೋಗುವ ಇಹಲೋಕದ ಅಧಿಕಾರಿಗಳ ಜ್ಞಾನವೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜಾಲ್ಯಾರ್ಬಿ ಮಿಯಾ ಶಾನ್‍ಪಾನಾಚಿ ಬಾತ್ಮಿ ಕೊನ್ ಆತ್ಮಿಕ್‍ ರಿತಿನ್ ವಾಡಲ್ಲೆ ಹಾತ್ ತೆಂಕಾ ಪರ್‍ಚಾರ್ ಕರ್‍ತಾ. ಖರೆ ಹೆ ಶಾನ್‍ಪಾನ್ ಹ್ಯಾ ಜಗಾಕ್ ಸಮಂದ್ ಪಡಲ್ಲೆ ನಾ ಹೊಲ್ಯಾರ್, ಹೊ ಜಗ್ ಚಾಲ್ವುತಲ್ಯಾ ಅದಿಕಾರ್‍ಯಾಕ್ನಿ ಸಮಂದ್ ಪಡಲ್ಲೆ ನ್ಹಯ್,ತೆ ಆಧಿಕಾರಿ ಅಪ್ನಾಚೊ ಅದಿಕಾರ್ ಕಳ್ದುನ್ ಘೆವ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:6
36 ತಿಳಿವುಗಳ ಹೋಲಿಕೆ  

ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.


ಅಂಥ ಜ್ಞಾನ ದೇವರಿಂದ ಬಂದ ಜ್ಞಾನವಲ್ಲ; ಅದು ಪ್ರಾಪಂಚಿಕವಾದುದು, ಪ್ರಾಕೃತವಾದುದು, ಪೈಶಾಚಿಕವಾದುದು.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ.


ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು.


ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.


ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.


ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ವ್ಯರ್ಥವಾಗಿಪನು ಪ್ರಭು ರಾಷ್ಟ್ರಯೋಜನೆಗಳನು I ನಿರರ್ಥಕವಾಗಿಪನು ಜನರ ದುಷ್ಟಸಂಕಲ್ಪಗಳನು II


ಅಧಿಪತಿಗಳಿಗೆ ಉಂಟುಮಾಡುತ್ತಾನೆ ಅವಮಾನವನ್ನು ಬಿಚ್ಚಿಬಿಡುತ್ತಾನೆ ಬಲಾಢ್ಯರ ನಡುಕಟ್ಟನ್ನು.


ಯಾಜಕರನ್ನು ಬರಿಬತ್ತಲೆಯಾಗಿ ನಡೆಸುತ್ತಾನೆ ಅಚಲ ಶಕ್ತಿಶಾಲಿಗಳನ್ನು ಕೆಡವಿಬಿಡುತ್ತಾನೆ.


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ನಾವು ಇವುಗಳನ್ನು ಮಾನವ ಜ್ಞಾನ ಪ್ರೇರೇಪಿಸಿದ ಮಾತುಗಳಿಂದ ಹೇಳುವುದಿಲ್ಲ. ದೇವರ ಆತ್ಮದಿಂದ ಪ್ರೇರಿತವಾದ ಮಾತುಗಳಿಂದ ಹೇಳುತ್ತೇವೆ. ಹೀಗೆ ಆಧ್ಯಾತ್ಮಿಕ ಸತ್ಯಗಳನ್ನು, ಆಧ್ಯಾತ್ಮಿಕ ವ್ಯಕ್ತಿಗಳಿಗೆ ವಿವರಿಸುತ್ತೇವೆ.


ಸಹೋದರರೇ, ದೇವರ ಸತ್ಯಾರ್ಥವನ್ನು ಸಾರಲು ನಿಮ್ಮಲ್ಲಿಗೆ ನಾನು ಬಂದಾಗ ವಾಕ್ಚಾತುರ್ಯವನ್ನಾಗಲಿ, ಜ್ಞಾನಾಡಂಬರವನ್ನಾಗಲಿ ಪ್ರದರ್ಶಿಸುತ್ತಾ ಬರಲಿಲ್ಲ.


“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.


ಆಗ ಯೇಸು, “ನೀನು ಸಂಪೂರ್ಣನಾಗಬೇಕು ಎಂದಿದ್ದರೆ ಹೋಗು, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ನಾಶಗೊಳಿಸುವನಾತ ದೇಶಾಧಿಪತಿಗಳನು ನಿರ್ನಾಮಗೊಳಿಸುವನು ರಾಜಾಧಿರಾಜರನು.


ನಿರಪರಾಧಿಯನ್ನು ಲಕ್ಷಿಸು, ಸತ್ಪುರುಷನನು ವೀಕ್ಷಿಸು I ಶಾಂತಿಪ್ರಿಯನಿಗಿದೆ ಸಂತಾನವೃದ್ಧಿ, ಇದ ಗಮನಿಸು II


ಉಸಿರುಹೋದುದೇ ಮರಳುತ್ತಾನವನು ಮಣ್ಣಿಗೆ I ಅಂದೇ ಅಳಿಯುತ್ತದೆ ಅವನೆಲ್ಲಾ ಯೋಜನೆ II


ಪ್ರಿಯ ಸಹೋದರರೇ, ದೇವರ ಆತ್ಮವನ್ನು ಪಡೆದವರೊಡನೆ ಮಾತನಾಡಿದಂತೆ ನಿಮ್ಮೊಡನೆ ನಾವು ಮಾತನಾಡಲಿಲ್ಲ. ಲೌಕಿಕರು ನೀವು; ಕ್ರಿಸ್ತಯೇಸುವಿನಲ್ಲಿ ಹಸುಗೂಸುಗಳು ನೀವು ಎಂದು ಭಾವಿಸಿ ನಿಮ್ಮೊಡನೆ ಮಾತನಾಡಬೇಕಾಯಿತು.


ಪವಿತ್ರಾತ್ಮ ಮುಖಾಂತರ ಒಬ್ಬನಿಗೆ ಜ್ಞಾನೋಕ್ತಿಗಳು, ಇನ್ನೊಬ್ಬನಿಗೆ ಅವರ ಮುಖಾಂತರವೇ ವಿದ್ಯೋಕ್ತಿಗಳು ಲಭಿಸುತ್ತವೆ;


ನಾವು ಪ್ರಚಾರಮಾಡುವ ಶುಭಸಂದೇಶ ಕೆಲವರಿಗೆ ಇನ್ನೂ ಮುಸುಕಿನ ಮರೆಯಾಗಿದ್ದರೆ, ಹಾಗಿರುವುದು ವಿನಾಶ ಮಾರ್ಗದಲ್ಲಿರುವವರಿಗೆ ಮಾತ್ರ.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಆದುದರಿಂದ ಕ್ರಿಸ್ತಯೇಸುವನ್ನು ಕುರಿತಾದ ಪ್ರಾಥಮಿಕ ಪಾಠಗಳಲ್ಲೇ ನಿಂತುಬಿಡದೆ ಪ್ರೌಢ ವಿಷಯಗಳತ್ತ ಸಾಗೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು