Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:1 - ಕನ್ನಡ ಸತ್ಯವೇದವು C.L. Bible (BSI)

1 ಪ್ರಿಯ ಸಹೋದರರೇ, ದೇವರ ಆತ್ಮವನ್ನು ಪಡೆದವರೊಡನೆ ಮಾತನಾಡಿದಂತೆ ನಿಮ್ಮೊಡನೆ ನಾವು ಮಾತನಾಡಲಿಲ್ಲ. ಲೌಕಿಕರು ನೀವು; ಕ್ರಿಸ್ತಯೇಸುವಿನಲ್ಲಿ ಹಸುಗೂಸುಗಳು ನೀವು ಎಂದು ಭಾವಿಸಿ ನಿಮ್ಮೊಡನೆ ಮಾತನಾಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದರೆ ಸಹೋದರರೇ ನಾನಂತೂ ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ನಾನಂತೂ ದೇವರಾತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತಾಡಲಾರದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತಾಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ನಾನು ಆತ್ಮಿಕ ಜನರೊಂದಿಗೆ ಮಾತಾಡುವಂತೆ ಮೊದಲು ನಿಮ್ಮೊಂದಿಗೆ ಮಾತಾಡಲಾಗಲಿಲ್ಲ. ಪ್ರಾಪಂಚಿಕರೂ ಕ್ರಿಸ್ತನಲ್ಲಿ ಎಳೆಕೂಸುಗಳೂ ಆಗಿರುವಂಥವರೊಂದಿಗೆ ಮಾತಾಡುವಂತೆ ನಾನು ನಿಮ್ಮೊಂದಿಗೆ ಮಾತಾಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ನೀವು ದೇವರಾತ್ಮರಿಗೆ ತಕ್ಕಂತೆ ಬಾಳುವವರಾಗಿ ನಾನು ನಿಮ್ಮ ಸಂಗಡ ಮಾತನಾಡುತ್ತಾ ಇಲ್ಲ. ನೀವು ಇನ್ನೂ ಕ್ರಿಸ್ತ ಯೇಸುವಿನಲ್ಲಿ ಕೂಸುಗಳೂ ಪ್ರಾಪಂಚಿಕರೂ ಆಗಿರುವಿರೆಂದು ಭಾವಿಸಿ ನಿಮ್ಮ ಸಂಗಡ ಮಾತನಾಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಭಾವಾನು ಅನಿ ಭೆನಿಯಾನು ಮಿಯಾ ತುಮ್ಚ್ಯಾಕ್ಡೆ ಆತ್ಮ್ಯಾನ್ ಭರುನ್ ಹೊತ್ತ್ಯಾ ಲೊಕಾಂಚೆಕ್ಡೆ ಬೊಲಲ್ಲ್ಯಾ ಸಾರ್ಕೆ ಬೊಲುಕ್ ನಾ, ಕ್ರಿಸ್ತಾಚ್ಯಾ ವಿಶ್ವಾಸಾತ್ ಬಾರಿಕ್ ಪೊರಾ ಸಾರ್ಕೆ ಅಸಲ್ಲ್ಯಾ ಹ್ಯಾ ಜಗಾತ್ಲ್ಯಾ ಲೊಕಾಂಚ್ಯಾ ಸಾರ್ಕೆ ಬೊಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:1
11 ತಿಳಿವುಗಳ ಹೋಲಿಕೆ  

ಹಾಲು ಕುಡಿಯಬೇಕಾದವನು ಹಸುಗೂಸು. ನ್ಯಾಯನೀತಿಯ ಅನುಭವ ಅವನಿಗಿಲ್ಲ.


ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದುಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ಧರ್ಮಶಾಸ್ತ್ರ ಪಾರಮಾರ್ಥಿಕವಾದುದೆಂದು ನಾವು ಬಲ್ಲೆವು. ನಾನಾದರೋ ನರಮಾನವನು; ಪಾಪಕ್ಕೆ ನನ್ನನ್ನೇ ಗುಲಾಮನನ್ನಾಗಿ ಮಾರಿಕೊಂಡವನು.


ಬರೆಯುತಿಹೆನು ಪ್ರಿಯಮಕ್ಕಳಿರಾ, ಇದನ್ನು ಏಕೆನೆ, ಕ್ರಿಸ್ತನಾಮದ ನಿಮಿತ್ತ ಕ್ಷಮಿಸಲಾಯಿತು ನಿಮ್ಮ ಪಾಪಗಳನ್ನು.


ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು.


ನಿಮ್ಮಲ್ಲಿ ಯಾರಾದರೊಬ್ಬನು ತಾನು ದೇವರ ವಾಕ್ಯವನ್ನು ಬೋಧಿಸುವವನು ಅಥವಾ ಪವಿತ್ರಾತ್ಮ ಪ್ರೇರಣೆಯನ್ನು ಹೊಂದಿದವನು ಎಂದು ಭಾವಿಸುವುದಾದರೆ, ನಾನು ನಿಮಗೆ ಬರೆದಿರುವುದೆಲ್ಲ ಪ್ರಭುವಿನ ಆಜ್ಞೆಯೆಂದು ಚೆನ್ನಾಗಿ ತಿಳಿದುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು