Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:13 - ಕನ್ನಡ ಸತ್ಯವೇದವು C.L. Bible (BSI)

13 ಅವನವನ ಕೆಲಸದ ಗುಣವು ಕಡೆಯ ದಿನ ಬಟ್ಟಬಯಲಾಗುವುದು. ಯೇಸುಕ್ರಿಸ್ತರ ಆ ದಿನವು ಬೆಂಕಿಯ ದಿನವಾಗಿ ಪ್ರಜ್ವಲಿಸುವುದು. ಪ್ರತಿಯೊಬ್ಬನ ಕೆಲಸವನ್ನು ಆ ಬೆಂಕಿ ಪರೀಕ್ಷಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಪ್ರತಿಯೊಬ್ಬನ ಕೆಲಸವು ಸ್ಪಷ್ಟವಾಗಿ ಕಾಣುವುದು; ಏಕೆಂದರೆ, ಕ್ರಿಸ್ತನು ಬರುವ ದಿನವು ಅದನ್ನು ಸ್ಪಷ್ಟಪಡಿಸುವುದು. ಆ ದಿನವು ಬೆಂಕಿಯೊಂದಿಗೆ ಉದಯಿಸುವುದು. ಆ ಬೆಂಕಿಯು ಪ್ರತಿಯೊಬ್ಬ ವ್ಯಕ್ತಿಯ ಕೆಲಸವನ್ನು ಪರೀಕ್ಷಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕ್ರಿಸ್ತ ಯೇಸುವಿನ ದಿನವು ಇದನ್ನು ಬಹಿರಂಗಕ್ಕೆ ತರುವಾಗ, ಅವನವನ ಕೆಲಸವು ಏನಾಗಿರುವುದೆಂಬುದು ವ್ಯಕ್ತವಾಗುವುದು. ಏಕೆಂದರೆ ಅದು ಬೆಂಕಿಯಿಂದ ಪ್ರಕಟವಾಗುವುದು. ಪ್ರತಿಯೊಬ್ಬನ ಕೆಲಸದ ಯೋಗ್ಯತೆಯನ್ನು ಬೆಂಕಿಯೇ ಪರೀಕ್ಷಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಹರಿ ಎಕ್ಲ್ಯಾಚೆ ಕಾಮ್ ದಾಕ್ವುನ್ ದಿವ್ನ್ ಹೊತಾ, ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತಾಚೊ ದಿಸ್ ತಿ ಕಾಮಾ ಉಜ್ವೊಡಾಕ್ ಹಾನ್ತಾ. ತೊ ದಿಸ್ ಆಗಿಚೊ ದಿಸ್ ಅನಿ ತಿ ಆಗ್ ಹರಿಎಕ್ ಮಾನ್ಸಾಚ್ಯಾ ಕಾಮಾ ದಾಕ್ವುನ್ ದಿತಾ ಅನಿ ತ್ಯಾ ಆಗಿನ್ ಪರಿಕ್ಷಾ ಕರುನ್ ಹೊತಾ ಅನಿ ತೆ ಕಾಮಾಚೆ ಬರೆಪಾನ್ ದಾಕ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:13
28 ತಿಳಿವುಗಳ ಹೋಲಿಕೆ  

ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಪ್ರಿಯರೇ, ಪರಿಶೋಧನೆಗೆಂದು ನಿಮಗೆ ಬಂದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸಂಭವಿಸಿಬಿಟ್ಟಿತೆಂದು ವಿಸ್ಮಯಪಡಬೇಡಿ.


ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ಅಂತಿಮ ದಿನದಂದು ಪ್ರಭು ಯೇಸು ಆತನಿಗೆ ಕರುಣೆತೋರಲಿ. ನಾನು ಏಷ್ಯಾದಲ್ಲಿದ್ದಾಗ ಆತನು ನನಗೆ ಎಷ್ಟೊಂದು ನೆರವು ನೀಡಿದನೆಂದು ನಿನಗೆ ಚೆನ್ನಾಗಿ ತಿಳಿದಿದೆ.


ನಮ್ಮ ಪ್ರಭು ಯೇಸುಕ್ರಿಸ್ತರ ದಿನದಂದು ನೀವು ನಿರ್ದೋಷಿಗಳಾಗಿರುವಂತೆ ಆ ದೇವರೇ, ನಿಮ್ಮನ್ನು ಕಡೆಯವರೆಗೂ ಸ್ಥಿರವಾಗಿ ಕಾಪಾಡುವರು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇವರು ನನ್ನ ಜನರು; ನಾನು ಕಾರ್ಯತತ್ಪರನಾಗುವ ದಿನದಂದು ಅವರು ನನಗೆ ಸ್ವಕೀಯಜನರಾಗಿರುವರು. ತಂದೆಯೊಬ್ಬನು ತನಗೆ ಸೇವೆಮಾಡುವ ಮಗನನ್ನು ಕಾಪಾಡುವಂತೆ ನಾನು ಅವರನ್ನು ಕಾಪಾಡುವೆನು.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


(ನಿನ್ನ ವಿಷಯದಲ್ಲಿ ಹೇಳುವುದಾದರೆ, ದುಃಖವೆಂಬ ಅಲಗೊಂದು ನಿನ್ನ ಅಂತರಂಗವನ್ನು ಸೀಳುವುದು,)” ಎಂದು ಹೇಳಿದನು.


ದುರ್ಮತಿಗಳೂ ವಿಶ್ವಾಸಭ್ರಷ್ಟರೂ ಆಗಿದ್ದಾರೆ. ಆದರೆ ಅವರ ಮೂರ್ಖತನ ದೀರ್ಘಕಾಲ ಬಾಳದು. ಯನ್ನ ಮತ್ತು ಯಂಬ್ರಳ ದೋಷದಂತೆ ಅದು ಸರ್ವರಿಗೂ ಬಟ್ಟಬಯಲಾಗುತ್ತದೆ.


ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ? ನನ್ನ ವಾಕ್ಯ ಬೆಂಕಿಗೆ ಸಮಾನ; ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ. ಇದು ಸರ್ವೇಶ್ವರನಾದ ನನ್ನ ನುಡಿ.


ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ.


“ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು?


ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಈ ಅಸ್ತಿವಾರದ ಮೇಲೆ ಕೆಲವರು ಚಿನ್ನ, ಬೆಳ್ಳಿ, ರತ್ನ - ಇವುಗಳನ್ನು ಉಪಯೋಗಿಸ ಕಟ್ಟುತ್ತಾರೆ. ಮತ್ತೆ ಕೆಲವರು ಹುಲ್ಲು, ಕಟ್ಟಿಗೆ, ಜೊಂಡು - ಇವುಗಳನ್ನು ಬಳಸುತ್ತಾರೆ.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ಸಭೆ ಸೇರುವ ರೂಢಿಯನ್ನು ಕೆಲವರು ಕೈಬಿಟ್ಟಿದ್ದಾರೆ. ನಾವು ಹಾಗೆ ಮಾಡದಿರೋಣ. ನಿಮಗೆ ತಿಳಿದಿರುವಂತೆ ಪ್ರಭು ಪ್ರತ್ಯಕ್ಷರಾಗುವ ದಿನವು ಸಮೀಪಿಸುತ್ತಿರುವುದರಿಂದ ಮತ್ತಷ್ಟು ಹೆಚ್ಚಾಗಿ ಒಬ್ಬರನ್ನೊಬ್ಬರು ಪ್ರೋತ್ಸಾಹಿಸೋಣ.


ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು