Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:19 - ಕನ್ನಡ ಸತ್ಯವೇದವು C.L. Bible (BSI)

19 ಇಹಲೋಕಪ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. “ದೇವರು ಜ್ಞಾನಿಗಳನ್ನು ಅವರ ಜಾಲದಲ್ಲಿಯೇ ಸಿಕ್ಕಿಸುವರು” ಎಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯಾಕಂದರೆ ಇಹಲೋಕ ಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಳ್ಳುತ್ತಾನೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಏಕೆಂದರೆ ಈ ಲೋಕದ ಜ್ಞಾನವು ದೇವರಿಗೆ ಮೂರ್ಖತನವಾಗಿದೆ. “ದೇವರು ಜಾಣರನ್ನು ಅವರ ಕುತಂತ್ರದ ಮಾರ್ಗಗಳಲ್ಲೇ ಹಿಡಿದುಕೊಳ್ಳುವನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ ಇಹಲೋಕ ಜ್ಞಾನವು ದೇವರ ದೃಷ್ಟಿಯಲ್ಲಿ ಮೂರ್ಖತನವಾಗಿದೆ, ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, “ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುವರು,” ಎಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಶ್ಯಾಕ್ ಮಟ್ಲ್ಯಾರ್, ಹ್ಯಾ ಜಗಾಚೆ ಶಾನ್‍ಪಾನ್ ದೆವಾಚ್ಯಾ ನದ್ರೆಕ್ ಬುದ್ದನಸಲ್ಲ್ಯಾ ಸಾರ್ಕೆ ಹಾಯ್. ಪವಿತ್ರ್ ಪುಸ್ತಕ್ ಸಾಂಗ್ತಾ “ದೆವ್ ಶಾನ್ಯಾಕ್ನಿ ತೆಂಚ್ಯಾಚ್ ಚಾಲಾಕಿಪಾನಾತ್ ಶಿರ್ಕುನ್ ಘಾಲ್ತಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:19
22 ತಿಳಿವುಗಳ ಹೋಲಿಕೆ  

ನಿರರ್ಥಕಗೊಳಿಸುತ್ತಾನೆ ವಕ್ರಿಗಳ ತಂತ್ರೋಪಾಯಗಳನು ಸಿಕ್ಕಿಸಿಬಿಡುತ್ತಾನೆ ಅವರವರ ಯೋಜನೆಗಳಲ್ಲೆ ಜ್ಞಾನಿಗಳನು.


ದುರುಳರೊಡ್ಡಿದ ಉರುಲಲಿ ಆ ದುರುಳರೆ ಸಿಕ್ಕಿಬೀಳಲಿ I ನಾನಾದರೊ ನುಗ್ಗಿ ನಡೆವೆನು ಸುರಕ್ಷಿತವಾಗಿಯೆ ಅಲ್ಲಿ II


ಸುಳ್ಳುಶಕುನ ಹೇಳುವವರನು ನಿರರ್ಥಕಗೊಳಿಸುವವನು ನಾನೆ ಕಣಿ ಹೇಳುವವರನು ಮರುಳುಗೊಳಿಸುವವನು ನಾನೆ ವಿವೇಕಿಗಳೊಡನೆ ವಾದಿಸಿ ಅವರ ವಿವೇಕವೇ ಅವಿವೇಕವೆಂದು ತೋರಿಸಿದವನು ನಾನೆ.


ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದುಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ.


ಆ ದಿನಗಳಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟೇ ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಸಲಹೆಗಳನ್ನು ಮಾನ್ಯಮಾಡುತ್ತಿದ್ದರು.


ಆತ ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಈಜಿಪ್ಟಿನವರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲೇ ಅವರನ್ನು ತಗ್ಗಿಸಿದ್ದಾನೆ. ಆದ್ದರಿಂದ ಸರ್ವೇಶ್ವರ ಸ್ವಾಮಿಯೇ ಎಲ್ಲ ದೇವರುಗಳಿಗಿಂತ ದೊಡ್ಡವರೆಂದು ಈಗ ತಿಳಿದುಕೊಂಡಿದ್ದೇನೆ,” ಎಂದು ಹೇಳಿದನು.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು.


ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲ ಇಸ್ರಯೇಲರೂ, “ಅರ್ಕಿಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೆಯದಾಗಿದೆ,” ಎಂದರು. ಹೀಗೆ ಸರ್ವೇಶ್ವರ ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು, ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದರು.


ಯುದ್ಧವೇನಾದರು ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ನಾಡನ್ನು ಬಿಟ್ಟು ಪಲಾಯನ ಗೈಯಬಹುದು. ಆದ್ದರಿಂದ ಅವರು ವೃದ್ಧಿಯಾಗದಂತೆ ನಾವು ಉಪಾಯ ಹೂಡಬೇಕು,” ಎಂದು ಎಚ್ಚರಿಸಿದನು.


ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.


ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ಸಹೋದರರೇ, ನಿಮ್ಮ ಪ್ರಯೋಜನಕ್ಕಾಗಿ ಇದೆಲ್ಲವನ್ನು ನನಗೂ ಅಪೊಲೋಸನಿಗೂ ಅನ್ವಯಿಸಿ ಹೇಳಿದ್ದೇನೆ. ನೀವು ನಮ್ಮ ಆದರ್ಶವನ್ನು ಅನುಸರಿಸಬೇಕು. ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಬಾರದು. ನಿಮ್ಮಲ್ಲಿ ಯಾರೂ ಒಬ್ಬನ ಪಕ್ಷವಹಿಸಿ ಜಂಬ ಕೊಚ್ಚಿಕೊಂಡು ಮತ್ತೊಬ್ಬನನ್ನು ಕಡೆಗಣಿಸಬಾರದು.


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ಅಂಥ ಜ್ಞಾನ ದೇವರಿಂದ ಬಂದ ಜ್ಞಾನವಲ್ಲ; ಅದು ಪ್ರಾಪಂಚಿಕವಾದುದು, ಪ್ರಾಕೃತವಾದುದು, ಪೈಶಾಚಿಕವಾದುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು