Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:21 - ಕನ್ನಡ ಸತ್ಯವೇದವು C.L. Bible (BSI)

21 ಆದ್ದರಿಂದ ಕೇವಲ ನರಮಾನವರನ್ನೇ ನೆಚ್ಚಿಕೊಂಡು ಯಾರೂ ಹೆಚ್ಚಳಪಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ ಸಮಸ್ತವೂ ನಿಮಗಾಗಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದ್ದರಿಂದ ನೀವು ಜನರ ಬಗ್ಗೆ ಹೆಚ್ಚಳಪಡಬಾರದು. ಸಮಸ್ತವೂ ನಿಮ್ಮದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದಕಾರಣ ಇನ್ನು ಮೇಲೆ ನಾಯಕರ ಬಗ್ಗೆ ಯಾರೂ ಹೊಗಳುವುದು ಬೇಡ! ಏಕೆಂದರೆ ಸಮಸ್ತವೂ ನಿಮ್ಮದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತಸೆಮನುನ್ ಮಾನ್ಸಾಚ್ಯಾ ವಿಶಯಾತ್ ಕೊನ್‍ಬಿ ಬಡಾಯ್ ಚಿಂತುಚೆ ನ್ಹಯ್, ಸಗ್ಳೆಬಿ ತುಮ್ಚೆಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:21
12 ತಿಳಿವುಗಳ ಹೋಲಿಕೆ  

ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ಸಹೋದರರೇ, ನಿಮ್ಮ ಪ್ರಯೋಜನಕ್ಕಾಗಿ ಇದೆಲ್ಲವನ್ನು ನನಗೂ ಅಪೊಲೋಸನಿಗೂ ಅನ್ವಯಿಸಿ ಹೇಳಿದ್ದೇನೆ. ನೀವು ನಮ್ಮ ಆದರ್ಶವನ್ನು ಅನುಸರಿಸಬೇಕು. ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಬಾರದು. ನಿಮ್ಮಲ್ಲಿ ಯಾರೂ ಒಬ್ಬನ ಪಕ್ಷವಹಿಸಿ ಜಂಬ ಕೊಚ್ಚಿಕೊಂಡು ಮತ್ತೊಬ್ಬನನ್ನು ಕಡೆಗಣಿಸಬಾರದು.


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ಜಯಶಾಲಿಯಾದವನು ಆಗುವನು ಇದಕ್ಕೆಲ್ಲಾ ಬಾಧ್ಯನು ನಾನವನಿಗೆ ದೇವನಾಗಿರುವೆನು ಅವನೆನಗೆ ಪುತ್ರನಾಗಿರುವನು.


ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ, ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ.


ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ.


ಇದೆಲ್ಲವೂ ನಿಮ್ಮ ಒಳಿತಿಗಾಗಿಯೇ. ಹೀಗೆ ಅನೇಕರಲ್ಲಿ ದೇವರ ವರಪ್ರಸಾದವು ಉಕ್ಕಿ ಹರಿಯುವುದು; ಅವರಲ್ಲಿ ಕೃತಜ್ಞತಾಭಾವನೆಯನ್ನು ಹೆಚ್ಚಿಸುವುದು; ಇದರಿಂದಾಗಿ ದೇವರ ಮಹಿಮೆ ಬೆಳಗುವುದು.


ಸುಡಾನನ್ನು ನೆಚ್ಚಿಕೊಂಡಿದ್ದವರು ಮತ್ತು ಈಜಿಪ್ಟನ್ನು ಕುರಿತು ಕೊಚ್ಚಿಕೊಳ್ಳುತ್ತಿದ್ದವರು ನಾಚಿಕೆಪಟ್ಟು ನಿರಾಶೆಗೊಳ್ಳುವರು.


ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು