Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:23 - ಕನ್ನಡ ಸತ್ಯವೇದವು C.L. Bible (BSI)

23 ಆದರೆ ನೀವು ಕ್ರಿಸ್ತಯೇಸುವಿಗೆ ಸೇರಿದವರು; ಕ್ರಿಸ್ತಯೇಸು ದೇವರಿಗೆ ಸೇರಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರಿನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀವು ಕ್ರಿಸ್ತನಿಗೆ ಸೇರಿದವರಾಗಿದ್ದೀರಿ. ಕ್ರಿಸ್ತನು ದೇವರಿಗೆ ಸೇರಿದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀವು ಕ್ರಿಸ್ತ ಯೇಸುವಿನವರು, ಕ್ರಿಸ್ತ ಯೇಸು ದೇವರವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ತುಮಿ ಕ್ರಿಸ್ತಾಚೆ ಅನಿ ಕ್ರಿಸ್ತ್ ದೆವಾಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:23
16 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಆಗಿದ್ದೀರಿ; ದೈವವಾಗ್ದಾನದ ಪ್ರಕಾರ ವಾರಸುದಾರರೂ ಆಗಿದ್ದೀರಿ.


ಈ ಭಾಗ್ಯವನ್ನು ಒಬ್ಬೊಬ್ಬನೂ ಕ್ರಮಬದ್ಧ ರೀತಿಯಲ್ಲಿ ಪಡೆಯತ್ತಾನೆ. ಪ್ರಪ್ರಥಮ ಫಲವಾಗಿ ಕ್ರಿಸ್ತಯೇಸುವೇ ಜೀವಂತರಾದರು. ಅನಂತರ, ಕ್ರಿಸ್ತಯೇಸುವಿಗೆ ಸೇರಿದವರು ಯೇಸು ಪುನರಾಗಮಿಸುವಾಗ ಜೀವಂತರಾಗುತ್ತಾರೆ.


ಒಂದು ವಿಷಯ ನಿಮಗೆ ತಿಳಿದಿರಲಿ. ಪ್ರತಿಯೊಬ್ಬ ವ್ಯಕ್ತಿಗೂ ಕ್ರಿಸ್ತಯೇಸುವೇ ಶಿರಸ್ಸು. ಪ್ರತಿಯೊಬ್ಬ ಸ್ತ್ರೀಗೂ ಪುರುಷನೇ ಶಿರಸ್ಸು. ಕ್ರಿಸ್ತೇಸುವಿಗೆ ದೇವರೇ ಶಿರಸ್ಸು.


ನೀವು ನನ್ನನ್ನು ಲೋಕಕ್ಕೆ ಕಳಿಸಿದಂತೆ ನಾನು ಇವರನ್ನು ಲೋಕಕ್ಕೆ ಕಳಿಸಿದ್ದೇನೆ.


ನೀವು ಹೊರಗಿನ ತೋರಿಕೆಗಳನ್ನು ಗಮನಿಸುವಂತವರು. ಯಾರಾದರೂ ತಾನು ಕ್ರಿಸ್ತಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ಅವನು ಮತ್ತೆ ತನ್ನನ್ನೇ ಪರೀಕ್ಷಿಸಿ ನೋಡಲಿ. ಏಕೆಂದರೆ, ಅವನಂತೆಯೇ ನಾವೂ ಕ್ರಿಸ್ತಯೇಸುವಿಗೆ ಸೇರಿದವರು.


ನಾವು ಬದುಕಿದರೂ ಸತ್ತರೂ ಪ್ರಭುವಿಗೆ ಸೇರಿದವರು.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.


ಆದರೆ ನಮಗೆ ಒಬ್ಬರೇ ದೇವರು. ಅವರು ನಮ್ಮ ಪರಮ ಪಿತ; ಎಲ್ಲ ಸೃಷ್ಟಿಗೂ ಮೂಲಕರ್ತ, ನಾವಿರುವುದು ಅವರಿಗಾಗಿಯೇ. ನಮಗೆ ಒಬ್ಬರೇ ಪ್ರಭು; ಅವರೇ ಯೇಸುಕ್ರಿಸ್ತ. ಅವರ ಮುಖಾಂತರವೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ಪ್ರಭುವಿನಿಂದ ಕರೆಹೊಂದಿದವನು ದಾಸನಾಗಿದ್ದರೂ ಪ್ರಭುವಿನಲ್ಲಿ ಅವನು ಸ್ವತಂತ್ರನೆ. ಅದೇ ಮೇರೆಗೆ ಸ್ವತಂತ್ರನಾದವನು ಕ್ರಿಸ್ತಯೇಸುವಿನಿಂದ ಕರೆಹೊಂದಿದ್ದರೆ ಅವನು ಕ್ರಿಸ್ತಯೇಸುವಿನ ದಾಸನೇ ಆಗುತ್ತಾನೆ.


ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ:


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಎಲ್ಲವೂ ಕ್ರಿಸ್ತಯೇಸುವಿಗೆ ಅಧೀನವಾದಾಗ ಪುತ್ರನಾದ ಅವರೇ, ಎಲ್ಲವನ್ನು ತನಗೆ ಅಧೀನಪಡಿಸಿದ ದೇವರಿಗೆ ಅಧೀನರಾಗುತ್ತಾರೆ. ಆಗ ದೇವರು ಸರ್ವರಿಗೆ ಸರ್ವಸ್ವವೂ ಆಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು