1 ಕೊರಿಂಥದವರಿಗೆ 3:3 - ಕನ್ನಡ ಸತ್ಯವೇದವು C.L. Bible (BSI)3 ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯಾಕಂದರೆ ಇನ್ನೂ ಶರೀರಾಧೀನಸ್ವಭಾವವುಳ್ಳವರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು ಜಗಳಗಳು ಇರುವಲ್ಲಿ ನೀವು ಶರೀರಾಧೀನಸ್ವಭಾವವುಳ್ಳವರಾಗಿದ್ದು ಕೇವಲ ನರಪ್ರಾಣಿಗಳಂತೆ ನಡೆಯುತ್ತೀರಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೀವಿನ್ನೂ ಆತ್ಮಿಕರಾಗಿಲ್ಲ. ನಿಮ್ಮ ನಡುವೆ ಹೊಟ್ಟೆಕಿಚ್ಚಿದೆ; ವಾಗ್ವಾದಗಳಿವೆ; ಜಗಳಗಳಿವೆ. ನೀವು ಆತ್ಮಿಕರಲ್ಲವೆಂಬುದನ್ನು ಇವು ಸೂಚಿಸುತ್ತವೆ. ನೀವು ಲೋಕದ ಜನರಂತೆಯೇ ವರ್ತಿಸುತ್ತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ಹೇಗೆಂದರೆ, ನಿಮ್ಮೊಳಗೆ ಅಸೂಯೆ, ಜಗಳಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದೀರಲ್ಲದೆ ಕೇವಲ ಮಾನವರಂತೆ ನಡೆಯುತ್ತೀರಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತುಮಿ ಅಜುನ್ ಬಿ ಹ್ಯಾ ಜಗಾತ್ಲ್ಯಾ ಲೊಕಾಂಚ್ಯಾ ಸಾರ್ಕೆ ಹಾಸಿ, ಕಶ್ಯಾಕ್ ಮಟ್ಲ್ಯಾರ್ ಅಜುನ್ ತುಮ್ಚೆ ಮದ್ದಿ ಕುಸ್ಡೆಪಾನ್ ಅನಿ ಝಗ್ಡೆ ಹಾತ್ ಅಶೆ ರ್‍ಹಾತಾನಾ, ತುಮಿ ಹ್ಯಾ ಜಗಾತ್ ಹೊತ್ತ್ಯಾ ಲೊಕಾಂಚ್ಯಾ ಸಾರ್ಕೆ ಹೊಯ್ ನ್ಹಯ್? ಸಾದಾರನ್ ಮಾನ್ಸಾಂಚ್ಯಾ ಬಾಸೆನ್ ಜಿವನ್ ಕರಿನಾ ಹೊಲ್ಯಾಸಿ ಕಾಯ್? ಅಧ್ಯಾಯವನ್ನು ನೋಡಿ |