Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:5 - ಕನ್ನಡ ಸತ್ಯವೇದವು C.L. Bible (BSI)

5 ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹಾಗಾದರೆ ಅಪೊಲ್ಲೋಸನು ಏನು? ಪೌಲನು ಏನು? ಅವರು ಸೇವಕರು; ಅವರ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಪೊಲ್ಲೋಸನು ಮುಖ್ಯವಾದವನೇ? ಇಲ್ಲ! ಪೌಲನು ಮುಖ್ಯವಾದವನೇ? ಇಲ್ಲ! ನೀವು ನಂಬಿಕೊಳ್ಳಲು ಸಹಾಯ ಮಾಡುವ ನಾವು ಕೇವಲ ದೇವರ ಸೇವಕರಾಗಿದ್ದೇವೆ. ದೇವರು ನಮಗೆ ಕೊಟ್ಟ ಕೆಲಸವನ್ನು ನಮ್ಮಲ್ಲಿ ಪ್ರತಿಯೊಬ್ಬರೂ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಾಗಾದರೆ, ಅಪೊಲ್ಲೋಸನು ಯಾರು? ಪೌಲನು ಯಾರು? ಅವನವನಿಗೆ ಕರ್ತದೇವರು ನೇಮಿಸಿದ ಕಾರ್ಯದ ಪ್ರಕಾರ ಅವರವರ ಮುಖಾಂತರ ನೀವು ನಂಬಿದ್ದೀರಿ. ಅವರು ಕೇವಲ ಸೇವಕರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಶೆ ರ್‍ಹಾತಾನಾ ಅಪೊಲ್ಲೊ ಕೊನ್? ಪಾವ್ಲು ಕೊನ್? ಅಮಿ ಖಾಲಿ ದೆವಾಚಿ ಸೆವಕಾ, ತೆಚ್ಯಾಚ್ ವೈನಾ ತುಮಿ ವಿಶ್ವಾಸಾಕ್ ಯೆಲ್ಯಾಶಿ ಅಮಿ ಹರಿ ಎಕ್ಲೊ ಧನಿಯಾನ್ ಅಮ್ಕಾ ದಿಲ್ಲೆ ಕಾಮ್ ಕರ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:5
30 ತಿಳಿವುಗಳ ಹೋಲಿಕೆ  

ಬದಲಿಗೆ, ಎಲ್ಲ ವಿಷಯಗಳಲ್ಲೂ ದೇವರ ದಾಸರೆಂದು ತೋರಿಸಿಕೊಳ್ಳುತ್ತೇವೆ. ಕಷ್ಟಸಂಕಟಗಳಲ್ಲೂ ದುಃಖದುರಿತಗಳಲ್ಲೂ ತಾಳ್ಮೆಯಿಂದ ವರ್ತಿಸಿದ್ದೇವೆ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ದೇವರ ವಿವಿಧ ವರಗಳ ವಿಷಯದಲ್ಲಿ ಉತ್ತಮ ನಿರ್ವಾಹಕನಂತೆ ಪ್ರತಿಯೊಬ್ಬನೂ ದೇವರು ತನಗೆ ಕೊಟ್ಟಿರುವ ವಿಶೇಷ ವರದಾನಗಳನ್ನು ಇತರರ ಒಳಿತಿಗಾಗಿ ಬಳಸಲಿ.


ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂಥ ಸಾಮರ್ಥ್ಯವನ್ನು ನೀಡಿದವರು ದೇವರೇ. ಈ ಒಡಂಬಡಿಕೆ ಲಿಖಿತ ಶಾಸನಕ್ಕೆ ಸಂಬಂಧಿಸಿದ್ದಲ್ಲ, ಪವಿತ್ರಾತ್ಮರಿಗೆ ಸಂಬಂಧಿಸಿದ್ದು. ಲಿಖಿತವಾದುದು ಮೃತ್ಯುಕಾರಕವಾದುದು; ಪವಿತ್ರಾತ್ಮ ಸಂಬಂಧವಾದುದು ಸಜ್ಜೀವದಾಯಕವಾದುದು.


ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ.


ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ.


ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ.


ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ.


ದೇವರು ನನಗಿತ್ತ ವರದಾನಗಳಿಗೆ ಅನುಸಾರವಾಗಿ ನಾನು ಚತುರಶಿಲ್ಪಿಯಂತೆ ಅಸ್ತಿವಾರ ಹಾಕಿದೆ. ಇನ್ನೊಬ್ಬನು ಅದರ ಮೇಲೆ ಕಟ್ಟುತ್ತಿದ್ದಾನೆ. ಆದರೆ ಕಟ್ಟುವ ಪ್ರತಿಯೊಬ್ಬನು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಲಿ.


ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.


ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ.


ಆದ್ದರಿಂದ ನೆಡುವವನಾಗಲಿ, ನೀರೆರೆಯುವವನಾಗಲಿ ಪ್ರಮುಖನಲ್ಲ; ಬೆಳವಣಿಗೆ ನೀಡುವ ದೇವರೇ ದೊಡ್ಡವರು.


ಅದಕ್ಕೆ ಯೊವಾನ್ನನು, “ದೇವರು ದಯಪಾಲಿಸದೆ ಹೋದರೆ ಮಾನವನಿಗೇನೂ ದಕ್ಕದು.


ಪ್ರಾರಂಭದಿಂದ ಕಣ್ಣಾರೆ ಕಂಡು ಶುಭಸಂದೇಶವನ್ನು ಸಾರಿದವರಿಂದಲೇ ನಾವು ಕೇಳಿದ ಘಟನೆಗಳವು.


ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು - ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ.


ದೇವರು ನನ್ನನ್ನು ಧರ್ಮಸಭೆಯ ದಾಸನನ್ನಾಗಿ ನೇಮಿಸಿದ್ದಾರೆ. ನಿಮ್ಮ ಹಿತಕ್ಕಾಗಿ ಒಂದು ಮಹತ್ವದ ಕಾರ್ಯವನ್ನು ನನಗೆ ವಹಿಸಿರುತ್ತಾರೆ.


ಈ ಶುಭಸಂದೇಶಕ್ಕೆ ದಾಸನನ್ನಾಗಿ ದೇವರು ನನ್ನನ್ನು ನೇಮಿಸಿದ್ದಾರೆ. ತಮ್ಮ ಪ್ರಭಾವಮಯ ಶಕ್ತಿಯಿಂದ ಈ ವಿಶೇಷ ವರವನ್ನು ಉಚಿತವಾಗಿ ನನಗೆ ದಯಪಾಲಿಸಿದ್ದಾರೆ.


ಅಲೆಕ್ಸಾಂಡ್ರಿಯದ ಅಪೊಲ್ಲೋಸ್ ಎಂಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನೊಬ್ಬ ಉತ್ತಮ ಭಾಷಣಕಾರ ಹಾಗೂ ಪವಿತ್ರಗ್ರಂಥದಲ್ಲಿ ಪಾಂಡಿತ್ಯಪಡೆದವನು.


ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗ, ಪೌಲನು ಮೇಲ್ನಾಡಿನ ಪ್ರಾಂತ್ಯದ ಮಾರ್ಗವಾಗಿ ಎಫೆಸಕ್ಕೆ ಬಂದನು. ಅಲ್ಲಿ ಕೆಲವು ಮಂದಿ ಶಿಷ್ಯರನ್ನು ಕಂಡು,


ಈ ವರದಿಂದಲೇ ಯೆಹೂದ್ಯರಲ್ಲದ ಜನರಿಗೆ ನಾನು ಕ್ರಿಸ್ತಯೇಸುವಿನ ದಾಸನಾದೆ. ಯೆಹೂದ್ಯರಲ್ಲದವರು ಪವಿತ್ರಾತ್ಮರ ಮೂಲಕ ಪರಿಶುದ್ಧರಾಗಿ, ದೇವರಿಗೆ ಸಮರ್ಪಕ ಕಾಣಿಕೆಯಾಗುವಂತೆ ದೇವರ ಶುಭಸಂದೇಶವನ್ನು ಸಾರುವುದೇ ನನ್ನ ಪೂಜ್ಯಸೇವೆ, ಅದುವೇ ನನ್ನ ಯಾಜಕಸೇವೆ.


ವಾಸ್ತವವಾಗಿ ಸಮಸ್ತವೂ ನಿಮ್ಮದೇ. ಪೌಲ, ಅಪೊಲೋಸ್, ಕೇಫ - ಇವರಾಗಲಿ; ಜಗತ್ತು, ಜೀವ, ಮರಣ - ಇವುಗಳಾಗಲಿ, ಅಥವಾ ವರ್ತಮಾನ, ಭವಿಷ್ಯತ್ಕಾಲಗಳಾಗಲಿ, ಇವೆಲ್ಲವೂ ನಿಮ್ಮವೇ.


ಸಹೋದರರೇ, ಅಪೊಲೋಸನ ವಿಷಯವಾಗಿ ಹೇಳುವುದಾದರೆ, ಆತನು ಇತರ ಸಹೋದರರೊಡನೆ ನಿಮ್ಮ ಬಳಿಗೆ ಬರಬೇಕೆಂದು ನಾನು ಬಹಳವಾಗಿ ಪ್ರೋತ್ಸಾಹಿಸಿದ್ದೇನೆ. ತಕ್ಷಣವೇ ಬರಲು ಆತನಿಗೆ ಮನಸ್ಸಿಲ್ಲ; ಸದವಕಾಶ ದೊರಕಿದಾಗ ಬರುತ್ತಾನೆ.


ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಇದೆಲ್ಲಾ ಆಗುವುದು ದೇವರಿಂದ. ದೇವರು ಕ್ರಿಸ್ತಯೇಸುವಿನ ಮುಖಾಂತರ ನಮ್ಮನ್ನು ತಮ್ಮೊಡನೆ ಸಂಧಾನಪಡಿಸಿಕೊಂಡಿದ್ದಾರೆ.ಇದಲ್ಲದೆ, ಇತರರನ್ನು ಸಂಧಾನಕ್ಕೆ ತರುವ ಕಾರ್ಯವನ್ನು ನಮಗೆ ವಹಿಸಿದ್ದಾರೆ.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು