Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:7 - ಕನ್ನಡ ಸತ್ಯವೇದವು C.L. Bible (BSI)

7 ಆದ್ದರಿಂದ ನೆಡುವವನಾಗಲಿ, ನೀರೆರೆಯುವವನಾಗಲಿ ಪ್ರಮುಖನಲ್ಲ; ಬೆಳವಣಿಗೆ ನೀಡುವ ದೇವರೇ ದೊಡ್ಡವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲಾಗಿ ನೆಡುವವನಾಗಲಿ, ನೀರುಹೊಯ್ಯುವವನಾಗಲಿ ಮುಖ್ಯವಾದವನಲ್ಲ. ಬೆಳೆಸುವ ದೇವರೇ ಪ್ರಾಮುಖ್ಯವಾದಾತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರಲಾಗಿ ನೆಡುವವನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಬೀಜ ಬಿತ್ತುವವನಾಗಲಿ ನೀರು ಹಾಕುವವನಾಗಲಿ ಮುಖ್ಯನಲ್ಲ. ದೇವರೊಬ್ಬನು ಮಾತ್ರ ಮುಖ್ಯವಾದವನು, ಏಕೆಂದರೆ ಬೀಜಗಳನ್ನು ಬೆಳೆಯಿಸುವವನು ಆತನೊಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೀಗಿರಲಾಗಿ ನೆಡುವವನಾಗಲಿ, ನೀರು ಹಾಕುವವನಾಗಲಿ ಪ್ರಾಮುಖ್ಯರಾಗಿರದೆ, ಬೆಳೆಸುವ ದೇವರೇ ಬಹು ಪ್ರಾಮುಖ್ಯವಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಶೆ ರ್‍ಹಾತಾನಾ ಭಿಂಯ್ ಪೆರಲ್ಲೊ ಬಿ ಪಾನಿ ವೊತಲ್ಲೊಬಿ ಮುಖ್ಯ್ ನ್ಹಯ್, ವಾಡಿ ಸಾರ್ಕೆ ಕರಲ್ಲೊ ದೆವ್ ಎವ್ಡೊಚ್ ಮುಖ್ಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:7
12 ತಿಳಿವುಗಳ ಹೋಲಿಕೆ  

“ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು.


ಅಲ್ಪನು ತಾನು ಶ್ರೇಷ್ಠನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ, ಅಷ್ಟೆ.


ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.


ನಮಗಲ್ಲ ಹೇ ಪ್ರಭು, ನಮಗಲ್ಲ ಮಹಿಮೆ I ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ I ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ II


ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ನಿಶ್ಚಯವಾಗಿ ಆ ದೇವತೆಗಳೆಲ್ಲ ಕ್ಷುದ್ರರೇ‍ ಅವರ ಕಾರ್ಯಗಳೆಲ್ಲ ಶೂನ್ಯವೇ ಆ ಎರಕದ ಬೊಂಬೆಗಳೆಲ್ಲಾ ಬರಿ ಗಾಳಿಯೆ !


ಸಕಲ ರಾಷ್ಟ್ರಗಳು ಆತನ ದೃಷ್ಟಿಗೆ ಏನೂ ಇಲ್ಲದಂತೆ ಅವುಗಳು ಆತನ ಎಣಿಕೆಗೆ ಶುದ್ಧ ಸೊನ್ನೆಯಂತೆ.


ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ I ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ I ಅಹುದು, ನಮ್ಮ ಕಾರ್ಯಗಳೆಲ್ಲಾ ಸಫಲವಾಗಲಿ II


ನಾನು ಸಸಿಯನ್ನು ನೆಟ್ಟೆನು; ಅಪೊಲೋಸನು ನೀರೆರೆದನು; ಆದರೆ ಅದನ್ನು ಬೆಳೆಸಿದವರು ದೇವರು.


ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ. ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ.


ಹೀಗೆ ಹೊಗಳಿಕೊಳ್ಳುವ ನಾನು ಹುಚ್ಚನೇ ಸರಿ. ಆದರೆ ಇದಕ್ಕೆ ಒತ್ತಾಯಪಡಿಸಿದವರು ನೀವೇ. ನೀವೇ ನನ್ನನ್ನು ಹೊಗಳಬೇಕಾಗಿತ್ತು. ಏಕೆಂದರೆ, ನಾನು ಶೂನ್ಯಸಮಾನನಾದರೂ ಆ “ಮಹಾಪ್ರೇಷಿತರು” ಎಂದು ಹೇಳಿಕೊಳ್ಳುವವರಿಗಿಂತ ಕೀಳಾದವನಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು