Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:8 - ಕನ್ನಡ ಸತ್ಯವೇದವು C.L. Bible (BSI)

8 ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ. ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ. ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬೀಜ ಬಿತ್ತುವವನ ಮತ್ತು ನೀರನ್ನು ಹಾಕುವವನ ಉದ್ದೇಶವು ಒಂದೇ ಆಗಿದೆ. ಮತ್ತು ಪ್ರತಿಯೊಬ್ಬನಿಗೂ ಅವನವನ ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೆಡುವವನೂ ನೀರು ಹಾಕುವವನೂ ಒಂದೇ ಉದ್ದೇಶವುಳ್ಳವರಾಗಿರುತ್ತಾರೆ. ಪ್ರತಿಯೊಬ್ಬನಿಗೆ ಅವನವನ ಶ್ರಮಕ್ಕೆ ತಕ್ಕಂತೆ ಪ್ರತಿಫಲ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಪೆರಲ್ಲೊ ಅನಿ ಪಾನಿ ವೊತಲ್ಲೊ ಎಕುಚ್ ಉದ್ದೆಶಾ ಸಾಟ್ನಿ ರಾಬ್ತಾತ್, ಜಾಲ್ಯಾರ್ ಬಿ ಹರಿ ಎಕ್ಲ್ಯಾಕ್ ಅಪ್ನಾ ಅಪ್ನಾಚ್ಯಾ ಕಾಮಾಚ್ಯಾ ಪರ್‍ಕಾರ್ ತೆಂಕಾ ಮಜುರಿ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:8
25 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನಿಗೂ ದೇವರು ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುತ್ತಾರೆ.


ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.


ನಿನ್ನ ಪ್ರೀತಿ ಹೇ ಪ್ರಭು, ಅಚಲ ಹಿಮಾಚಲ I ಸರ್ವರಿಗು ನೀಡುವೆ ಕೃತ್ಯಕೆ ತಕ್ಕ ಫಲ II


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಪ್ರತಿಯೊಬ್ಬನೂ ತನ್ನ ನಡತೆಯನ್ನು ತನ್ನಷ್ಟಕ್ಕೆ ತಾನೇ ಪರಿಶೋಧಿಸಿಕೊಳ್ಳಲಿ. ತನ್ನ ನಡತೆ ಒಳಿತಾಗಿದ್ದರೆ ಹೆಮ್ಮೆಪಡಲಿ. ಆದರೆ ಇತರರೊಂದಿಗೆ ಹೋಲಿಸಿ ಹೆಮ್ಮೆಪಡಬೇಕಾಗಿಲ್ಲ.


ಕಟ್ಟಡವು ಸುಟ್ಟುಹೋಗದೆ ಅಸ್ತಿವಾರದ ಮೇಲೆ ನೆಲೆಯಾಗಿ ನಿಂತರೆ ಕಟ್ಟಿದವನಿಗೆ ಸಂಭಾವನೆ ದೊರಕುತ್ತದೆ.


ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ.


ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಅಂಜೂರವನ್ನು ಕಾಯುವವನು ಅದರ ಹಣ್ಣನ್ನು ತಿನ್ನುವನು; ಯಜಮಾನನನ್ನು ಕಾಯುವವನು ಸನ್ಮಾನವನ್ನು ಸವಿಯುವನು.


ಆದ್ದರಿಂದ ನೆಡುವವನಾಗಲಿ, ನೀರೆರೆಯುವವನಾಗಲಿ ಪ್ರಮುಖನಲ್ಲ; ಬೆಳವಣಿಗೆ ನೀಡುವ ದೇವರೇ ದೊಡ್ಡವರು.


ನಿಮಗೆ ಕ್ರಿಸ್ತಯೇಸುವಿನಲ್ಲಿ ಸಾವಿರಾರು ಮಂದಿ ಶಿಕ್ಷಕರು ಇರಬಹುದು. ಆದರೆ ನಿಮಗೆ ನಾನೊಬ್ಬನೇ ತಂದೆ. ಶುಭಸಂದೇಶದ ಮೂಲಕ ನಾನೇ ನಿಮ್ಮನ್ನು ಕ್ರಿಸ್ತಯೇಸುವಿನಲ್ಲಿ ಪಡೆದ ತಂದೆ.


ಯಾವ ಸೈನಿಕ ಸ್ವಂತ ಖರ್ಚಿನಿಂದ ಸಮರಕ್ಕೆ ನಿಲ್ಲುತ್ತಾನೆ? ಯಾವ ತೋಟಗಾರ ತನ್ನ ಸ್ವಂತ ದ್ರಾಕ್ಷಿಯ ತೋಟದಿಂದ ದ್ರಾಕ್ಷಿಯ ಫಲವನ್ನು ತಿನ್ನದಿರುತ್ತಾನೆ? ಯಾವ ಗೌಳಿಗ ತಾನು ಸಾಕಿದ ಹಸುವಿನ ಹಾಲನ್ನು ಕುಡಿಯದಿರುತ್ತಾನೆ?


ಪ್ರತಿಯೊಬ್ಬನೂ ತನ್ನ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು.


ಅದಕ್ಕೆ ರಾಜ, ‘ನೀನು ಐದು ಪಟ್ಟಣಗಳಿಗೆ ಅಧಿಪತಿಯಾಗಿರು,’ ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು