Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:1 - ಕನ್ನಡ ಸತ್ಯವೇದವು C.L. Bible (BSI)

1 ನಾವು ಕ್ರಿಸ್ತಯೇಸುವಿನ ದಾಸರೆಂದೂ ದೇವರ ಸತ್ಯಾರ್ಥಗಳ ನಂಬಿಗಸ್ಥ ನಿರ್ವಾಹಕರೆಂದೂ ಜನರು ನಮ್ಮನ್ನು ಪರಿಗಣಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ ಮನೆವಾರ್ತೆಯವರೆಂತಲೂ ಪರಿಗಣಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಜನರು ನಮ್ಮನ್ನು ಕ್ರಿಸ್ತನ ಕೈಕೆಳಗಿನವರೆಂತಲೂ ದೇವರು ತಿಳಿಸಿರುವ ಸತ್ಯಾರ್ಥಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರು ತನ್ನ ರಹಸ್ಯವಾದ ಸತ್ಯಗಳನ್ನು ನಮಗೆ ವಹಿಸಿಕೊಟ್ಟಿದ್ದಾನೆಂತಲೂ ಎಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ ನೀವು ಈ ರೀತಿಯಾಗಿ ನಮ್ಮನ್ನು ಪರಿಗಣಿಸಬೇಕು: ನಾವು ಕ್ರಿಸ್ತ ಯೇಸುವಿನ ದಾಸರೆಂತಲೂ ದೇವರ ರಹಸ್ಯಗಳ ನಂಬಿಗಸ್ತ ನಿರ್ವಾಹಕರೆಂದೂ ಪರಿಗಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಕ್ರಿಸ್ತಾಚಿ ಸೆವಕಾ ಅನಿ ದೆವಾಚ್ಯಾ ಘುಟಾಚೆ ಖರೆ ದಾಕ್ವುನ್ ದಿತಲಿ ಸೆವಕಾ ಮನುನ್ ತುಮಿ ಅಮ್ಕಾ ಮನುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:1
29 ತಿಳಿವುಗಳ ಹೋಲಿಕೆ  

ದೇವರ ವಿವಿಧ ವರಗಳ ವಿಷಯದಲ್ಲಿ ಉತ್ತಮ ನಿರ್ವಾಹಕನಂತೆ ಪ್ರತಿಯೊಬ್ಬನೂ ದೇವರು ತನಗೆ ಕೊಟ್ಟಿರುವ ವಿಶೇಷ ವರದಾನಗಳನ್ನು ಇತರರ ಒಳಿತಿಗಾಗಿ ಬಳಸಲಿ.


ಏಕೆಂದರೆ, ಸಭಾಧ್ಯಕ್ಷನು ದೇವರ ಸೇವೆಯಲ್ಲಿ ಮೇಲ್ವಿಚಾರಕನಾಗಿರುವುದರಿಂದ ನಿಂದಾರಹಿತನಾಗಿರಬೇಕು. ಆತನು ಗರ್ವಿ ಅಥವಾ ಮುಂಗೋಪಿಯಾಗಿರಬಾರದು. ಕುಡಿತವಾಗಲಿ, ಹಿಂಸಾಚಾರವಾಗಲಿ, ಹಿಂಸಾಪ್ರವೃತ್ತಿಯಾಗಲಿ ಅವನಲ್ಲಿರಬಾರದು. ಅವನು ಲಾಭಕೋರನಾಗಿರಬಾರದು.


ವಿಶ್ವಾಸದ ನಿಗೂಢರಹಸ್ಯಗಳನ್ನು ಶುದ್ಧ ಮನಸ್ಸಾಕ್ಷಿಯಿಂದ ಕಾಪಾಡಿಕೊಂಡು ಬರುವವರಾಗಿರಬೇಕು.


ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ.


ಶುಭಸಂದೇಶದ ಸತ್ಯಾರ್ಥವನ್ನು ನಿರ್ಭೀತನಾಗಿ ಸಾರಲು ಸೂಕ್ಷ್ಮವಾದ ಮಾತುಗಳನ್ನು ದೇವರು ನನಗೆ ದಯಪಾಲಿಸಲೆಂದು ನನಗೋಸ್ಕರ ಪ್ರಾರ್ಥಿಸಿರಿ.


ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತಯೇಸುವನ್ನು ಅರಿತುಕೊಳ್ಳಲು ಸಾಧ್ಯ.


“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.


ಕ್ರಿಸ್ತಯೇಸುವಿನ ರಹಸ್ಯವನ್ನು ಪ್ರಚುರಪಡಿಸಲು ನಮಗೆ ಅವಕಾಶ ದೊರಕುವಂತೆ ಪ್ರಾರ್ಥಿಸಿರಿ. ಈ ಶುಭಸಂದೇಶದ ನಿಮಿತ್ತವೇ ನಾನು ಸೆರೆಯಲ್ಲಿ ಇದ್ದೇನೆಂಬುದು ನಿಮಗೆ ತಿಳಿದಿದೆ. ನಾನು ಶುಭಸಂದೇಶವನ್ನು ಸ್ಪಷ್ಟವಾಗಿಯೂ ಸರಳವಾಗಿಯೂ ಸಾರುವಂತೆ ಪ್ರಾರ್ಥಿಸಿರಿ.


ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.


ಹಾಗೇನಾದರೂ ನಾನು ಹೊಗಳಿಕೊಳ್ಳಲು ಆಶಿಸಿದರೆ ಅದೇನು ಹುಚ್ಚುತನವಲ್ಲ. ಏಕೆಂದರೆ, ನಾನು ನುಡಿಯುತ್ತಿರುವುದು ಸತ್ಯವನ್ನೇ. ಆದರೂ ನಾನು ಹಾಗೆ ಹೊಗಳಿಕೊಳ್ಳುವುದಿಲ್ಲ. ಕಾರಣ, ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು.


ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ.


ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ.


“ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿ ಆಳುಗಳಿಗೆ ದವಸಧಾನ್ಯಗಳನ್ನು ಅಳೆದುಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಆತನು ಹೊಸದಾಗಿ ಕ್ರೈಸ್ತಧರ್ಮವನ್ನು ಅಂಗೀಕರಿಸಿದವನಾಗಿರಬಾರದು; ಇಲ್ಲದಿದ್ದರೆ ಅಹಂಕಾರದಿಂದ ಉಬ್ಬಿಕೊಂಡು ಸೈತಾನನಂತೆಯೇ ದಂಡನೆಗೆ ಗುರಿಯಾದಾನು.


ಬದಲಿಗೆ, ಎಲ್ಲ ವಿಷಯಗಳಲ್ಲೂ ದೇವರ ದಾಸರೆಂದು ತೋರಿಸಿಕೊಳ್ಳುತ್ತೇವೆ. ಕಷ್ಟಸಂಕಟಗಳಲ್ಲೂ ದುಃಖದುರಿತಗಳಲ್ಲೂ ತಾಳ್ಮೆಯಿಂದ ವರ್ತಿಸಿದ್ದೇವೆ.


ಅಪವಾದ ಹೊರಿಸಿದವರೊಡನೆ ವಿನಯದಿಂದ ವರ್ತಿಸುತ್ತೇವೆ; ಪ್ರಪಂಚದ ಪಾಲಿಗೆ ನಾವೀಗ ಕಸಕ್ಕಿಂತಲೂ ಕಡೆ; ವಿಶ್ವಕ್ಕೇ ಹೊಲಸು!


ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ.


ನಾನು ಸಾರುವ ಜ್ಞಾನ ದೇವರ ನಿಗೂಢ ಜ್ಞಾನ. ಮಾನವರಿಗೆ ಮುಚ್ಚಿಟ್ಟ ಜ್ಞಾನ. ನಮ್ಮನ್ನು ಮಹಿಮೆಗೊಳಿಸುವುದಕ್ಕಾಗಿ ಲೋಕದ ಉತ್ಪತ್ತಿಗೆ ಮೊದಲೇ ದೇವರು ನಿಯೋಜಿಸಿದ ಜ್ಞಾನ.


ಅದಕ್ಕೆ ಯೇಸು, “ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ,


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು.”


ಪ್ರಾರಂಭದಿಂದ ಕಣ್ಣಾರೆ ಕಂಡು ಶುಭಸಂದೇಶವನ್ನು ಸಾರಿದವರಿಂದಲೇ ನಾವು ಕೇಳಿದ ಘಟನೆಗಳವು.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ನಿರ್ವಾಹಕರು ಪ್ರಾಮಾಣಿಕರಾಗಿರಬೇಕಾದುದು ಅತ್ಯವಶ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು