Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:10 - ಕನ್ನಡ ಸತ್ಯವೇದವು C.L. Bible (BSI)

10 ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ಧಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾವಂತು ಕ್ರಿಸ್ತನ ನಿವಿುತ್ತ ಹುಚ್ಚರಾಗಿದ್ದೇವೆ, ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ನೀವು ಬಲಿಷ್ಠರು; ನೀವು ಮಾನಶಾಲಿಗಳು, ನಾವು ಮಾನಹೀನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾವು ಕ್ರಿಸ್ತ ಯೇಸುವಿನ ನಿಮಿತ್ತ ಮೂರ್ಖರಾಗಿದ್ದೇವೆ! ನೀವೋ ಕ್ರಿಸ್ತ ಯೇಸುವಿನಲ್ಲಿ ಬುದ್ಧಿವಂತರು, ನಾವೋ ಬಲಹೀನರು. ನೀವು ಬಲಿಷ್ಠರು, ನೀವು ಮಾನವಂತರು, ನಾವೋ ಮಾನಹೀನರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಮಿ ಕ್ರಿಸ್ತಾಸಾಟ್ನಿ ಪಿಶೆ, ತುಮಿ ಕ್ರಿಸ್ತಾಚ್ಯಾ ಎಕ್ವಟ್ಟಾ ವೈನಾ ‍ಶಾನೆ! ಅಮಿ ಬಳ್ ನಸಲ್ಲ್ಯಾ ಸಾರ್ಕೆ, ಖರೆ ತುಮಿ ತಾಕ್ತಿಚೆ! ತುಮ್ಕಾ ಮಾನ್ ಗಾವ್ತಾ, ಅಮ್ಕಾ ಅವ್ಮಾನ್ ಗಾವ್ತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:10
38 ತಿಳಿವುಗಳ ಹೋಲಿಕೆ  

ಈ ಕಾರಣ, ನಾನು ನಿಮ್ಮ ನಡುವೆ ದುರ್ಬಲನೂ ಭಯಭೀತನೂ ಆಗಿದ್ದೆ.


ಈ ರೀತಿ ಪೌಲನು ತನ್ನ ಪರವಾಗಿ ವಾದಿಸುತ್ತಿದ್ದಾಗ ಫೆಸ್ತನು, “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಗಟ್ಟಿಯಾಗಿ ಕೂಗಿದನು.


ಕೆಲವು ಎಪಿಕೂರಿಯ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರೂ ಕೂಡ ಅವನೊಡನೆ ವಾದಿಸಿದರು. ಕೆಲವರು “ಈ ಬಾಯಿಬಡುಕ ಹೇಳುವುದಾದರೂ ಏನು?” ಎಂದರು. ಪೌಲನು ಯೇಸುಸ್ವಾಮಿಯ ವಿಷಯವಾಗಿಯೂ ಪುನರುತ್ಥಾನದ ವಿಷಯವಾಗಿಯೂ ಬೋಧಿಸುತ್ತಿದ್ದುದರಿಂದ ಮತ್ತೆ ಕೆಲವರು ‘ಇವನು ವಿದೇಶೀಯ ದೇವರುಗಳ ಬಗ್ಗೆ ಮಾತನಾಡುವಂತೆ ಕಾಣುತ್ತದೆ,’ ಎಂದರು.


ಕ್ರಿಸ್ತಯೇಸುವಿನ ನಾಮದ ನಿಮಿತ್ತ ನಿಂದೆ ಅವಮಾನಗಳಿಗೆ ಗುರಿಯಾದರೆ ನೀವು ಧನ್ಯರು! ಮಹಿಮಾನ್ವಿತ ದೇವರ ಆತ್ಮವು ನಿಮ್ಮಲ್ಲಿ ನೆಲಸಿರುವುದು.


ನೀವು ನಿಜವಾಗಿ ಬಲಾಢ್ಯರಾಗಿದ್ದರೆ ನಾವು ಬಲಹೀನರಾಗಿದ್ದರೂ ನಮಗೆ ಸಂತೋಷವೇ. ನೀವು ಕ್ರೈಸ್ತವಿಶ್ವಾಸದಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಪ್ರಾರ್ಥನೆಯ ಉದ್ದೇಶ.


ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ಒಬ್ಬನು ಬಲಹೀನನಾಗಿದ್ದರೆ, ಅವನೊಡನೆ ನಾನೂ ಬಲಹೀನನೇ. ಒಬ್ಬನು ಪಾಪಕ್ಕೆ ಬಲಿಯಾದರೆ ನಾನೂ ತಾಪದಿಂದ ಕುದಿಯುತ್ತೇನೆ.


ನೀವಾದರೋ ಮಹಾ ಬುದ್ಧಿವಂತರು! ಬುದ್ಧಿಹೀನರನ್ನು ಬಹಳವಾಗಿ ಸಹಿಸಿಕೊಳ್ಳುತ್ತೀರಿ.


“ಪೌಲನ ಪತ್ರಗಳು ಪ್ರಬಲವಾದುವು, ತೀಕ್ಷ್ಣವಾದುವು; ಆದರೆ ಆತನು ಸ್ವತಃ ನಮ್ಮಲ್ಲಿಗೆ ಬಂದಾಗ ಆತನು ದುರ್ಬಲನು ಹಾಗೂ ಆತನ ಮಾತು ಸಹ ಕೆಲಸಕ್ಕೆ ಬಾರದವು,” ಎಂದು ಕೆಲವರು ಹೇಳುತ್ತಿದ್ದಾರಂತೆ.


ಆದಕಾರಣ ಸ್ಥಿರವಾಗಿ ನಿಂತಿರುವೆನೆಂದು ಕೊಚ್ಚಿಕೊಳ್ಳುವವನೇ, ಕುಸಿದುಬೀಳದಂತೆ ಎಚ್ಚರಿಕೆಯಿಂದಿರು.


ಈಗಾಗಲೇ ನೀವು ಸಂತೃಪ್ತರಾಗಿಬಿಟ್ಟಿರೋ? ಇಷ್ಟಕ್ಕೇ ಶ್ರೀಮಂತರಾಗಿಬಿಟ್ಟಿರೋ? ನಮ್ಮನ್ನು ಬಿಟ್ಟು ನೀವು ಸಿಂಹಾಸನವೇರಿಬಿಟ್ಟಿರೋ? ನೀವು ನಿಜವಾಗಿಯೂ ರಾಜರಾಗಿದ್ದರೆ ಚೆನ್ನಾಗಿರುತ್ತಿತ್ತು! ಆಗ ನಾವೂ ನಿಮ್ಮ ಜೊತೆ ರಾಜ್ಯ ಆಳಬಹುದಿತ್ತು!


ನಾನು ನಿಮಗೆ ಹಾಲೂಡಿಸಿದೆನು; ಗಟ್ಟಿ ಆಹಾರವನ್ನು ಕೊಡಲಿಲ್ಲ. ಏಕೆಂದರೆ, ಅದನ್ನು ಜೀರ್ಣಿಸಿಕೊಳ್ಳಲು ನಿಮಗೆ ಶಕ್ತಿ ಇರಲಿಲ್ಲ. ಇಂದಿಗೂ ನೀವು ಶಕ್ತರಲ್ಲ.


ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.


ಸತ್ತವರ ಪುನರುತ್ಥಾನದ ಬಗ್ಗೆ ಪೌಲನು ಮಾತಾಡಿದಾಗ ಕೆಲವರು ಪರಿಹಾಸ್ಯಮಾಡಿದರು. ಉಳಿದವರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ,” ಎಂದರು.


ಅವನು ನನ್ನ ನಾಮದ ನಿಮಿತ್ತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ,” ಎಂದರು.


ಕೆಲವರು ತಾವೇ ಸತ್ಪುರುಷರು ಎಂದುಕೊಂಡು ಇತರರನ್ನು ತುಚ್ಛವಾಗಿ ಕಾಣುತ್ತಿದ್ದರು. ಅಂಥವರನ್ನು ಉದ್ದೇಶಿಸಿ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು:


ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.


ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು.


“ಬಳಿಕ ಜನರು ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು. ನೀವು ನನ್ನವರು, ಆದುದರಿಂದಲೇ ಜನಾಂಗಗಳೆಲ್ಲ ನಿಮ್ಮನ್ನು ದ್ವೇಷಿಸುವುವು.


“ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು.


ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ.


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ನೆರೆಯವನನ್ನು ತೃಣೀಕರಿಸುವವನು ಬುದ್ಧಿಹೀನ; ವಿವೇಕಿಯು ಅದರ ಬಗ್ಗೆ ತಾಳುವನು ಮೌನ.


ಯೇಹುವು ಮರಳಿ ತನ್ನ ಒಡೆಯನ ಸೇವಕರ ಹತ್ತಿರ ಬಂದನು. ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಅವನು, “ಆ ಮನುಷ್ಯ ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೆ ಗೊತ್ತಲ್ಲವೆ?” ಎಂದು ಉತ್ತರಕೊಟ್ಟನು.


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.


‘ದೇವರ ಹುಚ್ಚುತನ’ ಎಂಬುದು ಮಾನವ ಜ್ಞಾನಕ್ಕಿಂತಲೂ ಶ್ರೇಷ್ಠವಾದುದು. ‘ದೇವರ ದೌರ್ಬಲ್ಯ’ ಎಂಬುದು ಮಾನವ ಶಕ್ತಿಗಿಂತಲೂ ಪ್ರಬಲವಾದುದು.


ಮಾನ-ಅವಮಾನ, ಕೀರ್ತಿ-ಅಪಕೀರ್ತಿ ಎರಡನ್ನೂ ಅನುಭವಿಸುತ್ತಿದ್ದೇವೆ. ಸತ್ಯವಾದಿಗಳು ನಾವಾದರೂ ಮಿಥ್ಯವಾದಿಗಳು ಎಂದೆನಿಸಿಕೊಂಡಿದ್ದೇವೆ.


ಹೀಗೆ ನಮ್ಮಲ್ಲಿ ಸಾವು ಕಾರ್ಯಗತವಾಗುತ್ತಿದ್ದರೆ ನಿಮ್ಮಲ್ಲಿ ಜೀವ ಕಾರ್ಯಗತವಾಗುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು