Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:4 - ಕನ್ನಡ ಸತ್ಯವೇದವು C.L. Bible (BSI)

4 ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನಲ್ಲಿ ದೋಷವಿದೆಯೆಂದು ನನ್ನ ಬುದ್ಧಿಗೆ ತೋರುವದಿಲ್ಲವಾದರೂ ದೋಷವಿಲ್ಲದವನೆಂಬ ನಿರ್ಣಯವು ಇದರಿಂದಾಗುವದಿಲ್ಲ; ನನ್ನನ್ನು ವಿಚಾರಣೆಮಾಡುವವನು ಕರ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ತಪ್ಪುಮಾಡಿದ್ದೇನೆಂದು ನನ್ನ ಮನಸ್ಸಾಕ್ಷಿಗೆ ತೋರುತ್ತಿಲ್ಲ. ಅದು ನನ್ನನ್ನು ನಿರ್ದೋಷಿಯನ್ನಾಗಿ ಮಾಡಲಾರದು. ನನಗೆ ನ್ಯಾಯನಿರ್ಣಯ ಮಾಡುವವನು ಪ್ರಭುವೊಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ಮನಸ್ಸಾಕ್ಷಿಯು ಶುದ್ಧವಾಗಿದೆ. ಆದರೆ ಅದು ನನ್ನನ್ನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯತೀರಿಸುವವರು ಕರ್ತದೇವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮಾಜೊ ಭುತ್ತುರ್‍ಲೊ ಮನ್ ಮಾಜ್ಯಾ ವೈರ್ ಚುಕ್ ವಾವಿನಾ, ಹೆ ಖರೆ ಜಾಲ್ಯಾರ್ಬಿ ಮಿಯಾ ಚುಕ್ ನಸ್ತಾನಾ ಹಾಂವ್ ಮನುಕ್ ಹೊಯ್ನಾ. ಮಾಜಿ ಝಡ್ತಿ ಕರ್‍ತಲೊ ಎಕ್ಲೊಚ್ ತೊ ಧನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:4
24 ತಿಳಿವುಗಳ ಹೋಲಿಕೆ  

ಗುರಿಮಾಡಬೇಡ ನಿನ್ನ ದಾಸನನು ನ್ಯಾಯ ವಿಚಾರಣೆಗೆ I ಯಾವ ಜೀವಾತ್ಮನೂ ನಿರ್ದೋಷಿಯಲ್ಲ ನಿನ್ನ ಲೆಕ್ಕಕೆ II


ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಮಾನವರ ನಡವಳಿಕೆ ಅವರವರ ನೋಟಕ್ಕೆ ನೇರ; ಅವರ ಅಂತರಂಗವನ್ನು ವೀಕ್ಷಿಸಬಲ್ಲವನೋ ಸರ್ವೇಶ್ವರ.


ತನ್ನ ತಪ್ಪನು ತಾನರಿತುಕೊಳ್ಳುವವನಾರಯ್ಯಾ I ಗುಪ್ತವಾದ ಪಾಪಗಳಿಂದೆನ್ನ ಮುಕ್ತಗೊಳಿಸಯ್ಯಾ II


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಧರ್ಮಶಾಸ್ತ್ರವನ್ನು ಆಲಿಸಿದ ಮಾತ್ರಕ್ಕೆ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಸಾಧ್ಯವಿಲ್ಲ. ಅದನ್ನು ಆಲಿಸುವುದರ ಜೊತೆಗೆ ಪಾಲಿಸಲೂ ಬೇಕು.


“ಅಯ್ಯೋ, ನಾನು ಅಲ್ಪನೇ ಸರಿ ತಮಗೇನು ಪ್ರತ್ಯುತ್ತರ ಹೇಳಲಿ? ಬಾಯ ಮೇಲೆ ಕೈಯಿಡುವೆ ಮೌನತಾಳಿ.


ನ್ಯಾಯನೀತಿಯನ್ನು ಬಿಡದೆ ಹಿಡಿವೆನು ಭದ್ರವಾಗಿ ನನ್ನ ಬಾಳಿನ ಯಾವ ದಿನದಂದೂ ನಿಂದಿಸಿದ್ದಿಲ್ಲ ನನ್ನ ಮನಸ್ಸಾಕ್ಷಿ.


ನರನು ದೇವರ ದೃಷ್ಟಿಯಲ್ಲಿ ಸಜ್ಜನನಾಗಿರಲು ಸಾಧ್ಯವೆ? ಸ್ತ್ರೀಯರಲ್ಲಿ‌ ಹುಟ್ಟಿದವನು ಪರಿಶುದ್ಧನಾಗಿರುವುದು ಶಕ್ಯವೆ?


ಪೌಲನು ಆ ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ಬಂಧುಭಾಂದವರೇ, ಈ ದಿನದವರೆಗೂ ನಾನು ದೇವರ ಸಮ್ಮುಖದಲ್ಲಿ ನನ್ನ ಮನಸ್ಸಾಕ್ಷಿಯ ಪ್ರಕಾರ ಬಾಳಿದ್ದೇನೆ,” ಎಂದನು.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ನರನು ಎಷ್ಟರವನು? ಅವನು ಪರಿಶುದ್ಧನಿರಲು ಸಾಧ್ಯವೆ? ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ?


ನಾನು ಸತ್ಯವಂತನಾಗಿದ್ದರೂ ಬಾಯೇ ನಾನು ಅಪರಾಧಿಯೆಂದು ಒಪ್ಪಿಕೊಳ್ಳುತ್ತದೆ. ನಾನು ನಿರ್ದೋಷಿಯಾಗಿದ್ದರೂ ‘ನಿನ್ನದು ವಕ್ರಬುದ್ಧಿ’ ಎನ್ನುತ್ತದೆ.


ಆತನು ತನ್ನ ಸತ್ಕಾರ್ಯಗಳಿಂದ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರೆ ಆಗ ಹೊಗಳಿಕ್ಕೊಳ್ಳುವುದಕ್ಕೆ ಆತನಿಗೆ ಆಸ್ಪದವಿರುತ್ತಿತ್ತು; ಆದರೆ ಅದು ದೇವರ ಸಾನ್ನಿಧ್ಯದಲ್ಲಿ ಅಲ್ಲ.


ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ I ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ II


ಸಮತಳದಲಿ ನಿಂತಿವೆ ನನ್ನ ಪಾದಗಳು I ಸ್ತುತಿಸುವೆ ನಾ ಪ್ರಭುವನು ಭಕ್ತರ ಸಭೆಯೊಳು II


ರಾಜ್ಯಾಧಿಕಾರಿಗಳಲ್ಲಿ ದಯೆ ಯಾಚಿಸುವವರು ಅನೇಕರು; ಪ್ರತಿಯೊಬ್ಬನಿಗೆ ಸರಿಯಾದ ನ್ಯಾಯ ದೊರಕಿಸುವವನು ಸರ್ವೇಶ್ವರನು.


ನನ್ನ ವಿಷಯದಲ್ಲಿ ಹೇಳುವುದಾದರೆ, ನಿಮ್ಮಿಂದಾಗಲಿ, ಮಾನವ ನಿಯಮಿತ ನ್ಯಾಯಾಲಯದಿಂದಾಗಲಿ ನನ್ನ ವಿಚಾರಣೆಯಾಗುವುದರ ಬಗ್ಗೆ ನನಗೆ ಕಿಂಚಿತ್ತೂ ಚಿಂತೆಯಿಲ್ಲ. ನನಗೆ ನಾನೇ ನ್ಯಾಯತೀರ್ಪು ಮಾಡಿಕೊಳ್ಳುವುದೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು