Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:5 - ಕನ್ನಡ ಸತ್ಯವೇದವು C.L. Bible (BSI)

5 ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆಚೆಸಾಟ್ನಿ ಎಳ್ ಭರುಚ್ಯಾ ಅದ್ದಿ ಧನಿ ಪರ್ತುನ್ ಯೆಯ್ ಪತರ್ ತುಮಿ ಕೊನಾಚಿಬಿ ಝಡ್ತಿ ಕರುಚೆ ನ್ಹಯ್ . ತೊ ಯೆವ್ನ್ ಕಾಳ್ಕಾತ್ ನಿಪುನ್ ಹೊತ್ತೆ ಉಜ್ವೊಡಾಕ್ ಹಾನ್ತಾ ಅನಿ ಮಾನ್ಸಾಚ್ಯಾ ಭುತ್ತುರ್‍ಲ್ಯಾ ಮನಾಚೆ ಘುಟ್ ದಾಕ್ವುನ್ ದಿತಾ, ತನ್ನಾ ಹರಿ ಎಕ್ಲ್ಯಾಕ್ ದೆವಾಕ್ನಾ ಗಾವ್ತಲೆ ಹೊಗ್ಳಾಪ್ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:5
48 ತಿಳಿವುಗಳ ಹೋಲಿಕೆ  

ಆದ್ದರಿಂದ ಸಹೋದರರೇ, ಪ್ರಭು ಪುನರಾಗಮಿಸುವವರೆಗೆ ತಾಳ್ಮೆಯಿಂದ ಇರಿ. ರೈತನನ್ನು ಗಮನಿಸಿರಿ: ತನ್ನ ಹೊಲದಲ್ಲಿ ಉತ್ತಮ ಬೆಳೆಯನ್ನು ನಿರೀಕ್ಷಿಸುವ ಅವನು ಮುಂಗಾರು ಹಿಂಗಾರು ಮಳೆಗಾಗಿ ತಾಳ್ಮೆಯಿಂದ ಕಾದಿರುತ್ತಾನೆ.


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಅವನವನ ಕೆಲಸದ ಗುಣವು ಕಡೆಯ ದಿನ ಬಟ್ಟಬಯಲಾಗುವುದು. ಯೇಸುಕ್ರಿಸ್ತರ ಆ ದಿನವು ಬೆಂಕಿಯ ದಿನವಾಗಿ ಪ್ರಜ್ವಲಿಸುವುದು. ಪ್ರತಿಯೊಬ್ಬನ ಕೆಲಸವನ್ನು ಆ ಬೆಂಕಿ ಪರೀಕ್ಷಿಸುವುದು.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಅಂತೆಯೇ, ತನ್ನನ್ನು ತಾನೇ ಹೊಗಳಿಕೊಳ್ಳುವವನು ಅಲ್ಲ, ಪ್ರಭು ಯಾರನ್ನು ಹೊಗಳುತ್ತಾರೋ, ಅವನೇ ಧನ್ಯನು.


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ಇತರರು ದೋಷಿಗಳೆಂದು ತೀರ್ಪುನೀಡುವ ಮಾನವನೇ, ನೀನು ಯಾರೇ ಆಗಿರು, ನೀನು ಮಾತ್ರ ನಿರ್ದೋಷಿಯೆಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇತರರಿಗೆ ತೀರ್ಪುನೀಡುವ ನೀನು ಅವರು ಮಾಡುವ ತಪ್ಪುಗಳನ್ನು ನೀನೂ ಮಾಡಿದೆಯಾದರೆ, ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು.


ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಯಾರು ಅಂತರಂಗದಲ್ಲಿ ಯೆಹೂದ್ಯನಾಗಿರುತ್ತಾನೋ ಅವನೇ ನಿಜವಾದ ಯೆಹೂದ್ಯನು. ಅಂಥವನಿಗೆ ಅಂತರ್ಯದಲ್ಲಿ ಸುನ್ನತಿಯಾಗಿರುತ್ತದೆ. ಇದು ಲಿಖಿತ ಧರ್ಮಶಾಸ್ತ್ರದಿಂದ ಆದದ್ದಲ್ಲ, ದೇವರಾತ್ಮ ಅವರಿಂದ ಆದ ಕಾರ್ಯ; ಇಂಥವನು ಮೆಚ್ಚುಗೆಯನ್ನು ಪಡೆಯುವುದು ಮನುಷ್ಯನಿಂದಲ್ಲ, ದೇವರಿಂದ.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಮತ್ತೊಬ್ಬನ ದಾಸನ ಮೇಲೆ ದಂಡನೆಯ ತೀರ್ಪುಕೊಡಲು ನೀನು ಯಾರು? ಅವನು ಸಮರ್ಥನು ಅಥವಾ ಅಸಮರ್ಥನು ಎಂದು ತೀರ್ಪುಕೊಡುವುದು ಅವನ ಯಜಮಾನನಿಗೆ ಸೇರಿದ್ದು. ಅವನು ಸಮರ್ಥನಾಗುವಂತೆ ಮಾಡಲು ಪ್ರಭು ಶಕ್ತರು.


ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.


ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿ. ಯಾರಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ಖಂಡಿಸಿದರೆ, ಅಂಥವನು ಧರ್ಮಶಾಸ್ತ್ರವನ್ನೇ ನಿಂದಿಸಿ ಖಂಡಿಸುತ್ತಾನೆ. ನೀನು ಧರ್ಮಶಾಸ್ತ್ರವನ್ನುಖಂಡಿಸಿದರೆ, ನ್ಯಾಯಾಧಿಪತಿ ಎನಿಸಿಕೊಳ್ಳುವೆಯೇ ಹೊರತು ನೀನು ಅದನ್ನು ಅನುಸರಿಸಿ ನಡೆಯುವವನಾಗುವುದಿಲ್ಲ.


“ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ.


ಯಜಮಾನನು ಮನೆಗೆ ಹಿಂದಿರುಗಿಬಂದಾಗ ಆ ಮೇಸ್ತ್ರಿ ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ರಾತ್ರಿಯಲ್ಲಿ ಕಳ್ಳನು ಬರುವ ಹಾಗೆ ಪ್ರಭುವಿನ ದಿನವು ಬರುವುದೆಂದು ನೀವು ಚೆನ್ನಾಗಿ ಬಲ್ಲಿರಿ.


ಅದಕ್ಕೆ ಯೇಸು, “ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆ; ಆದರೆ ಅದರಿಂದ ನಿನಗೇನಾಗಬೇಕು? ನೀನು ಅಂತೂ ನನ್ನನ್ನು ಹಿಂಬಾಲಿಸಿ ಬಾ,” ಎಂದರು.


ಇವರು ತಮ್ಮ ದುರಾಶೆಗಳಿಗೆ ಬಲಿಯಾಗಿ, “ಆತನು ಮರಳಿ ಬರುವನು ಎಂಬ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ಮೃತರಾದರು; ಅಂದಿನಿಂದ ಸಮಸ್ತವೂ ಲೋಕಾದಿಯಿಂದಲೂ ಇದ್ದ ಹಾಗೆಯೇ ಇದೆಯಲ್ಲಾ,” ಎಂದು ಅಪಹಾಸ್ಯಮಾಡುವರು.


ಧಣಿ ಅವನಿಗೂ, ‘ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು,’ ಎಂದ.


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


ಇವರ ವಿಷಯವಾಗಿ ಆದಾಮನ ಏಳನೆಯ ತಲೆಮಾರಿನ ಹನೋಕನು, “ಇಗೋ, ಸರ್ವೇಶ್ವರ ತಮ್ಮ ಅಸಂಖ್ಯಾತ ಪರಿಶುದ್ಧ ದೂತರ ಸಮೇತ ಆಗಮಿಸುವರು. ಎಲ್ಲರಿಗೂ ನ್ಯಾಯತೀರ್ಪು ಕೊಡುವರು.


ದೇವರ ಆ ದಿನವನ್ನು ಎದುರುನೋಡುತ್ತಾ ಅದು ಬೇಗನೆ ಬರಲೆಂದು ಹಾರೈಸಬೇಕು. ಆ ದಿನ, ಆಕಾಶಮಂಡಲವು ಅಗ್ನಿಯಿಂದ ಉರಿದುಹೋಗುವುದು; ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಶಾಖದಿಂದ ಕರಗಿಹೋಗುವುವು.


ಈ ಭಾಗ್ಯವನ್ನು ಒಬ್ಬೊಬ್ಬನೂ ಕ್ರಮಬದ್ಧ ರೀತಿಯಲ್ಲಿ ಪಡೆಯತ್ತಾನೆ. ಪ್ರಪ್ರಥಮ ಫಲವಾಗಿ ಕ್ರಿಸ್ತಯೇಸುವೇ ಜೀವಂತರಾದರು. ಅನಂತರ, ಕ್ರಿಸ್ತಯೇಸುವಿಗೆ ಸೇರಿದವರು ಯೇಸು ಪುನರಾಗಮಿಸುವಾಗ ಜೀವಂತರಾಗುತ್ತಾರೆ.


ಎಂದೇ, ನೀವು ಈ ರೊಟ್ಟಿಯನ್ನು ಭುಜಿಸಿ ಈ ಪಾತ್ರೆಯಿಂದ ಪಾನಮಾಡುವಾಗಲೆಲ್ಲಾ ಪ್ರಭು ಬರುವ ತನಕ ಅವರ ಮರಣವನ್ನು ಸಾರುತ್ತೀರಿ.


ಇದರಿಂದಾಗಿ ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷವಾಗುವುದನ್ನೇ ಎದುರುನೋಡುತ್ತಿರುವ ನಿಮಗೆ ಯಾವ ಕೃಪಾಶೀರ್ವಾದಗಳ ಕೊರತೆಯು ಇಲ್ಲ.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ಆಗ ನರಪುತ್ರನ ಚಿಹ್ನೆ ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಪೃಥ್ವಿಯ ಪ್ರಜೆಗಳೆಲ್ಲಾ ಅತ್ತು ಪ್ರಲಾಪಿಸುವರು. ನರಪುತ್ರನು ಶಕ್ತಿಸಾಮರ್ಥ್ಯದಿಂದಲೂ ಮಹಾಮಹಿಮೆಯಿಂದಲೂ ಮೇಘಾರೂಢನಾಗಿ ಆಗಮಿಸುವುದನ್ನು ಅವರು ಕಾಣುವರು.


ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ. ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ.


ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.


ಇರುಳಿನ ಆಳದಲ್ಲಿರುವವುಗಳನ್ನು ಬೆಳಗಿಸುತ್ತಾನೆ ಗಾಢಾಂಧಕಾರವನ್ನು ಪ್ರಕಾಶಗೊಳಿಸುತ್ತಾನೆ.


ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.


‘ನನಗೆ ಕನಸು ಬಿತ್ತು, ಕನಸುಬಿತ್ತು’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದನೆ ಮಾಡುವವರ ನುಡಿಯನ್ನು ಕೇಳಿದ್ದೇನೆ.


ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.


“ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು.


ಇದರಿಂದಾಗಿ ಆ ಶಿಷ್ಯನಿಗೆ ಸಾವಿಲ್ಲವೆಂಬ ವದಂತಿ ಸೋದರರಲ್ಲಿ ಹಬ್ಬಿತು. ಯೇಸು, ‘ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆಯಾದರೆ ಅದರಿಂದ ನಿನಗೇನಾಗಬೇಕು?’ ಎಂದು ಹೇಳಿದರೇ ಹೊರತು ಅವನಿಗೆ ಸಾವಿಲ್ಲವೆಂದು ಹೇಳಲಿಲ್ಲ.


ಕಟ್ಟಡವು ಸುಟ್ಟುಹೋಗದೆ ಅಸ್ತಿವಾರದ ಮೇಲೆ ನೆಲೆಯಾಗಿ ನಿಂತರೆ ಕಟ್ಟಿದವನಿಗೆ ಸಂಭಾವನೆ ದೊರಕುತ್ತದೆ.


ಇದರ ಬಗ್ಗೆ ಯಾರಾದರೂ ತರ್ಕಿಸಿದರೆ ಅಂಥವನಿಗೆ ಇದು ತಿಳಿದಿರಲಿ: ಇಂಥ ಪದ್ಧತಿ ನಮ್ಮಲ್ಲಿ ಇಲ್ಲ: ಇನ್ನಾವ ಧರ್ಮಸಭೆಗಳಲ್ಲೂ ಇಲ್ಲ.


ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.


ಬುದ್ಧಿವಂತನನ್ನು ಅವರ ಬುದ್ಧಿಗೆ ತಕ್ಕಂತೆ ಜನ ಹೊಗಳುವರು; ವಕ್ರಬುದ್ಧಿಯುಳ್ಳವನನ್ನಾದರೊ ಅವರು ತೆಗಳುವರು.


ನಾನು ನನ್ನ ಪತ್ರಗಳ ಮೂಲಕ ನಿಮ್ಮನ್ನು ಬೆದರಿಸುತ್ತಿದ್ದೇನೆ ಎಂದು ಯಾರೂ ಭಾವಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು