Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:8 - ಕನ್ನಡ ಸತ್ಯವೇದವು C.L. Bible (BSI)

8 ಈಗಾಗಲೇ ನೀವು ಸಂತೃಪ್ತರಾಗಿಬಿಟ್ಟಿರೋ? ಇಷ್ಟಕ್ಕೇ ಶ್ರೀಮಂತರಾಗಿಬಿಟ್ಟಿರೋ? ನಮ್ಮನ್ನು ಬಿಟ್ಟು ನೀವು ಸಿಂಹಾಸನವೇರಿಬಿಟ್ಟಿರೋ? ನೀವು ನಿಜವಾಗಿಯೂ ರಾಜರಾಗಿದ್ದರೆ ಚೆನ್ನಾಗಿರುತ್ತಿತ್ತು! ಆಗ ನಾವೂ ನಿಮ್ಮ ಜೊತೆ ರಾಜ್ಯ ಆಳಬಹುದಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಷ್ಟು ಬೇಗನೆ ನೀವು ತೃಪ್ತರಾದಿರಿ. ಇಷ್ಟುಬೇಗನೆ ಐಶ್ವರ್ಯವಂತರಾದಿರಿ. ನಮ್ಮ ಸಹಾಯವಿಲ್ಲದೆ ಅರಸರಂತೆ ಆದಿರಿ. ನೀವು ನಿಜವಾಗಿ ಆಳುವವರಾಗಿದ್ದರೇ ನನಗೆ ಆನಂದವಾಗುತ್ತಿತ್ತು. ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಮ್ಮ ಸಹಾಯವಿಲ್ಲದೆ ಅರಸರಾದಿರಿ. ನೀವು ನಿಜವಾಗಿ ಅರಸರಾಗಿದ್ದರೆ ನನಗೆ ಎಷ್ಟೋ ಆನಂದವಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಅರಸರಾಗಿರುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿಮಗೆ ಅಗತ್ಯವಾದ ಪ್ರತಿಯೊಂದೂ ನಿಮಗಿದೆಯೆಂದು ನೀವು ಭಾವಿಸಿಕೊಂಡಿದ್ದೀರಿ. ನೀವು ನಿಮ್ಮನ್ನು ಐಶ್ವರ್ಯವಂತರೆಂದೂ ರಾಜರುಗಳೆಂದೂ ಭಾವಿಸಿಕೊಂಡಿದ್ದೀರಿ. ನೀವು ನಿಜವಾಗಿಯೂ ರಾಜರುಗಳಾಗಿದ್ದರೆ ನನಗೆ ಎಷ್ಟೋ ಸಂತೋಷವಾಗುತ್ತಿತ್ತು. ಆಗ ನಾವೂ ನಿಮ್ಮೊಂದಿಗೆ ರಾಜರುಗಳಾಗುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈಗ ನೀವು ತೃಪ್ತರಾಗಿದ್ದೀರಿ! ಈಗಾಗಲೇ ಐಶ್ವರ್ಯವಂತರಾಗಿದ್ದೀರಿ. ನಮ್ಮ ಸಹಾಯವಿಲ್ಲದೆ ಆಳುತ್ತಿದ್ದೀರಿ. ನೀವು ನಿಜವಾಗಿಯೂ ಅರಸರಾಗಿದ್ದರೆ, ನಾವು ಸಹ ನಿಮ್ಮೊಂದಿಗೆ ಸೇರಿ ಆಳುತ್ತಿದ್ದೇವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಎವ್ಡ್ಯಾತುಚ್ ತುಮಿ ತೃಪ್ತಿ ಹಾಸಿ ದಿಸ್ತಾ, ತುಮಿ ಸಾವ್ಕಾರ್ ಹಾಸಿ, ಅಮಿ ನಸ್ತಾನಾಚ್ ತುಮಿ ಖರೆಚ್ ರಾಜಾ ಹೊಲ್ಲೆ ರ್‍ಹಾಲ್ಯಾರ್ ಕವ್ಡೆ ಬರೆ ಹೊತ್ತೆ! ಅಮಿಬಿ ತುಮ್ಚ್ಯಾ ವಾಂಗ್ಡಾ ರಾಜ್ ಚಾಲ್ವುನ್ಗೆತ್ ರ್‍ಹಾಯ್ ಹೊತ್ತಾಂವ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:8
27 ತಿಳಿವುಗಳ ಹೋಲಿಕೆ  

ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”


ಅಲ್ಪನು ತಾನು ಶ್ರೇಷ್ಠನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ, ಅಷ್ಟೆ.


ನೀವು ನಿಜವಾಗಿ ಬಲಾಢ್ಯರಾಗಿದ್ದರೆ ನಾವು ಬಲಹೀನರಾಗಿದ್ದರೂ ನಮಗೆ ಸಂತೋಷವೇ. ನೀವು ಕ್ರೈಸ್ತವಿಶ್ವಾಸದಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಪ್ರಾರ್ಥನೆಯ ಉದ್ದೇಶ.


ನೀವು ಜಂಬ ಕೊಚ್ಚಿಕೊಳ್ಳುವುದು ತರವಲ್ಲ. ಒಂದಿಷ್ಟು ಹುಳಿ, ಹಿಟ್ಟನ್ನೆಲ್ಲಾ ಹುದುಗೆಬ್ಬಿಸುತ್ತದೆಂಬುದನ್ನು ನೀವು ಚೆನ್ನಾಗಿ ಬಲ್ಲಿರಿ.


ಏಕೆಂದರೆ, ಕ್ರಿಸ್ತಯೇಸುವಿನಲ್ಲಿ ನೀವು ಎಲ್ಲ ದೃಷ್ಟಿಯಿಂದಲೂ ಶ್ರೀಮಂತರು, ಜ್ಞಾನಸಂಪನ್ನರು ಮತ್ತು ವಾಕ್‍ಚತುರರು ಆಗಿದ್ದೀರಿ.


ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.


ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ. ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ.


ಒಬ್ಬ ಹಣಕೂಡಿಸಿದ್ದರೂ ಘನದರಿದ್ರನಿರಬಹುದು; ಮತ್ತೊಬ್ಬ ಹಣವೆಚ್ಚಮಾಡಿ ಕಡುಬಡವನಾಗಿದ್ದರೂ ಐಶ್ವರ್ಯವಂತನಾಗಿರಬಹುದು.


ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು.


ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ನನ್ನನ್ನು ನಾನೇ ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ.


ಇನ್ನು ನಾನು ನಿಮ್ಮ ಬಳಿಗೆ ಬರುವುದಿಲ್ಲ ಎಂದು ಭಾವಿಸಿ ಕೆಲವರು ಅಹಂಕಾರಿಗಳಾಗಿ ಮೆರೆಯುತ್ತಿದ್ದಾರೆಂದು ತಿಳಿದುಬಂದಿದೆ.


ಪೌಲನು ಪ್ರತ್ಯುತ್ತರವಾಗಿ, “ಅಲ್ಪಕಾಲವಾಗಲಿ, ದೀರ್ಘಕಾಲವಾಗಲಿ, ನೀವು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಎಲ್ಲರೂ ನನ್ನಂತೆಯೇ ಆಗಬೇಕೆಂಬುದೇ ದೇವರಲ್ಲಿ ನಾನು ಮಾಡುವ ಪ್ರಾರ್ಥನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ,” ಎಂದನು.


“ಆಮೆನ್! ಸರ್ವೇಶ್ವರ ಹಾಗೆಯೇ ಮಾಡಲಿ! ಸರ್ವೇಶ್ವರ ತಮ್ಮ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬಿಲೋನಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಲಿ. ನೀನು ನುಡಿದ ಮಾತುಗಳನ್ನು ನೆರವೇರಿಸಲಿ!


ತಮ್ಮ ದೃಷ್ಟಿಯಲ್ಲಿ ತಾವೇ ಜ್ಞಾನಿಗಳೆಂದು ತಮ್ಮ ಗಣನೆಯಲ್ಲಿ ತಾವೇ ವಿವೇಕಿಗಳೆಂದು ಭಾವಿಸುವವರಿಗೆ ಧಿಕ್ಕಾರ !


ಗಾಳಿಯಿದೆ, ಮೋಡವಿದೆ, ಆದರೆ ಮಳೆಯಿಲ್ಲ; ಕೊಡದೆಯೆ ತಾನೊಬ್ಬ ದಾನಿಯೆಂದು ಕೊಚ್ಚಿಕೊಳ್ಳುವವನೂ ಹಾಗೆಯೆ.


ಅದಕ್ಕೆ ಮೋಶೆ, “ನನ್ನ ಗೌರವ ಕಾಪಾಡಲು ನಿನಗೇಕೆ ಅಸೂಯೆ? ಸರ್ವೇಶ್ವರನ ಅನುಗ್ರಹದಿಂದ ಅವರ ಜನರೆಲ್ಲರೂ ಆತ್ಮಶಕ್ತಿಯನ್ನು ಹೊಂದಿ ಪ್ರವಾದಿಸುವವರಾದರೆ ಎಷ್ಟೋ ಒಳ್ಳೆಯದು” ಎಂದನು.


ಜನರ ದೊಡ್ಡ ಗುಂಪನ್ನು ಕಂಡು ಯೇಸುಸ್ವಾಮಿ ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು