Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:9 - ಕನ್ನಡ ಸತ್ಯವೇದವು C.L. Bible (BSI)

9 ಬದಲಿಗೆ, ಪ್ರೇಷಿತರಾದ ನಮ್ಮನ್ನು ದೇವರು ಕಟ್ಟಕಡೆಯವರನ್ನಾಗಿಸಿದ್ದಾರೆಂದು ತೋರುತ್ತದೆ. ಎಲ್ಲರ ಮುಂದೆ ಮರಣದಂಡನೆಗೆ ಎಳೆದೊಯ್ಯಲಾಗುವವರಂತೆ ನಾವು ದೂತರಿಗೂ ಮಾನವರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣವಿಧಿ ಹೊಂದಿದವರನ್ನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ದೇವದೂತರಿಗೂ ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ನೋಟವಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ದೇವರು ನನಗೂ ಉಳಿದ ಅಪೊಸ್ತಲರಿಗೂ ಕಡೆಯ ಸ್ಥಾನವನ್ನು ಕೊಟ್ಟಿದ್ದಾನೆಂದು ನನಗೆ ತೋರುತ್ತದೆ. ಜನರೆಲ್ಲರ ಎದುರಿನಲ್ಲಿ ನಾವು ಮರಣದಂಡನೆಗೆ ಗುರಿಯಾದಂಥವರಾಗಿದ್ದೇವೆ. ನಾವು ದೇವದೂತರಿಗೂ ಮನುಷ್ಯರಿಗೂ ಒಟ್ಟಿನಲ್ಲಿ ಇಡೀ ಜಗತ್ತಿಗೇ ನೋಟವಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಪೊಸ್ತಲರಾದ ನಮ್ಮನ್ನು ಮರಣದಂಡನೆ ಹೊಂದಿದವರಂತೆ ದೇವರು ಮೆರವಣಿಗೆಯ ಕಡೆಯವರನ್ನಾಗಿ ಮಾಡಿ ತೋರಿಸಿದ್ದಾರೆಂದು ನನಗನಿಸುತ್ತದೆ. ಏಕೆಂದರೆ, ದೇವರು ನಮ್ಮನ್ನು ದೇವದೂತರಿಗೂ ಮನುಷ್ಯರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಾಕಾ ದಿಸ್ತಾ ದೆವಾನ್ ಅಮ್ಕಾ ಅಪೊಸ್ತಲಾಕ್ನಿ ಮರ್‍ನಾಚೆ ಹುಕುಮ್ ಹೊಲ್ಯಾ ಸಾರ್ಕೆ ಸಗ್ಳ್ಯಾಂಚ್ಯಾ ಆಕ್ರಿಚೆ ಕರುನ್ ಲೊಕಾಂಚ್ಯಾ ಮದ್ದಿ ಇಬೆ ಕರ್‍ಲಾ. ಸಗ್ಳ್ಯಾ ಜಗಾಚ್ಯಾ ಇದ್ರಾಕ್, ಮಾನ್ಸಾ ಅನಿ ದೆವಾಚ್ಯಾ ದುತಾಚ್ಯಾ ಇದ್ರಾಕ್ ಅಮಿ ಎಕ್ ಪ್ರದರ್ಶನ್ ಹೊವ್ನ್ ಗೆಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:9
21 ತಿಳಿವುಗಳ ಹೋಲಿಕೆ  

ಕೆಲವೊಮ್ಮೆ ಬಹಿರಂಗವಾಗಿ ಹಿಂಸೆಬಾಧೆಗಳಿಗೂ ನಿಂದೆ ಅವಮಾನಗಳಿಗೂ ಗುರಿಯಾದಿರಿ; ಮತ್ತೆ ಕೆಲವೊಮ್ಮೆ ನಿಮ್ಮಂತೆ ಸಂಕಟಪಡುವವರ ಸಂಗಡ ಸಹಭಾಗಿಗಳಾದಿರಿ;


ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: ದಿನವಿಡೀ ನಿಮಗೋಸ್ಕರವೇ ಸಾವಿಗೀಡಾಗುತಿಹೆವು ನಾವು ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಪರಿಗಣಿತರಾಗುತಿಹೆವು ನಾವು.”


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಇನ್ನೂ ಕೆಲವರು ಹಾಸ್ಯ ಪರಿಹಾಸ್ಯ, ಏಟುಪೆಟ್ಟು, ಸೆರೆಸಂಕಲೆಗಳನ್ನು ಅನುಭವಿಸಿದರು.


ನಿಮಗೆ ಬಂದೊದಗಿರುವ ವಿಪತ್ತುಗಳಿಂದ ನೀವು ಯಾರೂ ಚಂಚಲರಾಗದಂತೆ ದೃಢಪಡಿಸುವನು. ಇಂಥ ವಿಪತ್ತುಗಳು ನಮ್ಮ ಪಾಲಿಗೆ ಕಟ್ಟಿಟ್ಟಬುತ್ತಿಯೆಂದು ನೀವು ಬಲ್ಲಿರಿ.


ಪ್ರಖ್ಯಾತರಾಗಿದ್ದರೂ ಖ್ಯಾತರಹಿತರಾಗಿದ್ದೇವೆ. ಬದುಕಿದ್ದರೂ ಸತ್ತವರೆನಿಸಿಕೊಂಡಿದ್ದೇವೆ. ಶಿಕ್ಷೆಗೆ ಗುರಿಯಾಗಿದ್ದರೂ ಇನ್ನೂ ಕೊಲೆಗೆ ಈಡಾಗದೆ ಇದ್ದೇವೆ.


ಇದೂ ಅಲ್ಲದೆ, ಪೌಲನ ಸ್ನೇಹಿತರಾದ ಕೆಲವು ಸ್ಥಳೀಯ ಅಧಿಕಾರಿಗಳು, ಕ್ರೀಡಾಂಗಣಕ್ಕೆ ಹೋಗುವ ಸಾಹಸವನ್ನು ಮಾಡಕೂಡದೆಂದು ವಿನಂತಿಸಿ, ಪೌಲನಿಗೆ ಹೇಳಿಕಳುಹಿಸಿದರು.


ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು. ಜನರು ಗುಂಪಾಗಿ ಬಂದು ಪೌಲನ ಸಹಪ್ರಯಾಣಿಕರು ಹಾಗೂ ಮಕೆದೋನಿಯದವರು ಆದ ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದರು. ಅವರನ್ನು ಎಳೆದುಕೊಂಡು ಹೋಗಿ ಕ್ರೀಡಾಂಗಣಕ್ಕೆ ಒಟ್ಟಾಗಿ ನುಗ್ಗಿದರು.


ಎಣಿಕೆಯಾಗಿಹೆವು ಕೊಯ್ಗುರಿಗಳಂತೆ ನಾವೆಲ್ಲ I ಬಲಿಯಾಗುತಿಹೆವು ನಿನ್ನ ನಿಮಿತ್ತವೆ ದಿನವೆಲ್ಲ II


ಹಲವರಿಗೆ ನಾನೊಂದು ಒಗಟು I ನೀನೆನಗೆ ಬಲವಾದ ನೆಲೆಗಟ್ಟು II


ಗರ್ಭ ಬಿಟ್ಟು ನಾನೇಕೆ ಹೊರಬಂದೆ? ಕಷ್ಟದುಃಖಗಳನ್ನು ಅನುಭವಿಸುವುದಕ್ಕೊ? ಅವಮಾನದಲ್ಲೆ ಬಾಳಿನ ದಿನಗಳನ್ನೆಲ್ಲ ಕಳೆಯುವುದಕ್ಕೊ?


ಕ್ರಿಸ್ತಯೇಸುವಿನಲ್ಲಿ ನಮಗಿರುವ ನಂಬಿಕೆ ಕೇವಲ ಬದುಕಿಗೆ ಸೀಮಿತವಾಗಿದ್ದರೆ ಜಗತ್ತಿನಲ್ಲಿ ನಮಗಿಂತ ನಿರ್ಭಾಗ್ಯರು ಬೇರೆ ಯಾರೂ ಇಲ್ಲ.


ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು