1 ಕೊರಿಂಥದವರಿಗೆ 5:1 - ಕನ್ನಡ ಸತ್ಯವೇದವು C.L. Bible (BSI)1 ಅನ್ಯಜನರಲ್ಲಿ ಕೂಡ ಇಲ್ಲದಂಥ ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಿಮ್ಮಲ್ಲಿ ಜಾರತ್ವವುಂಟೆಂದು ಜನರು ಸಾಧಾರಣವಾಗಿ ಹೇಳುತ್ತಾರೆ. ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿದೆಯೆಂದು ಜನರು ನಿಜವಾಗಿಯೂ ಹೇಳುತ್ತಿದ್ದಾರೆ. ದೇವರನ್ನು ತಿಳಿದಿಲ್ಲದ ಜನರ ನಡುವೆಯೂ ಇಲ್ಲದಂಥ ಕೆಟ್ಟ ಬಗೆಯ ಲೈಂಗಿಕ ಪಾಪ ಅದಾಗಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನೆಂದು ಜನರು ಹೇಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೂದ್ಯರಲ್ಲದವರಲ್ಲಿ ನಡೆಯದೇ ಇರುವಂಥ ಅನೈತಿಕತೆ ನಿಮ್ಮಲ್ಲಿದೆಯೆಂದು ವಾಸ್ತವವಾಗಿ ವರದಿ ಬಂದಿದೆ: ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತುಮ್ಚ್ಯಾ ಮದ್ದಿ ವೆಭಿಚಾರ್ ಚಾಲು ಹೊಲಾ ಮನುನ್ ಮಾಜ್ಯಾ ಕಾನಾತ್ ಪಡ್ಲಾ; ತಸ್ಲೊ ವೆಭಿಚಾರ್ ವಿಶ್ವಾಸಾತ್ ನಸಲ್ಲ್ಯಾ ಲೊಕಾತ್ನಿ ಸೈತ್ ಗಾವಿ ಸರ್ಕೊ ನಾ; ಎಕ್ಲೊ ಅಪ್ನಾಚ್ಯಾ ಬಾಬಾಚ್ಯಾ ದೊನ್ವೆಚ್ಯಾ ಬಾಯ್ಕೊಚ್ಯಾ ವಾಂಗ್ಡಾ ನಿಜ್ತಾ! ಅಧ್ಯಾಯವನ್ನು ನೋಡಿ |