Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 5:11 - ಕನ್ನಡ ಸತ್ಯವೇದವು C.L. Bible (BSI)

11 ಆದರೆ ತಾನು ಕ್ರೈಸ್ತ ಸಹೋದರ ಎನಿಸಿಕೊಂಡು, ದುರಾಚಾರಿಯಾಗಿಯೋ ಲೋಭೀಯಾಗಿಯೋ ವಿಗ್ರಹಾರಾಧಕನಾಗಿಯೋ ಪರನಿಂದಕನಾಗಿಯೋ ಕುಡುಕನಾಗಿಯೋ ಸುಲಿಗೆಗಾರನಾಗಿಯೋ ಯಾರಾದರೂ ಇದ್ದರೆ, ಅಂಥವನ ಸಹವಾಸ ನಿಮಗೆ ಸಲ್ಲದು. ಇದು ನನ್ನ ಪತ್ರದ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನಾದರೂ ಲೋಭಿಯಾದರೂ ವಿಗ್ರಹಾರಾಧಕನಾದರೂ ಬೈಯುವವನಾದರೂ ಕುಡಿಕನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟಮಾಡಲೂಬಾರದು ಎಂದು ಬರೆದಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಕ್ರಿಸ್ತನಲ್ಲಿ ತನ್ನನ್ನು ಸಹೋದರನೆಂದು ಹೇಳಿಕೊಳ್ಳುವವನು ಲೈಂಗಿಕ ಪಾಪ ಮಾಡುವವನಾಗಿದ್ದರೆ, ಸ್ವಾರ್ಥಿಯಾಗಿದ್ದರೆ, ವಿಗ್ರಹಗಳನ್ನು ಪೂಜಿಸುವವನಾಗಿದ್ದರೆ, ಜನರಿಗೆ ಕೆಟ್ಟ ಮಾತುಗಳನ್ನಾಡುವವನಾಗಿದ್ದರೆ, ಮದ್ಯಪಾನ ಮಾಡಿ ಮತ್ತನಾಗುವವನಾಗಿದ್ದರೆ, ಜನರಿಗೆ ಮೋಸ ಮಾಡುವವನಾಗಿದ್ದರೆ, ಅವನ ಸಹವಾಸ ಮಾಡಬಾರದು; ಅವನೊಂದಿಗೆ ಊಟವನ್ನು ಸಹ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಸಹೋದರಿ ಅಥವಾ ಸಹೋದರನೆನಿಸಿಕೊಂಡವನು ಜಾರನಾದರೂ ಲೋಭಿಯಾದರೂ ವಿಗ್ರಹಾರಾಧಕನಾದರೂ ಪರನಿಂದಕನಾದರೂ ಕುಡುಕನಾದರೂ ಸುಲಿಗೆ ಮಾಡುವವನಾದರೂ ಆಗಿದ್ದರೆ, ಅಂಥವರ ಸಹವಾಸ ಮಾಡಬೇಡಿರಿ. ಅಂಥವರ ಸಂಗಡ ಊಟ ಮಾಡಲೂ ಬೇಡಿರಿ ಎಂದು ಈಗ ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಾಜ್ಯಾಸಾಟ್ನಿ ಮಿಯಾ ತುಮ್ಕಾ ಸಾಂಗುಚೆ ಮನುನ್ ಹೊತ್ತೆ ಯವ್ಡೆಚ್! ಕೊನ್‍ತರ್ ಎಕ್ಲೊ ಅಪ್ನಿ ವಿಶ್ವಾಸಾತ್ ಹೊತ್ತೊ ಮಾನುಸ್ ಮನುನ್ ಘೆವ್ನ್ ವೆಭಿಚಾರ್ ಕರ್‍ತಾ, ಆಸ್‍ಬುರ್‍ಕೆಪಾನಾತ್ ರ್‍ಹಾತಾ, ಮುರ್ತಿ ಫುಜಾ ಕರ್‍ತಾ, ನಾ ಹೊಲ್ಯಾರ್ ದುಸ್ರ್ಯಾಂಚೆ ನಾಂವ್ ವೈಟ್ ಕರುಕ್ ಬಗ್ತಾ, ಲೈ ಫಿತಾ, ಲುಟುನ್ ಖಾತಾ, ತಸ್ಲ್ಯಾಂಚಿ ತುಮಿ ಫಾಟ್ ಧರುಚೆ ನ್ಹಯ್; ತಸ್ಲ್ಯಾಂಚ್ಯಾ ವಾಂಗ್ಡಾ ತುಮಿ ಜೆವ್ನಾಕ್ ಸೈತ್ ಬಸುಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 5:11
47 ತಿಳಿವುಗಳ ಹೋಲಿಕೆ  

ಸಹೋದರರೇ, ನೀವು ಪಡೆದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರ ಸಹವಾಸವನ್ನೇ ಮಾಡಬೇಡಿರೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಈ ಪತ್ರದ ಮೂಲಕ ನಾವು ಹೇಳಿರುವ ಮಾತನ್ನು ಯಾರಾದರೂ ಕೇಳದಿದ್ದರೆ, ಅಂಥವನನ್ನು ಗುರುತಿಸಿ ಅವನ ಸಹವಾಸವನ್ನೇ ತೊರೆದುಬಿಡಿ. ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.


ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ.


ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು.


ಈ ಉಪದೇಶವನ್ನು ಒಪ್ಪದಿರುವ ಯಾವನಾದರೂ ನಿಮಗೆ ಉಪದೇಶಮಾಡಬಂದರೆ, ಮನೆಯೊಳಗೆ ಸೇರಿಸಬೇಡಿ; ಅವನನ್ನು ಹರಸಲೂಬೇಡಿ.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಅವನು ಕುಡುಕನು, ಕಲಹಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು.


ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ನಿಮ್ಮ ತಟ್ಟೆಲೋಟಗಳ ಹೊರಭಾಗಗಳನ್ನೇನೋ ಶುಚಿಮಾಡುತ್ತೀರಿ; ಆದರೆ ಅವುಗಳ ಒಳಭಾಗ ಕೊಳ್ಳೆ ಹಾಗೂ ಲೋಭದ ಗಳಿಕೆಗಳಿಂದ ತುಂಬಿಹೋಗಿದೆ.


ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.


ವ್ಯಭಿಚಾರಿಗಳಿಗೂ ಅಶ್ಲೀಲ ಕೃತ್ಯಗಳಲ್ಲಿ ಭಾಗವಹಿಸುವವರಿಗೂ ಮತ್ತು ದುರಾಶೆಯುಳ್ಳವರಿಗೂ (ದುರಾಶೆ ವಿಗ್ರಹಾರಾಧನೆಯ ಒಂದು ರೂಪ) ಕ್ರಿಸ್ತಯೇಸುವಿನ ಮತ್ತು ದೇವರ ಸಾಮ್ರಾಜ್ಯದಲ್ಲಿ ಹಕ್ಕುಬಾಧ್ಯತೆ ಇಲ್ಲವೆಂದು ನಿಮಗೆ ಮನದಟ್ಟಾಗಿರಲಿ.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ.


“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ಈ ನಿನ್ನ ಅರಿವಿನಿಂದ ದುರ್ಬಲ ಸೋದರನು ನಾಶಕ್ಕೆ ಗುರಿಯಾಗುತ್ತಾನೆ. ಯೇಸುಕ್ರಿಸ್ತರು ಅವನಿಗಾಗಿಯೂ ಪ್ರಾಣತ್ಯಾಗ ಮಾಡಲಿಲ್ಲವೇ?


ಸಹೋದರನು ಸಹೋದರನ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು, ಅದೂ ಅವಿಶ್ವಾಸಿಗಳ ಮುಂದೆ ಹೋಗುವುದು ಸರಿಯೇ?


ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.


ಸಂಹರಿಸುವೆನು ನೆರೆಯವನ ಮೇಲೆ ಅಪವಾದ ಹೊರಿಸುವವನನು I ಸಹಿಸಲಾರೆ ಸೊಕ್ಕಿದಕಣ್ಣು, ಕೊಬ್ಬಿದ ಮನ ಉಳ್ಳಂಥವನನು II


ಕೇಡಿಗನು ತನ್ನ ಮನದಾಸೆಗಾಗಿ ಹೆಮ್ಮೆಪಡುತಿಹನು I ಲಾಭಬಡುಕನು ಪ್ರಭುವನು ಶಪಿಸಿ ತಿರಸ್ಕರಿಸುತಿಹನು II


ಇಷ್ಟಾದರೂ ನಿನ್ನ ವಿರುದ್ಧ ಹೇಳಬೇಕಾದ ಕೆಲವು ಆಪಾದನೆಗಳಿವೆ. ಬಿಳಾಮನ ದುರ್ಬೋಧನೆಯನ್ನು ಅವಲಂಬಿಸುವವರು ಕೆಲವರು ನಿನ್ನಲ್ಲಿ ಇದ್ದಾರೆ. ಈ ಬಿಳಾಮನೇ ಇಸ್ರಯೇಲ್ ಜನರು ಪಾಪದಲ್ಲಿ ಬೀಳುವಂತೆಮಾಡಲು ಬಾಲಾಕನನ್ನು ಪ್ರಚೋದಿಸಿದವನು. ಈ ಕಾರಣ, ಅವರು ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿಂದರು; ಲೈಂಗಿಕ ಅನೈತಿಕತೆಗೆ ತುತ್ತಾದರು.


ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.


ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.


ಯಕೋಬನ ಕಡೆಯಿಂದ ಕೆಲವು ಸಹೋದರರು ಬರುವುದಕ್ಕೆ ಮುಂಚೆ ಆತನು ಅನ್ಯಧರ್ಮೀಯರೊಡನೆ ಊಟಮಾಡುತ್ತಿದ್ದನು. ಆದರೆ ಅವರು ಬಂದ ಮೇಲೆ ಸುನ್ನತಿ ಪರವಾದಿಗಳಿಗೆ ಅಂಜಿ ಅನ್ಯಧರ್ಮೀಯರಿಂದ ದೂರವಾದನು.


ಏಕೆಂದರೆ, ಭೋಜನ ಸಮಯದಲ್ಲಿ ಒಬ್ಬೊಬ್ಬನೂ ತಾನು ತಂದದ್ದನ್ನು ತಿನ್ನಲು ಇತರರಿಗಿಂತ ಮುಂಚಿತವಾಗಿಯೇ ಕುಳಿತುಕೊಳ್ಳುತ್ತಾನೆ. ಒಬ್ಬನು ಹಸಿದಿರುತ್ತಾನೆ; ಇನ್ನೊಬ್ಬನು ಕುಡಿದು ಮತ್ತನಾಗುತ್ತಾನೆ.


ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ತೊರೆದುಬಿಡಿ.


ಒಂದು ವೇಳೆ, ವಿಶ್ವಾಸವಿಲ್ಲದ ಸತಿಯಾಗಲಿ, ಪತಿಯಾಗಲಿ ಬೇರ್ಪಟ್ಟುಹೋಗಬೇಕೆಂದಿದ್ದರೆ ಹೋಗಲಿ. ಇಂಥ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನು, ಇಲ್ಲವೆ ಸಹೋದರಿಯು ವಿವಾಹ ಬಂಧನದಿಂದ ವಿಮುಕ್ತರಾಗುತ್ತಾರೆ. ಏಕೆಂದರೆ, ದೇವರು ನಿಮ್ಮನ್ನು ಶಾಂತಿಸಮಾಧಾನದಿಂದ ಬಾಳಲು ಕರೆದಿದ್ದಾರೆ.


ಮಿಕ್ಕವರಿಗೆ ನಾನು ಹೇಳುವುದೇನೆಂದರೆ: ಇದು ನನ್ನ ಮಾತು, ಪ್ರಭುವಿನದಲ್ಲ: ಒಬ್ಬ ಸಹೋದರನಿಗೆ ಕ್ರೈಸ್ತವಿಶ್ವಾಸಿಯಲ್ಲದ ಸತಿ ಇದ್ದರೆ, ಆಕೆ ಅವನೊಡನೆ ದಾಂಪತ್ಯ ಜೀವನ ನಡೆಸಲು ಒಪ್ಪಿದರೆ, ಆಕೆಯನ್ನು ಬಿಟ್ಟುಬಿಡಬಾರದು.


ಅಂತೆಯೇ ಅನನೀಯನು ಹೊರಟು ಆ ಮನೆಗೆ ಹೋದನು. ಸೌಲನ ಮೇಲೆ ಹಸ್ತನಿಕ್ಷೇಪಮಾಡಿ, “ಸಹೋದರ ಸೌಲನೇ, ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ನೀನು ಬರುವಾಗ ದಾರಿಯಲ್ಲಿ ಕಾಣಿಸಿಕೊಂಡ ಯೇಸುಸ್ವಾಮಿಯೇ, ನೀನು ದೃಷ್ಟಿಯನ್ನು ಮರಳಿ ಪಡೆಯುವಂತೆಯೂ ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದನು.


ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ.


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು