1 ಕೊರಿಂಥದವರಿಗೆ 5:3 - ಕನ್ನಡ ಸತ್ಯವೇದವು C.L. Bible (BSI)3 ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮ ಹತ್ತಿರವಿದ್ದೇನೆ. ನಿಮ್ಮ ಸಂಗಡವೇ ಇರುವವನಂತೆ ಅವನಿಗೆ ಏನುಮಾಡಬೇಕೆಂದು ಈಗಾಗಲೇ ತೀರ್ಮಾನಿಸಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನಂತೂ ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ, ಆತ್ಮದಿಂದ ಹತ್ತಿರದಲ್ಲಿದ್ದು ಈ ಕಾರ್ಯ ಮಾಡಿದವನನ್ನು ಕುರಿತು ಆಗಲೇ ನಿಮ್ಮ ಹತ್ತಿರವಿದ್ದವನಂತೆ ತೀರ್ಪು ಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನಂತೂ ದೇಹದಿಂದ ದೂರವಾಗಿದ್ದರೂ ಆತ್ಮದಿಂದ ಹತ್ತರದಲ್ಲಿದ್ದು ಈ ಕಾರ್ಯಮಾಡಿದವನನ್ನು ಕುರಿತು ಆಗಲೇ ಹತ್ತರವಿದ್ದವನಂತೆ ತೀರ್ಪು ಮಾಡಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನನ್ನ ದೇಹ ನಿಮ್ಮೊಂದಿಗೆ ಇಲ್ಲದಿದ್ದರೂ ನಾನು ಆತ್ಮದಲ್ಲಿ ನಿಮ್ಮೊಂದಿಗಿದ್ದೇನೆ. ಆ ಪಾಪ ಮಾಡಿದ ವ್ಯಕ್ತಿಗೆ ನಾನು ಆಗಲೇ ತೀರ್ಪು ಮಾಡಿದ್ದೇನೆ. ನಾನು ಅಲ್ಲಿದ್ದಿದ್ದರೆ ಯಾವ ತೀರ್ಪನ್ನು ಕೊಡುತ್ತಿದ್ದೆನೋ ಅದೇ ತೀರ್ಪನ್ನು ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ಸ್ವತಃ ನಿಮ್ಮ ಮಧ್ಯದಲ್ಲಿ ಇರದಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದೇನೆ. ಈ ಕಾರ್ಯಮಾಡಿದವನ ಮೇಲೆ ಆಗಲೇ ಹತ್ತಿರವಿದ್ದವನಂತೆ ನಮಗೆ ಕರ್ತ ಆಗಿರುವ ಯೇಸುವಿನ ಹೆಸರಿನಲ್ಲಿ ತೀರ್ಪುಮಾಡಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಮಿಯಾ ಆಂಗಾನ್ ತುಮ್ಚ್ಯಾ ವಾಂಗ್ಡಾ ನಾ ಜಾಲ್ಯಾರ್ಬಿ ಆತ್ಮ್ಯಾನ್ ತುಮ್ಚ್ಯಾ ಮದ್ದಿ ಹಾಜರ್ ಹಾಂವ್ ಮನುನ್ ಚಿಂತಾ, ತಸೆ ಹಾಜರ್ ರ್‍ಹಾವ್ನ್; ಅಸ್ಲಿ ಕಾಮಾ ಕರ್‍ತಲ್ಯಾಂಚ್ಯಾ ವೈರ್ ಮಿಯಾ ನಿರ್ನಯ್ ದಿವ್ನ್ ಹೊಲಾ. ಅಧ್ಯಾಯವನ್ನು ನೋಡಿ |