Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 5:6 - ಕನ್ನಡ ಸತ್ಯವೇದವು C.L. Bible (BSI)

6 ನೀವು ಜಂಬ ಕೊಚ್ಚಿಕೊಳ್ಳುವುದು ತರವಲ್ಲ. ಒಂದಿಷ್ಟು ಹುಳಿ, ಹಿಟ್ಟನ್ನೆಲ್ಲಾ ಹುದುಗೆಬ್ಬಿಸುತ್ತದೆಂಬುದನ್ನು ನೀವು ಚೆನ್ನಾಗಿ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಿಕವೆಲ್ಲಾ ಹುಳಿಯಾಗುತ್ತದೆಂಬದು ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಅಹಂಕಾರಪಡುವುದು ಒಳ್ಳೆಯದಲ್ಲ. “ಒಂದಿಷ್ಟು ಹುಳಿಯು ಹಿಟ್ಟನ್ನೆಲ್ಲಾ ಉಬ್ಬಿಸುತ್ತದೆ” ಎಂಬ ನುಡಿಯು ನಿಮಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ಜಂಬ ಕೊಚ್ಚಿಕೊಳ್ಳುವುದು ಸರಿಯಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತುಮ್ಚಿ ಬಡಾಯ್ ತುಮ್ಕಾ ಒಪ್ಪಿನಾ, “ಉಲ್ಲೊಸೊ ಸೊಡೊ ಸಗ್ಳೆ ಪಿಟ್ಟ್ ಫುಗ್ವುತಾ,” ಹಿ ಗೊಸ್ಟ್ ತುಮ್ಕಾ ಗೊತ್ತ್ ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 5:6
12 ತಿಳಿವುಗಳ ಹೋಲಿಕೆ  

ಆದರೆ ನೀವು ಅಹಂಭಾವದಿಂದ ಕೊಚ್ಚಿಕೊಳ್ಳುತ್ತೀರಿ. ಹಾಗೆ ಕೊಚ್ಚಿಕೊಳ್ಳುವುದು ಸರಿಯಲ್ಲ.


ಒಂದಿಷ್ಟು ಹುಳಿ ಸಾಕು, ಹಿಟ್ಟನ್ನೆಲ್ಲಾ ಹುದುಗೆಬ್ಬಿಸಲು!


ಮೋಸಹೋಗದಿರಿ. ಏಕೆಂದರೆ, “ದುರ್ಜನರ ಸಂಗ ಸದಾಚಾರದ ಭಂಗ,”


ಹೀಗಿರಲು, ನೀವು ಸೊಕ್ಕಿನಿಂದ ಮೆರೆಯಲು ಕಾರಣವಾದರೂ ಎಲ್ಲಿದೆ? ಬದಲಿಗೆ, ನೀವು ವ್ಯಸನಪಟ್ಟು ಅವನನ್ನು ನಿಮ್ಮ ಸಭಾಕೂಟದಿಂದ ಬಹಿಷ್ಕರಿಸಬೇಕಾಗಿತ್ತಲ್ಲವೆ?


ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.”


ಅವರ ಮಾತು ರಾಜ ಹುಣ್ಣಿನಂತೆ ಹರಡಿಕೊಳ್ಳುತ್ತದೆ. ಹುಮೆನಾಯ ಮತ್ತು ಫಿಲೇತ ಇಂಥವರ ಗುಂಪಿಗೆ ಸೇರಿದ್ದಾರೆ.


ಆದ್ದರಿಂದ ಕೇವಲ ನರಮಾನವರನ್ನೇ ನೆಚ್ಚಿಕೊಂಡು ಯಾರೂ ಹೆಚ್ಚಳಪಡದಿರಲಿ.


ಅದು ಹುಳಿಹಿಟ್ಟಿನಂತೆ ಇದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು,” ಎಂದರು.


ಅವರೆಲ್ಲರು ವ್ಯಭಿಚಾರಿಗಳೇ; ಅವರು ಉರಿಯುವ ಒಲೆಗೆ ಸಮಾನರು. ರೊಟ್ಟಿಸುಡುವವನು ನಾದಿದ ಹಿಟ್ಟು ಹುಳಿಯಾಗುವವರೆಗೂ ಬಿಟ್ಟಿರುವ ಬೂದಿ ಮುಚ್ಚಿದ ಕೆಂಡಕ್ಕೆ ಸಮಾನರು.


ಯಾರ ಕೈಕೆಳಗೆ ಗುಲಾಮರಾಗಿರಲು ನಿಮ್ಮನ್ನೇ ಒಪ್ಪಿಸಿಕೊಳ್ಳುತ್ತೀರೋ ಅವರಿಗೆ ನೀವು ಶರಣಾಗುತ್ತೀರಿ. ನೀವು ಪಾಪಕ್ಕೆ ಗುಲಾಮರಾದರೆ ಮರಣವೇ ನಿಮಗೆ ಗತಿ; ದೇವರಿಗೆ ಶರಣಾದರೆ ಸತ್ಸಂಬಂಧವೇ ಅದರ ಸತ್ಪರಿಣಾಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು