Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 5:8 - ಕನ್ನಡ ಸತ್ಯವೇದವು C.L. Bible (BSI)

8 ಆದಕಾರಣ ನಾವು ದುಷ್ಟತನ, ಕೆಡುಕುತನವೆಂಬ ಹುಳಿಹಿಟ್ಟನ್ನು ವರ್ಜಿಸೋಣ. ಪರಿಶುದ್ಧತೆ ಮತ್ತು ಸತ್ಯತೆ ಎಂಬ ಹುಳಿಯಿಲ್ಲದ ಹೊಸರೊಟ್ಟಿಯನ್ನು ತಿಂದು ಪಾಸ್ಕಹಬ್ಬವನ್ನು ಆಚರಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ನಾವು ಪಸ್ಕದ ಊಟ ಮಾಡೋಣ. ದುಷ್ಟತನ ಮತ್ತು ಕೆಡುಕತನ ಎಂಬ ಹಳೆಯ ಹುಳಿಯಿಂದ ಕೂಡಿರುವ ರೊಟ್ಟಿಯನ್ನು ನಾವು ತಿನ್ನದೆ ಹುಳಿರಹಿತವಾದ ರೊಟ್ಟಿಯನ್ನು ತಿನ್ನೋಣ. ಸರಳತೆ ಮತ್ತು ಸತ್ಯತೆ ಇವುಗಳೇ ಆ ಹುಳಿರಹಿತ ರೊಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದಕಾರಣ ಹಗೆತನ, ದುಷ್ಟತನ, ಎಂಬ ಹಳೇ ಹುಳಿಯಿಂದಲ್ಲ, ಯಥಾರ್ಥತೆ ಹಾಗೂ ಸತ್ಯ ಎಂಬ ಹುಳಿಯಿಲ್ಲದ ರೊಟ್ಟಿಯಿಂದಲೇ ಹಬ್ಬವನ್ನು ಆಚರಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಸೆ ಮನುನ್ ಜುನ್ನ್ಯಾ ಸೊಡ್ಯಾಕ್ ಮಟ್ಲ್ಯಾರ್ ವಾಯ್ಟ್ ಅನಿ ಖೊಟ್ಯಾ ಪಾನಾಚ್ಯಾ ಸೊಡ್ಯಾಕ್ ನ್ಹಯ್ ತೆಚ್ಯಾ ಬದ್ಲಾಕ್ ನಿತಳ್ ಅನಿ ಖರ್ಯಾಚ್ಯಾ ಪುಗ್ ನಸಲ್ಲ್ಯಾ ಭಾಕ್ರಿಚೊ ಸನ್ ಆಚರನ್ ಕರುಂವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 5:8
34 ತಿಳಿವುಗಳ ಹೋಲಿಕೆ  

ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಏಕೆಂದರೆ ನೀವು ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ ಅವಸರದಿಂದ ಈಜಿಪ್ಟನ್ನು ಬಿಟ್ಟುಬಂದಿರಿ. ಈಜಿಪ್ಟ್ ದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ, ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ನೀವು ಏಳು ದಿವಸಗಳವರೆಗೂ ತಿನ್ನಬೇಕು.


ಏಳು ದಿವಸ ನೀವು ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳಿಂದ ತೆಗೆದುಬಿಡಬೇಕು. ಆ ಏಳು ದಿನಗಳಲ್ಲಿ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು.


ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.


ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ,” ಎಂದು ಹೇಳಿದರು.


ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ!” ಎಂದರು.


ಉಳಿದಿರುವ ತನ್ನ ಜೀವಮಾನ ಕಾಲವನ್ನು ಲೌಕಿಕ ವ್ಯಾಮೋಹಗಳಲ್ಲಿ ಕಳೆಯದೆ ದೇವರ ಚಿತ್ತಕ್ಕನುಸಾರ ಕಳೆಯುತ್ತಾನೆ.


ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!


ನೀವು ಜಂಬ ಕೊಚ್ಚಿಕೊಳ್ಳುವುದು ತರವಲ್ಲ. ಒಂದಿಷ್ಟು ಹುಳಿ, ಹಿಟ್ಟನ್ನೆಲ್ಲಾ ಹುದುಗೆಬ್ಬಿಸುತ್ತದೆಂಬುದನ್ನು ನೀವು ಚೆನ್ನಾಗಿ ಬಲ್ಲಿರಿ.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ರೊಟ್ಟಿಯ ಹಿಟ್ಟನ್ನು ಹುದುಗೆಬ್ಬಿಸುವ ಹುಳಿಯನ್ನು ಕುರಿತು ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯವಾಗಿ ಜಾಗರೂಕರಾಗಿರಬೇಕೆಂದು ಯೇಸು ಎಚ್ಚರಿಸಿದರೆಂದು ಆಗ ಶಿಷ್ಯರು ಅರ್ಥಮಾಡಿಕೊಂಡರು.


ನೀವಾದರೋ ಹಾಡುವಿರಿ ಹಬ್ಬದ ರಾತ್ರಿಯಲ್ಲೋ ಎಂಬಂತೆ ಹೃದಯಾನಂದ ಪಡುವಿರಿ, ಇಸ್ರಯೇಲರ ರಕ್ಷಣೆಯ ಕೋಟೆಗೆ, ಸರ್ವೇಶ್ವರನ ಶಿಖರಕ್ಕೆ ಕೊಳಲನೂದುತ ಹೋಗುವವರಂತೆ.


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ಯಾರಪರಾಧವನು ಪ್ರಭು ಎಣಿಸಿಲ್ಲವೋ I ಯಾರಂತರಂಗದಲಿ ಕುತಂತ್ರವಿಲ್ಲವೋ ಅವರೇ ಧನ್ಯರು II


ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಅಂದು ಮೊದಲ್ಗೊಂಡು ಏಳು ದಿನಗಳಲ್ಲೂ ಹುಳಿರಹಿತ ರೊಟ್ಟಿಯನ್ನು ಊಟಮಾಡಬೇಕು.


ಇದನ್ನು ನಾನು ಆಜ್ಞಾರೂಪವಾಗಿ ಹೇಳುತ್ತಿಲ್ಲ. ಬೇರೆಯವರಿಗೆ ಈ ಸೇವಾಕಾರ್ಯದಲ್ಲಿ ಇರುವ ಶ್ರದ್ಧೆಯನ್ನು ಆದರ್ಶವಾಗಿ ಹಿಡಿದು ನಿಮ್ಮ ಪ್ರೀತಿ ಎಷ್ಟು ಯಥಾರ್ಥವಾದುದೆಂದು ಕಂಡುಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇನೆ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಅನ್ಯಜನರಲ್ಲಿ ಕೂಡ ಇಲ್ಲದಂಥ ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ.


ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ?


“ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯಾಚೆಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದುಬಿಡಿ.


“ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿ, ಪಂಚಾಶತ್ತಮ ದಿನದ ಜಾತ್ರೆಯಲ್ಲಿ, ಕುಟೀರಗಳ ಜಾತ್ರೆಯಲ್ಲಿ, ಹೀಗೆ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಒಬ್ಬರೂ ಅವರ ಸನ್ನಿಧಿಗೆ ಬರಕೂಡದು.


ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ಸರ್ವೇಶ್ವರನ ಗೌರವಾರ್ಥ ಹಬ್ಬ ಮಾಡಬೇಕು.


ಆ ರಾತ್ರಿಯಲ್ಲೇ ಆ ಮಾಂಸವನ್ನು ತಿನ್ನಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಮೇತ ಊಟಮಾಡಬೇಕು.


ಏಳು ದಿನ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟೇ ಇರಕೂಡದು. ಹುಳಿ ಬೆರಸಿದ್ದನ್ನು ತಿನ್ನುವವನು ಪರದೇಶದವನಾಗಿರಲಿ, ಸ್ವದೇಶದವನಾಗಿರಲಿ ಇಸ್ರಯೇಲ್ ಜನರಿಂದ ಬಹಿಷ್ಕೃತನು.


ಆ ಏಳು ದಿವಸವು ಹಿಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು. ಮಾತ್ರವಲ್ಲ ನಿಮ್ಮ ಬಳಿಯಲ್ಲಿ ಅಥವಾ ನಿಮ್ಮ ನಾಡಿನಲ್ಲಿ ಹುಳಿಯಾಗಲಿ ಹುಳಿ ಹಿಟ್ಟಾಗಲಿ ಇರಕೂಡದು.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು