Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:1 - ಕನ್ನಡ ಸತ್ಯವೇದವು C.L. Bible (BSI)

1 ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ ನ್ಯಾಯವಿಚಾರಣೆಗೆ ದೇವಜನರ ಮುಂದೆ ಹೋಗದೆ, ಅನ್ಯಜನರ ಮುಂದೆ ಹೋಗುವಷ್ಟು ಸೊಕ್ಕು ನಿಮಗೆಲ್ಲಿಂದ ಬಂದಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ಏನಾದರೂ ವಿವಾದವಿದ್ದರೆ ನ್ಯಾಯವಿಚಾರಣೆಗೆ ದೇವಜನರೆದುರು ತೆಗೆದುಕೊಂಡು ಹೋಗದೇ ಅನ್ಯಜನರ ಮುಂದೆ ತೆಗೆದುಕೊಂಡು ಹೋಗುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ ನ್ಯಾಯವಿಚಾರಣೆಗೆ ದೇವಜನರ ಮುಂದೆ ಹೋಗದೆ ಅನ್ಯಜನರ ಮುಂದೆ ಹೋಗುವದಕ್ಕೆ ಅವನಿಗೆ ಧೈರ್ಯವುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವಿರೋಧವಿದ್ದರೆ, ನೀವು ನ್ಯಾಯಾಲಯಗಳಿಗೆ ಹೋಗುವುದೇಕೆ? ಅವರು ನೀತಿವಂತರಲ್ಲ. ಹೀಗಿರಲು ನಿಮಗೆ ನ್ಯಾಯತೀರ್ಪು ಮಾಡಲು ಅವರಿಗೆ ನೀವು ಅವಕಾಶ ಮಾಡಿಕೊಡುವುದೇಕೆ? ನಿಮಗೆ ನಾಚಿಕೆಯಾಗಬೇಕು. ನಿಮಗೆ ನ್ಯಾಯತೀರ್ಪು ನೀಡಲು ನೀವು ದೇವಜನರಿಗೆ ಏಕೆ ಅವಕಾಶ ಕೊಡಬಾರದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ, ನ್ಯಾಯವಿಚಾರಣೆಗಾಗಿ ಕರ್ತದೇವರ ಜನರ ಮುಂದೆ ಹೋಗದೆ, ಭಕ್ತಿಹೀನರ ಮುಂದೆ ಹೋಗುವುದಕ್ಕೆ ಧೈರ್ಯವಿದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತುಮ್ಚ್ಯಾತ್ಲ್ಯಾ ಕೊನಾಕ್ಬಿ ಎಕ್ಲ್ಯಾಕ್ ದುಸ್ರಾಂಚ್ಯಾ ವಾಂಗ್ಡಾ ಝಗ್ಡೊ ಹಾಯ್ ಮನುನ್ ಚಿಂತುವಾ, ತೊ ಝಗ್ಡೊ ತೆನಿ ದೆವಾಚ್ಯಾ ಲೊಕಾಂಚ್ಯಾಚ್ ಇದ್ರಾಕ್ ಹಾನ್ತಲ್ಯಾ ಬದ್ಲಾಕ್ ವಿಶ್ವಾಸ್ ನಸಲ್ಲ್ಯಾ ನಿತ್ ಕರ್‍ತಲ್ಯಾ ತಾಂಡ್ಯಾಂಚ್ಯಾ ಇದ್ರಾಕ್ ನೆವ್ನ್ ಥೈ ಫಿರ್ಯಾದ್ ದಿವ್ಕ್ ಧೈರೊ ಕರುಕ್ ಹೊತಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:1
11 ತಿಳಿವುಗಳ ಹೋಲಿಕೆ  

ದೆಮೆತ್ರಿಯನಿಗೇ ಆಗಲಿ, ಅವನ ಜೊತೆ ಕೆಲಸಗಾರರಿಗೇ ಆಗಲಿ, ಯಾರ ಮೇಲಾದರೂ ಏನಾದರೂ ಆಪಾದನೆ ಇದ್ದರೆ, ಅದಕ್ಕೆ ನ್ಯಾಯಾಲಯಗಳು ತೆರೆದಿವೆ; ರಾಜ್ಯಪಾಲರಿದ್ದಾರೆ; ಅವರು ಅಲ್ಲಿಗೆ ಹೋಗಿ ದೂರು ಕೊಡಲಿ.


ದೇವರು ಗಲಿಬಿಲಿಯನ್ನು ಬಯಸುವವರಲ್ಲ; ಅವರು ಶಾಂತಿ ಮತ್ತು ಸುವ್ಯವಸ್ಥೆಯ ದೇವರು.


ದೇವಜನರಿಗೋಸ್ಕರ ಹಣ ಸಂಗ್ರಹಿಸುವುದರ ವಿಷಯವಾಗಿ ಹೇಳುವುದಾದರೆ: ಗಲಾತ್ಯದ ಸಭೆಗಳಿಗೆ ನಾನು ಕೊಟ್ಟ ನಿಯಮವನ್ನೇ ನೀವೂ ಅನುಸರಿಸಿರಿ. ನಾನು ಬಂದಾಗ ಹಣ ಸಂಗ್ರಹಿಸುವ ಅವಶ್ಯಕತೆ ಇರಬಾರದು.


ಸ್ತೇಫನನನ್ನು ಮತ್ತು ಆತನ ಕುಟುಂಬದವರನ್ನು ನೀವು ಬಲ್ಲಿರಿ. ಅವರು ಅಖಾಯದ ಪ್ರಥಮ ಕ್ರೈಸ್ತವಿಶ್ವಾಸಿಗಳು. ದೇವಜನರ ಸೇವೆಗೆ ತಮ್ಮನ್ನೇ ಸಮರ್ಪಿಸಿಕೊಂಡವರು. ನಾನು ನಿಮ್ಮಲ್ಲಿ ವಿನಂತಿಸುವುದೇನೆಂದರೆ:


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


ಧರ್ಮಸಭೆಗೆ ಸೇರದೆ ಇರುವವರ ಬಗ್ಗೆ ತೀರ್ಪುಮಾಡುವುದು ನನ್ನ ಕೆಲಸವಲ್ಲ. ಅವರನ್ನು ಕುರಿತು ದೇವರೇ ತೀರ್ಪುನೀಡುವರು. ನೀವು ತೀರ್ಪುಮಾಡಬೇಕಾದುದು ಧರ್ಮಸಭೆಗೆ ಸೇರಿದವರನ್ನು ಕುರಿತು ದುರುಳನನ್ನು ನಿಮ್ಮಿಂದ ದೂರತಳ್ಳಿರಿ.


ಇದು ನಿಮಗೆ ನಾಚಿಕೆಗೇಡು! ಸಹೋದರರ ವ್ಯಾಜ್ಯವನ್ನು ತೀರ್ಮಾನಿಸಬಲ್ಲ ಜಾಣನು ನಿಮ್ಮಲ್ಲಿ ಒಬ್ಬನೂ ಇಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು