Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:12 - ಕನ್ನಡ ಸತ್ಯವೇದವು C.L. Bible (BSI)

12 “ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯ ಇದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ನನಗೆ ಪ್ರಯೋಜನಕರವಲ್ಲ. ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯವಿದೆ. ಆದರೆ ನಾನು ಯಾವುದಕ್ಕೂ ಗುಲಾಮನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು,” ಆದರೆ ಎಲ್ಲವು ಪ್ರಯೋಜನಕರವಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು” ಆದರೆ ನಾನು ಯಾವುದಕ್ಕೂ ಅಧೀನನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಎಲ್ಲಾ ಕಾರ್ಯಗಳನ್ನು ಮಾಡುವದಕ್ಕೆ ನನಗೆ ಸ್ವಾತಂತ್ರ್ಯವೇನೋ ಉಂಟು, ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ. ಎಲ್ಲಾ ಕಾರ್ಯಗಳನ್ನು ಮಾಡುವದಕ್ಕೆ ನನಗೆ ಸ್ವಾತಂತ್ರ್ಯವುಂಟು, ಆದರೆ ನಾನು ಯಾವದಕ್ಕೂ ಒಳಗಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ಪ್ರತಿಯೊಂದೂ ಜನರಿಗೆ ಪ್ರಯೋಜಕವಲ್ಲ. “ಪ್ರತಿಯೊಂದನ್ನೂ ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ನಾನು ಯಾವುದನ್ನೂ ನನ್ನ ಒಡೆಯನನ್ನಾಗಿ ಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೂ ಹಕ್ಕಿದೆ” ಎಂದು ನೀವು ಹೇಳುತ್ತೀರಿ. ಆದರೆ ಎಲ್ಲವೂ ನನಗೆ ಪ್ರಯೋಜನಕರವಾಗಿರುವುದಿಲ್ಲ. ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಹಕ್ಕಿದೆ; ಆದರೆ ನಾನು ಯಾವುದಕ್ಕೂ ಗುಲಾಮನಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 “ಮಿಯಾ ಕಾಯ್ಬಿ ಕರುಕ್ ಹೊತಾ ಮನುನ್ ತಿಯಾ ಮನ್ಸಿಲ್, ಖರೆ ಮಿಯಾ ಕಾಯ್ ಕರ್‍ತಾ ತೆ ಸಗ್ಳೆ ಮಾಜ್ಯಾ ಪಾಯ್ದ್ಯಾಕ್ ಪಡಿನಾ. ಮಿಯಾ ಕಾಯ್ಬಿ ಕರುಕ್ ಹೊತಾ ತೆ ಖರೆ ಹಾಯ್, ಖರೆ ಮಿಯಾ ಕೊನಾಚೊಬಿ ಗುಲಾಮ್ ಹೊಯ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:12
12 ತಿಳಿವುಗಳ ಹೋಲಿಕೆ  

ಇತರರಿಗೆ ಕರೆಕೊಟ್ಟ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ, ನನ್ನನ್ನೇ ನಾನು ಹತೋಟಿಯಲ್ಲಿಟ್ಟುಕೊಳ್ಳುತ್ತೇನೆ.


ನಿಮ್ಮಿಂದ ಪೋಷಣೆ ಪಡೆಯಲು ನಮಗೆ ಹಕ್ಕಿಲ್ಲವೆಂದಲ್ಲ; ನೀವು ನಮ್ಮನ್ನು ಅನುಸರಿಸಿ ನಡೆಯುವಂತೆ, ನಿಮಗೆ ಆದರ್ಶವಾಗಿ ಇರಬೇಕೆಂದೇ ನಾವು ಹೀಗೆ ಮಾಡಿದೆವು.


ತಮ್ಮ ಮಿತಿಮೀರಿದ ಮದ್ಯಪಾನಾಸಕ್ತಿಯಿಂದ ನಿಮ್ಮ ಪ್ರೇಮಭೋಜನ ಕೂಟಗಳಲ್ಲಿ ಇವರು ಕಳಂಕಪ್ರಾಯರಾಗಿದ್ದಾರೆ. ತಮ್ಮ ಕುರಿಗಳನ್ನು ತೊರೆದು ಹೊಟ್ಟೆಹೊರೆದುಕೊಳ್ಳುವ ಕುರುಬರಂತಿದ್ದಾರೆ. ಇವರು ಬಿರುಗಾಳಿಗೆ ಚದುರಿಹೋಗುವ ನೀರಿಲ್ಲದ ಮೋಡಗಳು; ಎಲೆಗಳು ಉದುರಿ, ಫಲಬಿಡದೆ, ಬಾಡಿಹೋಗಿ, ಬೇರುಸಹಿತ ಕಿತ್ತುಬೀಳುವ ಶರತ್ಕಾಲದ ಮರಗಳು;


ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.


ಧರ್ಮಶಾಸ್ತ್ರ ಪಾರಮಾರ್ಥಿಕವಾದುದೆಂದು ನಾವು ಬಲ್ಲೆವು. ನಾನಾದರೋ ನರಮಾನವನು; ಪಾಪಕ್ಕೆ ನನ್ನನ್ನೇ ಗುಲಾಮನನ್ನಾಗಿ ಮಾರಿಕೊಂಡವನು.


ಇತರರಿಗೆ ನಿಮ್ಮ ಮೇಲೆ ಇಂಥ ಹಕ್ಕಿದ್ದರೆ ಅದಕ್ಕಿಂತಲೂ ಹೆಚ್ಚು ಹಕ್ಕು ನಮಗಿರಬೇಕಲ್ಲವೇ? ಆದರೂ ನಾವು ಈ ಹಕ್ಕನ್ನು ಚಲಾಯಿಸಲೇ ಇಲ್ಲ. ಬದಲಿಗೆ, ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯಾವ ಅಡ್ಡಿಯೂ ಬಾರದಿರಲೆಂದು ಎಲ್ಲವನ್ನು ಸಹಿಸಿಕೊಂಡೆವು.


ಅದು ಸಬ್ಬತ್ತಿನ ದಿನವಾಗಿತ್ತು. ಆದುದರಿಂದ ಯೆಹೂದ್ಯ ಅಧಿಕಾರಿಗಳು ಗುಣಹೊಂದಿದ ಆ ಮನುಷ್ಯನಿಗೆ, “ಇಂದು ಸಬ್ಬತ್ತಿನ ದಿನ, ನೀನು ಹಾಸಿಗೆಯನ್ನು ಎತ್ತಿಕೊಂಡು ನಡೆಯುವುದು ನಿಷಿದ್ಧ,” ಎಂದು ಹೇಳಿದರು.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಂಜೆಯವರೆಗೆ ಅಶುದ್ಧರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು