1 ಕೊರಿಂಥದವರಿಗೆ 6:15 - ಕನ್ನಡ ಸತ್ಯವೇದವು C.L. Bible (BSI)15 ನಿಮ್ಮ ದೇಹಗಳು ಕ್ರಿಸ್ತಯೇಸುವಿನ ಅಂಗಗಳೆಂದು ನಿಮಗೆ ತಿಳಿಯದೇ? ಹಾಗಾದರೆ ನಾನು ಕ್ರಿಸ್ತಯೇಸುವಿನ ಅಂಗಗಳನ್ನು ತೆಗೆದು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಎಂದಿಗೂ ಮಾಡಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಹೀಗಿರಲಾಗಿ, ನಾನು ಕ್ರಿಸ್ತನ ಅಂಗಗಳನ್ನು ತೆಗೆದುಕೊಂಡು ಅವುಗಳನ್ನು ಸೂಳೆಯ ಅಂಗಗಳನ್ನಾಗಿ ಮಾಡಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಮ್ಮ ದೇಹಗಳು ಕ್ರಿಸ್ತ ಯೇಸುವಿನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ಕ್ರಿಸ್ತ ಯೇಸುವಿನ ಅಂಗಗಳಾಗಿರುವಂಥವುಗಳನ್ನೇ ತೆಗೆದುಕೊಂಡು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಬೇಡ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತುಮ್ಚಿ ಆಂಗಾ ಕ್ರಿಸ್ತಾಚ್ಯಾ ಆಂಗಾಚಿ ಭಾಗಾ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ತಸೆ ಹೊಲ್ಯಾರ್ ಕ್ರಿಸ್ತಾಚ್ಯಾ ಅಂಗಾಚಿ ಭಾಗಾ ಘೆವ್ನ್ ವೆಭಿಚಾರ್ ಕರ್‍ತಲ್ಯಾ ಬಾಯ್ಕೊಮನ್ಸಿಚಿ ಭಾಗಾ ಕರುಕ್ ಹೊತಾ ಕಾಯ್? ಬಿಲ್ಕುಲ್ ನಾ. ಅಧ್ಯಾಯವನ್ನು ನೋಡಿ |