Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:18 - ಕನ್ನಡ ಸತ್ಯವೇದವು C.L. Bible (BSI)

18 ವ್ಯಭಿಚಾರದಿಂದ ದೂರ ಸರಿಯಿರಿ. ಮಾನವನು ಮಾಡುವ ಇತರ ಪಾಪಗಳು ದೇಹಕ್ಕೆ ಬಾಹಿರವಾದವುಗಳು. ವ್ಯಭಿಚಾರ ಮಾಡುವಾತನು ತನ್ನ ದೇಹಕ್ಕೇ ದ್ರೋಹ ಬಗೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ, ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರಗಾಗಿವೆ, ಆದರೆ ಜಾರತ್ವ ಮಾಡುವವನು ತನ್ನ ದೇಹಕ್ಕೆ ಹಾನಿಕರವಾದ ಪಾಪವನ್ನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ಲೈಂಗಿಕ ಪಾಪದಿಂದ ಓಡಿಹೋಗಿರಿ. ಒಬ್ಬನು ಮಾಡುವ ಇತರ ಪಾಪಗಳೆಲ್ಲಾ ಅವನ ದೇಹದ ಹೊರಗಾಗಿವೆ. ಆದರೆ ಲೈಂಗಿಕ ಪಾಪ ಮಾಡುವ ವ್ಯಕ್ತಿ ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಲೈಂಗಿಕ ಅನೈತಿಕತೆಯಿಂದ ಓಡಿಹೋಗಿರಿ. ಮನುಷ್ಯನು ಮಾಡುವ ಇತರ ಎಲ್ಲಾ ಪಾಪಗಳು ಅವನ ದೇಹದ ಹೊರಗಿರುತ್ತವೆ, ಆದರೆ ಲೈಂಗಿಕ ಅನೈತಿಕತೆಯು, ತನ್ನ ದೇಹಕ್ಕೆ ವಿರುದ್ಧವಾಗಿ ಪಾಪಕ್ಕೆ ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತಸೆ ಹೊಲ್ಯಾರ್ ಅನೈತಿಕ್ ಸಮಂದಾಕ್ನಾ ಧುರ್ ಪಳಾ, ಮಾನುಸ್ ಕರ್‍ತಲಿ ಸಗ್ಳಿ ಪಾಪಾ ತೊ ಆಂಗಾಚ್ಯಾ ಭಾಯ್ರ್ ಕರ್‍ತಾ ಖರೆ ಅನೈತಿಕ್ ಪಾಪ್ ತೊ ಅಪ್ನಾಚ್ಯಾ ಆಂಗಾಚ್ಯಾ ವಿರೊದ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:18
19 ತಿಳಿವುಗಳ ಹೋಲಿಕೆ  

ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ನೀವು ಕೆಟ್ಟ ನಡತೆಯನ್ನು ಬಿಟ್ಟು ಪರಿಶುದ್ಧರಾಗಿ ಜೀವಿಸಬೇಕು ಎಂಬುದು ದೇವರ ಚಿತ್ತ.


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ನೀನು ಯೌವನದ ಭಾವೋದ್ರೇಕಗಳಿಗೆ ತುತ್ತಾಗದೆ ಧರ್ಮ, ವಿಶ್ವಾಸ, ಪ್ರೀತಿ ಮತ್ತು ಶಾಂತಿ - ಇವುಗಳನ್ನು ರೂಢಿಸಿಕೋ. ಈ ದಿಸೆಯಲ್ಲಿ ಶುದ್ಧ ಹೃದಯದಿಂದ ದೇವರನ್ನು ಅರಸುವವನು ನಿನಗೆ ಆದರ್ಶವಾಗಿರಲಿ.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ನೀವು ದೇವಜನರಾಗಿರುವುದರಿಂದ ನಿಮ್ಮಲ್ಲಿ ಲೈಂಗಿಕ ಪಾಪವಾಗಲಿ, ಅಶುದ್ಧ ಕೃತ್ಯಗಳಾಗಲಿ ಮತ್ತು ದುರಾಶೆಯಾಗಲಿ ಇರಬಾರದು. ಇಂಥ ಸುದ್ದಿಗೂ ನೀವು ಅವಕಾಶ ಕೊಡಬಾರದು.


ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.


ದೇವರ ಅರಿವೇ ಇಲ್ಲದ ಅನ್ಯಜನರಂತೆ ಕಾಮಾತಿರೇಕದಿಂದ ವರ್ತಿಸಬಾರದು.


ಆದುದರಿಂದ, ಮಾನವರು ಮನಸ್ಸಿನ ಆಶಾಪಾಶಗಳಿಗೆ ಬಲಿಯಾಗಿ ತಮ್ಮ ದೇಹಗಳಿಂದ ತಮ್ಮತಮ್ಮಲ್ಲೇ ಅಶ್ಲೀಲಕೃತ್ಯಗಳೆಸಗಲೆಂದು ದೇವರು ಅವರನ್ನು ಅಶುದ್ಧ ನಡತೆಗೆ ಬಿಟ್ಟುಬಿಟ್ಟರು.


ದೈಹಿಕ ವ್ಯಾಮೋಹದ ದುಷ್ಪರಿಣಾಮಗಳು ತಿಳಿದೇ ಇವೆ: ಹಾದರ, ಅಶುದ್ಧತೆ, ಕಾಮುಕತನ,


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಂಜೆಯವರೆಗೆ ಅಶುದ್ಧರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು