1 ಕೊರಿಂಥದವರಿಗೆ 6:2 - ಕನ್ನಡ ಸತ್ಯವೇದವು C.L. Bible (BSI)2 ದೇವಜನರು ಈ ಲೋಕಕ್ಕೆ ನ್ಯಾಯತೀರ್ಪು ಮಾಡುತ್ತಾರೆಂದು ನಿಮಗೆ ತಿಳಿಯದೋ? ಲೋಕವೇ ನಿಮ್ಮಿಂದ ತೀರ್ಪು ಪಡೆಯಬೇಕಾಗಿರುವಲ್ಲಿ ಸಣ್ಣಪುಟ್ಟ ವಿಷಯಗಳನ್ನು ತೀರ್ಮಾನಿಸಿಕೊಳ್ಳಲು ನೀವು ಅಸಮರ್ಥರೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪವಾದ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅನರ್ಹರಾಗಿದ್ದೀರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬದು ನಿಮಗೆ ತಿಳಿಯದೋ? ಲೋಕವು ನಿವ್ಮಿುಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವದಕ್ಕೆ ಅಯೋಗ್ಯರಾಗಿದ್ದೀರೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವಜನರು ಲೋಕಕ್ಕೆ ತೀರ್ಪು ಮಾಡುವರೆಂಬುದು ನಿಮಗೆ ತಿಳಿಯದೋ? ದೇವಜನರು ಲೋಕಕ್ಕೆ ನ್ಯಾಯತೀರ್ಪು ಮಾಡುವವರಾಗಿದ್ದರೆ, ಇಂಥ ಚಿಕ್ಕ ಸಂಗತಿಗಳ ಬಗ್ಗೆಯೂ ನ್ಯಾಯತೀರ್ಪು ಮಾಡಬಲ್ಲರೆಂಬುದು ನಿಶ್ಚಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಕರ್ತದೇವರ ಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ನೀವೇ ಲೋಕವನ್ನು ನ್ಯಾಯತೀರ್ಪು ಮಾಡಬೇಕಾಗಿರುವಲ್ಲಿ, ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅಯೋಗ್ಯರಾಗಿದ್ದೀರೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ದೆವಾಚಿ ಲೊಕಾ ಜಗಾಚಿ ಝಡ್ತಿ ಕರ್ತಾತ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ತುಮಿ ಜರ್ ಹ್ಯಾ ಜಗಾಚಿ ಝಡ್ತಿ ಕರ್‍ತಲೆ ತರ್ ಹ್ಯಾ ಚಿಲ್ಲರ್ ವಿಶಯಾಂಚೆ ನಿರ್ನಯ್ ಕರುಕ್ ತುಮ್ಚ್ಯಾನ್ ಹೊಯ್ನಾ ಕಾಯ್? ಅಧ್ಯಾಯವನ್ನು ನೋಡಿ |
ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.