Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:3 - ಕನ್ನಡ ಸತ್ಯವೇದವು C.L. Bible (BSI)

3 ದೇವದೂತರಿಗೂ ನಾವು ನ್ಯಾಯತೀರ್ಪು ಮಾಡುವೆವೆಂದು ನಿಮಗೆ ತಿಳಿಯದೋ? ಹೀಗಿರುವಲ್ಲಿ, ಈ ಜೀವನದ ಸಮಸ್ಯೆಗಳನ್ನು ಕುರಿತು ನ್ಯಾಯತೀರ್ಪು ಮಾಡುವುದು ಎಷ್ಟೋ ಸುಲಭವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಹಾಗಾದರೆ ಇಹಲೋಕ ಜೀವನದ ವಿಷಯಗಳ ಕುರಿತು ನಾವು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾವು ದೇವದೂತರಿಗೂ ತೀರ್ಪುಮಾಡುವೆವೆಂಬದು ನಿಮಗೆ ತಿಳಿಯದೋ? ಐಹಿಕ ಜೀವದ ಕಾರ್ಯಗಳನ್ನು ಕುರಿತು ನಾವು ತೀರ್ಪುಮಾಡುವದು ದೊಡ್ಡದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮುಂದಿನ ಕಾಲದಲ್ಲಿ ನಾವು ದೇವದೂತರಿಗೂ ನ್ಯಾಯತೀರಿಸುತ್ತೇವೆ ಎಂಬುದು ನಿಮಗೆ ಗೊತ್ತಿದೆ. ಆದ್ದರಿಂದ ಈ ಜೀವಿತದ ಸಂಗತಿಗಳನ್ನು ಕುರಿತು ನಾವು ತೀರ್ಪುಮಾಡಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಈ ಜೀವನದ ವ್ಯಾಜ್ಯಗಳನ್ನು ಕುರಿತು ತೀರ್ಪು ಮಾಡುವುದು ಎಷ್ಟು ಸುಲಭವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದೆವಾಚ್ಯಾ ದುತಾತ್ನಿ ಸೈತ್ ಅಮಿ ಝಡ್ತಿ ಕರ್ತಾವ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ತರ್ ಹ್ಯಾ ಜಿವನಾಚ್ಯಾ ಚಿಲ್ಲರ್ ಸಂಗ್ತಿಯಾಂಚ್ಯಾ ವಿಶಯಾತ್ ತುಮಿ ನಿರ್ನಯ್ ದಿತಲ್ಲೆ ಮೊಟೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:3
14 ತಿಳಿವುಗಳ ಹೋಲಿಕೆ  

ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಇಂಥ ವಿಷಯಗಳು ತಲೆದೋರಿದಾಗ ಧರ್ಮಸಭೆಯಿಂದ ಮಾನ್ಯತೆ ಪಡೆಯದವರನ್ನು ಏಕೆ ನ್ಯಾಯತೀರ್ಪುಗಾರರನ್ನಾಗಿ ಮಾಡುತ್ತೀರಿ?


ಮುಳ್ಳು ಪೊದೆಗಳ ನಡುವೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿದ ಇನ್ನಿತರರು. ಆದರೆ ಕಾಲಕ್ರಮೇಣ ಬಾಳಿನ ಬವಣೆಗಳು, ಐಶ್ವರ್ಯದ ವ್ಯಾಮೋಹಗಳು ಹಾಗೂ ಸುಖಭೋಗಗಳು ಇವರನ್ನು ಅದುಮಿಬಿಡುತ್ತವೆ; ಇವರ ಫಲ ಪಕ್ವವಾಗುವುದಿಲ್ಲ.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ಯುದ್ಧಕ್ಕೆ ಹೋಗುವ ಯಾವ ಸೈನಿಕನೂ ಲೋಕವ್ಯವಹಾರಗಳಲ್ಲಿ ಸಿಕ್ಕಿಕೊಳ್ಳನು. ಏಕೆಂದರೆ, ತನ್ನನ್ನು ಸೈನ್ಯಕ್ಕೆ ಸೇರಿಸಿಕೊಂಡವನನ್ನು ಮೆಚ್ಚಿಸಲು ಅವನು ಪ್ರಯತ್ನಿಸುತ್ತಾನೆ.


ಪಾಪಮಾಡಿದ ದೇವದೂತರನ್ನೂ ದೇವರು ದಂಡಿಸದೆ ಬಿಡಲಿಲ್ಲ. ಅವರನ್ನು ನರಕಕ್ಕೆ ದಬ್ಬಿದರು. ಅಂತಿಮ ತೀರ್ಪಿನ ದಿನವನ್ನು ಎದುರುನೋಡುತ್ತಾ ಕಾದಿರುವಂತೆ, ಕಾರಿರುಳ ಕೂಪದಲ್ಲಿ ಕೂಡಿಹಾಕಿದರು.


ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು I ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು II ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ I ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ II


ಆ ಕೊಂಬು ಪವಿತ್ರ ಪ್ರಜೆಯೊಂದಿಗೆ ಯುದ್ಧಮಾಡುತ್ತಿತ್ತು. ಮಹಾವೃದ್ಧನು ಬಂದು ಮಹೋನ್ನತರ ಆ ಪವಿತ್ರ ಪ್ರಜೆಗೆ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.


ಯಾರ ಕೈಕೆಳಗೆ ಗುಲಾಮರಾಗಿರಲು ನಿಮ್ಮನ್ನೇ ಒಪ್ಪಿಸಿಕೊಳ್ಳುತ್ತೀರೋ ಅವರಿಗೆ ನೀವು ಶರಣಾಗುತ್ತೀರಿ. ನೀವು ಪಾಪಕ್ಕೆ ಗುಲಾಮರಾದರೆ ಮರಣವೇ ನಿಮಗೆ ಗತಿ; ದೇವರಿಗೆ ಶರಣಾದರೆ ಸತ್ಸಂಬಂಧವೇ ಅದರ ಸತ್ಪರಿಣಾಮ.


ನಿಮ್ಮ ದೇಹಗಳು ಕ್ರಿಸ್ತಯೇಸುವಿನ ಅಂಗಗಳೆಂದು ನಿಮಗೆ ತಿಳಿಯದೇ? ಹಾಗಾದರೆ ನಾನು ಕ್ರಿಸ್ತಯೇಸುವಿನ ಅಂಗಗಳನ್ನು ತೆಗೆದು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಇಲ್ಲ.


“ಇಬ್ಬರೂ ಒಂದೇ ಶರೀರವಾಗುತ್ತಾರೆ,” ಎಂದು ಬರೆಯಲಾಗಿದೆ. ವೇಶ್ಯೆಯ ಸಂಸರ್ಗ ಮಾಡುವವನು ಅವಳೊಂದಿಗೆ ಒಂದೇ ದೇಹವಾಗುತ್ತಾನೆ, ಎಂದು ನಿಮಗೆ ತಿಳಿಯದೇ?


ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು