Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:5 - ಕನ್ನಡ ಸತ್ಯವೇದವು C.L. Bible (BSI)

5 ಇದು ನಿಮಗೆ ನಾಚಿಕೆಗೇಡು! ಸಹೋದರರ ವ್ಯಾಜ್ಯವನ್ನು ತೀರ್ಮಾನಿಸಬಲ್ಲ ಜಾಣನು ನಿಮ್ಮಲ್ಲಿ ಒಬ್ಬನೂ ಇಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಹೇಳುತ್ತಿದ್ದೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಮ್ಮಲ್ಲಿ ನಾಚಿಕೆ ಹುಟ್ಟಿಸುವದಕ್ಕೆ ಇದನ್ನು ಹೇಳುತ್ತೇನೆ. ಏನು, ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಜಾಣನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಮ್ಮನ್ನು ನಾಚಿಕೆಪಡಿಸಲು ಹೀಗೆ ಹೇಳುತ್ತಿದ್ದೇನೆ. ವಿಶ್ವಾಸಿಗಳಾಗಿರುವ ಇಬ್ಬರು ಸಹೋದರರ ನಡುವೆ ಉಂಟಾಗಿರುವ ವ್ಯಾಜ್ಯಕ್ಕೆ ತೀರ್ಪು ನೀಡಬಲ್ಲ ಜ್ಞಾನಿಯೊಬ್ಬನು ನಿಮ್ಮ ಸಭೆಯಲ್ಲಿ ಇಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮಲ್ಲಿ ನಾಚಿಕೆ ಹುಟ್ಟಿಸುವುದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರನ ನ್ಯಾಯವನ್ನು ವಿವೇಚಿಸಿ ತೀರ್ಮಾನ ಕೊಡುವ ಜ್ಞಾನಿಯು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತುಮ್ಕಾ ಲಜ್ಜ್ಯಾ ಕರುಚಿ! ಖರೆಚ್‌ಬಿ ಭಾವ್ ಭಾವಾಂಚ್ಯಾ ಮದ್ದಿ ನ್ಯಾಯ್ ನಿರ್ನಯ್ ಕರುನ್ ದಿತಲೊ ಎಕ್ಲೊಬಿ ಬುದ್ವಂತ್ ಮಾನುಸ್ ತುಮ್ಚ್ಯಾ ಮದ್ದಿ ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:5
12 ತಿಳಿವುಗಳ ಹೋಲಿಕೆ  

ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಬರೆಯಲಿಲ್ಲ. ನಮ್ಮ ನೆಚ್ಚಿನ ಮಕ್ಕಳಾದ ನಿಮ್ಮನ್ನು ಎಚ್ಚರಿಸಲೆಂದು ಬರೆದೆನು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಉದ್ದ ಕೂದಲು ಪುರುಷನಿಗೆ ಲಜ್ಜಾಸ್ಪದವೆಂಬುದೂ ನೀಳಕೂದಲು ಸ್ತ್ರೀಗೆ ಭೂಷಣವೆಂಬುದೂ ಸ್ವಭಾವಸಿದ್ಧವಲ್ಲವೇ? ಕೇಶರಾಶಿ ಸ್ತ್ರೀಗೆ ರಕ್ಷಾವರಣವಲ್ಲವೇ?


ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ಧಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು!


ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.


ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ಅನನೀಯ ಪ್ರತ್ಯುತ್ತರವಾಗಿ, “ಪ್ರಭೂ, ಈ ಮನುಷ್ಯ ಜೆರುಸಲೇಮಿನಲ್ಲಿ ತಮ್ಮ ಭಕ್ತರಿಗೆ ಎಷ್ಟು ಕೇಡುಮಾಡಿದ್ದಾನೆಂಬುದನ್ನು ಅನೇಕರ ಬಾಯಿಂದ ಕೇಳಿದ್ದೇನೆ.


ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ ನ್ಯಾಯವಿಚಾರಣೆಗೆ ದೇವಜನರ ಮುಂದೆ ಹೋಗದೆ, ಅನ್ಯಜನರ ಮುಂದೆ ಹೋಗುವಷ್ಟು ಸೊಕ್ಕು ನಿಮಗೆಲ್ಲಿಂದ ಬಂದಿತು?


ಇಂಥ ವಿಷಯಗಳು ತಲೆದೋರಿದಾಗ ಧರ್ಮಸಭೆಯಿಂದ ಮಾನ್ಯತೆ ಪಡೆಯದವರನ್ನು ಏಕೆ ನ್ಯಾಯತೀರ್ಪುಗಾರರನ್ನಾಗಿ ಮಾಡುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು