Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:8 - ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಬದಲು ನೀವೇ ಅನ್ಯಾಯಮಾಡುತ್ತೀರಿ; ನೀವೇ ಸುಲಿಗೆಮಾಡುತ್ತೀರಿ; ಅದೂ ಸಹೋದರರಿಗೆ ಹೀಗೆ ಮಾಡುತ್ತೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ನೀವು ನಿಮ್ಮ ಸ್ವಂತ ಸಹೋದರರಿಗೆ ಅನ್ಯಾಯವನ್ನು ಮತ್ತು ಮೋಸವನ್ನು ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ನೀವು ಅನ್ಯಾಯಮಾಡುತ್ತೀರಿ; ಆಸ್ತಿಯನ್ನು ಅಪಹರಿಸುತ್ತೀರಿ; ಸಹೋದರರಲ್ಲಿಯೇ ಹೀಗೆ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಸ್ವತಃ ನೀವೇ ಕೆಟ್ಟದ್ದನ್ನು ಮಾಡುತ್ತೀರಿ ಮತ್ತು ಮೋಸ ಮಾಡುತ್ತೀರಿ! ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನಿಗೇ ನೀವು ಹೀಗೆ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದಕ್ಕೆ ಬದಲಾಗಿ ನೀವೇ ನಿಮ್ಮ ಸಹೋದರರಿಗೆ ಅನ್ಯಾಯ ಮಾಡಿ ಮೋಸಮಾಡುತ್ತೀರಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಶೆ ಕರ್‍ತಲ್ಯಾ ಬದ್ಲಾಕ್, ತುಮಿಚ್ ದುಸ್ರ್ಯಾಕ್ನಿ ಅನ್ನ್ಯಾಯ್ ನಾ ಹೊಲ್ಯಾರ್ ಲುಕ್ಷಾನ್ ಕರ್ತ್ಯಾಶಿ ನ್ಹಯ್? ತೆ ಬಿ ತುಮ್ಚ್ಯಾಚ್ ಭಾವಾಕ್ನಿ ಅನಿ ಭೆನಿಯಾಕ್ನಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:8
8 ತಿಳಿವುಗಳ ಹೋಲಿಕೆ  

ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ದೇವರು ಪಕ್ಷಪಾತಿಯಲ್ಲ.


ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.


ನರಹತ್ಯೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ಮೋಸಮಾಡಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು,” ಎಂದು ಯೇಸು ಉತ್ತರವಿತ್ತರು.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಇತರರ ಹೊಲಗದ್ದೆಗಳನ್ನು ದುರಾಸೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ.


ಮತ್ತೊಬ್ಬನನ್ನು ಬಲಾತ್ಕರಿಸಬೇಡ; ಅವನ ಸೊತ್ತನ್ನು ಅಪಹರಿಸಬೇಡ. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಡ.


ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, ‘ಅಯ್ಯಾ, ನಿನಗೆ ನಾನು ಅನ್ಯಾಯಮಾಡಿಲ್ಲ. ದಿನಕ್ಕೊಂದು ಬೆಳ್ಳಿನಾಣ್ಯದಂತೆ ನೀನು ನನ್ನೊಡನೆ ಒಪ್ಪಂದಮಾಡಿಕೊಳ್ಳಲಿಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು