Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:21 - ಕನ್ನಡ ಸತ್ಯವೇದವು C.L. Bible (BSI)

21 ದೇವರು ಕರೆದಾಗ ನೀನು ದಾಸ್ಯದಲ್ಲಿದ್ದೆಯೋ? ಚಿಂತೆಯಿಲ್ಲ. ಆದರೆ ಸ್ವತಂತ್ರನಾಗುವ ಅವಕಾಶ ದೊರೆತರೆ ಅದನ್ನು ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದೀಯೋ? ಅದರ ಕುರಿತು ಚಿಂತಿಸಬೇಡ ಆದರೆ ಬಿಡುಗಡೆ ಹೊಂದುವುದಕ್ಕೆ ಸಾಧ್ಯವಾಗುವುದಾದರೆ ನೀನು ಸ್ವತಂತ್ರನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದಿಯೋ? ಅದಕ್ಕೆ ಚಿಂತೆಮಾಡಬೇಡ. ಆದರೆ ಬಿಡುಗಡೆ ಹೊಂದುವದಕ್ಕೆ ನಿನ್ನ ಕೈಯಿಂದಾದರೆ ಸ್ವತಂತ್ರನಾಗುವದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರು ನಿನ್ನನ್ನು ಕರೆದಾಗ ನೀನು ಗುಲಾಮನಾಗಿದ್ದರೆ, ಚಿಂತಿಸಬೇಡ. ಆದರೆ ನೀನು ಬಿಡುಗಡೆಯಾಗಲು ಸಾಧ್ಯವಿದ್ದರೆ, ಬಿಡುಗಡೆಯಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದೀಯೋ? ಅದಕ್ಕೆ ಚಿಂತೆ ಮಾಡಬೇಡ. ಆದರೆ ಬಿಡುಗಡೆಯಾಗುವುದಕ್ಕೆ ನೀನು ಶಕ್ತನಾದರೆ ಅದನ್ನೇ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತುಕಾ ಬಲ್ವುನ್ ಹೊಲ್ಲೆ ತನ್ನಾ ತಿಯಾ ಗುಲಾಮ್ ಹೊತ್ತೆ ಕಾಯ್? ತಿಯಾ ಚಿಂತಾ ಕರುನಕೊ, ಸ್ವತಂತ್ರ್ ಹೊತಲೊ ಅವ್ಕಾಸ್ ತುಕಾ ಗಾವ್ಲೊ ತರ್ ಕುಶಿನಿ ಘೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:21
14 ತಿಳಿವುಗಳ ಹೋಲಿಕೆ  

ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ಪರತಂತ್ರರಾಗಿರಲಿ, ಸ್ವತಂತ್ರರಾಗಿರಲಿ-ನಾವೆಲ್ಲರೂ ಒಂದೇ ದೇಹವಾಗುವಂತೆ ಒಂದೇ ಆತ್ಮದಿಂದ ದೀಕ್ಷಾಸ್ನಾನ ಹೊಂದಿದ್ದೇವೆ. ಒಂದೇ ಆತ್ಮವನ್ನು ನಮ್ಮೆಲ್ಲರಿಗೂ ಪಾನವಾಗಿ ಕೊಡಲಾಗಿದೆ.


ಅಲ್ಲದೆ, ಅನ್ನಪಾನಗಳಿಗೆ ಏನು ಮಾಡೋಣ ಎಂದು ತೊಳಲಾಡಬೇಡಿ, ಪೇಚಾಡಬೇಡಿ.


ನಿಮ್ಮ ಚಿಂತೆಯನ್ನೆಲ್ಲಾ ಅವರಿಗೇ ಬಿಟ್ಟುಬಿಡಿ. ನಿಮ್ಮ ಮೇಲೆ ಅವರಿಗೆ ಲಕ್ಷ್ಯವಿದೆ.


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ನಾನು ಯಾವುದೋ ಕೊರತೆಯಲ್ಲಿರುವೆನೆಂದು ಸೂಚಿಸಲು ಇದನ್ನು ಹೇಳುತ್ತಿಲ್ಲ. ನಾನು ಯಾವ ಸ್ಥಿತಿಯಲ್ಲಿದ್ದರೂ ತೃಪ್ತಿಯಿಂದಿರಲು ಕಲಿತುಕೊಂಡಿದ್ದೇನೆ.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ದೇವರು ಕರೆದಾಗ ಒಬ್ಬನು ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ಮುಂದುವರಿಯಲಿ.


ಪ್ರಭುವಿನಿಂದ ಕರೆಹೊಂದಿದವನು ದಾಸನಾಗಿದ್ದರೂ ಪ್ರಭುವಿನಲ್ಲಿ ಅವನು ಸ್ವತಂತ್ರನೆ. ಅದೇ ಮೇರೆಗೆ ಸ್ವತಂತ್ರನಾದವನು ಕ್ರಿಸ್ತಯೇಸುವಿನಿಂದ ಕರೆಹೊಂದಿದ್ದರೆ ಅವನು ಕ್ರಿಸ್ತಯೇಸುವಿನ ದಾಸನೇ ಆಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು