1 ಕೊರಿಂಥದವರಿಗೆ 7:22 - ಕನ್ನಡ ಸತ್ಯವೇದವು C.L. Bible (BSI)22 ಪ್ರಭುವಿನಿಂದ ಕರೆಹೊಂದಿದವನು ದಾಸನಾಗಿದ್ದರೂ ಪ್ರಭುವಿನಲ್ಲಿ ಅವನು ಸ್ವತಂತ್ರನೆ. ಅದೇ ಮೇರೆಗೆ ಸ್ವತಂತ್ರನಾದವನು ಕ್ರಿಸ್ತಯೇಸುವಿನಿಂದ ಕರೆಹೊಂದಿದ್ದರೆ ಅವನು ಕ್ರಿಸ್ತಯೇಸುವಿನ ದಾಸನೇ ಆಗುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯಾವನಾದರೂ ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನಾಗಿದ್ದಾನೆ. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದಾಗ ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯಾವನು ಮತ್ತೊಬ್ಬನ ದಾಸನಾಗಿದ್ದು ಕರ್ತನ ಸೇವೆಗೆ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನು. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದೇವರು ಕರೆದಾಗ ಗುಲಾಮನಾಗಿದ್ದವನು ಪ್ರಭುವಿನಲ್ಲಿ ಬಿಡುಗಡೆಯಾಗಿದ್ದಾನೆ. ಅವನು ಪ್ರಭುವಿಗೆ ಸೇರಿದವನಾಗಿದ್ದಾನೆ. ಅದೇರೀತಿಯಲ್ಲಿ ದೇವರು ಕರೆದಾಗ ಸ್ವತಂತ್ರನಾಗಿದ್ದವನು ಈಗ ಕ್ರಿಸ್ತನ ಗುಲಾಮನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ದೇವರು ಕರೆದಾಗ ಒಬ್ಬನು ದಾಸನಾಗಿದ್ದರೂ, ಅವನು ಕರ್ತ ದೇವರಲ್ಲಿ ಸ್ವತಂತ್ರನು. ಅದೇ ಪ್ರಕಾರ, ಒಬ್ಬನು ಸ್ವತಂತ್ರನಾಗಿದ್ದಾಗ ಕರ್ತದೇವರ ಕರೆಹೊಂದಿದ್ದರೆ, ಅವನು ಕ್ರಿಸ್ತನಿಗೆ ದಾಸನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಕಶ್ಯಾಕ್ ಮಟ್ಲ್ಯಾರ್ ಕಶೆ ಧನಿಯಾಚೆ ಬಲ್ವನ್ ಗಾವ್ತಾನಾ ಸ್ವತಂತ್ರ್ ಅಸಲ್ಲೊ ತೊ ಕ್ರಿಸ್ತಾಚೊ ಗುಲಾಮ್ ಹೊತಾ ತಸೆಚ್ ಧನಿಯಾಚೆ ಬಲ್ವನ್ ಗಾವ್ತಾನಾ ಗುಲಾಮ್ ಹೊತ್ತೊ ಧನಿಯಾತ್ ಸ್ವತಂತ್ರ್ ಹೊತಾ. ಅಧ್ಯಾಯವನ್ನು ನೋಡಿ |