Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:32 - ಕನ್ನಡ ಸತ್ಯವೇದವು C.L. Bible (BSI)

32 ನೀವು ಚಿಂತೆಯಿಲ್ಲದೆ ಇರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ಪ್ರಭುವಿನ ಸೇವೆಯಲ್ಲಿ ತತ್ಪರನಾಗಿರುತ್ತಾನೆ; ಪ್ರಭುವನ್ನು ಮೆಚ್ಚಿಸಲು ಶ್ರಮಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನೀವು ಚಿಂತೆ ಇಲ್ಲದೆ ಇರಬೇಕೆಂಬುದೇ ನನ್ನ ಬಯಕೆಯಾಗಿದೆ. ಮದುವೆಯಾಗಿಲ್ಲದ ವ್ಯಕ್ತಿಯು ಪ್ರಭುವಿನ ಸೇವೆಯಲ್ಲಿ ನಿರತನಾಗಿರುತ್ತಾನೆ. ಅವನು ಪ್ರಭುವನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನೀವು ಚಿಂತೆ ಇಲ್ಲದೆ ಇರಬೇಕೆಂಬುದು ನನ್ನ ಇಷ್ಟ. ಮದುವೆ ಆಗದವನು ಕರ್ತ ಯೇಸುವನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತ ಯೇಸುವಿನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತುಮಿ ಉಸ್ಕೊ ಕರಿನಸ್ತಾನಾ ರ್‍ಹಾವ್ಚೆ ಮನುನ್ ಮಾಜಿ ಆಶಾ, ಲಗಿನ್ ಹೊಯ್ನಸಲ್ಲ್ಯಾ ಘೊಮನ್ಸಾಕ್ನಿ ಧನಿಯಾಚ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಉಸ್ಕೊ ರ್‍ಹಾತಾ; ಅಪ್ನಿ ಧನಿಯಾಚ್ಯಾ ಮನಾ ಸಾರ್ಕೊ ಕಸೊ ಹೊವ್ಚೊ ಮನುನ್ ತೊ ಚಿಂತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:32
8 ತಿಳಿವುಗಳ ಹೋಲಿಕೆ  

ದಿಕ್ಕಿಲ್ಲದೆ ಒಬ್ಬಂಟಿಗಳಾಗಿರುವ ವಿಧವೆ ದೇವರ ಮೇಲೆ ಭರವಸೆಯಿಟ್ಟು ಹಗಲಿರುಳು ಪ್ರಾರ್ಥನೆಗಳಲ್ಲೂ ವಿಜ್ಞಾಪನೆಗಳಲ್ಲೂ ನಿರತಳಾಗಿರುತ್ತಾಳೆ.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಪ್ರಭುವಿನ ಮೇಲೆ ಹಾಕು ನಿನ್ನ ಚಿಂತಾಭಾರವನು I ಉದ್ಧರಿಸುವನು, ಸಜ್ಜನರನೆಂದಿಗೂ ಕದಲಗೊಡಿಸನು II


ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಅವನು ಕೇವಲ ಕೂಲಿಯಾಳು; ಕುರಿಗಳ‍ ಚಿಂತೆ ಅವನಿಗಿಲ್ಲ.


ಮದುವೆ ಆದವನು ಲೋಕವ್ಯವಹಾರಗಳಲ್ಲಿ ಮಗ್ನನಾಗುತ್ತಾನೆ. ತನ್ನ ಸತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು