Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:34 - ಕನ್ನಡ ಸತ್ಯವೇದವು C.L. Bible (BSI)

34 ಅಂಥವನು ಉಭಯ ಸಂಕಟಕ್ಕೆ ಸಿಕ್ಕಿಕೊಳ್ಳುತ್ತಾನೆ. ಮದುವೆಯಾಗದ ಮಹಿಳೆ ಅಥವಾ ಕನ್ನಿಕೆ ಪ್ರಭುವಿನ ಸೇವೆಯಲ್ಲಿ ನಿರತಳಾಗಿರುತ್ತಾಳೆ. ದೇಹಾತ್ಮಗಳೆರಡನ್ನೂ ಪ್ರಭುವಿಗೆ ಮೀಸಲಾಗಿಡುತ್ತಾಳೆ. ಆದರೆ ವಿವಾಹಿತ ಸ್ತ್ರೀ ಲೋಕವ್ಯವಹಾರಗಳಲ್ಲಿ ಮಗ್ನಳಾಗಿರುತ್ತಾಳೆ. ತನ್ನ ಪತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದರಂತೆ ಮುತೈದೆಗೂ, ಕನ್ನಿಕೆಗೂ ವ್ಯತ್ಯಾಸವುಂಟು. ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಹೇಗೆ ಪವಿತ್ರಳಾಗಿರಬೇಕೆಂದು ಕರ್ತನ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ. ಆದರೆ ಮದುವೆಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅದರಂತೆ ಮುತ್ತೈದೆಗೂ ಕನ್ನಿಕೆಗೂ ವ್ಯತ್ಯಾಸವುಂಟು. ಮದುವೆಯಿಲ್ಲದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅವನು ತನ್ನ ಹೆಂಡತಿಯನ್ನು ಮತ್ತು ಪ್ರಭುವನ್ನು ಮೆಚ್ಚಿಸುವುದರ ಬಗ್ಗೆ ಆಲೋಚಿಸಬೇಕಾಗುತ್ತದೆ. ಮದುವೆಯಾಗಿಲ್ಲದ ಸ್ತ್ರೀಯಾಗಲಿ ಹುಡುಗಿಯಾಗಲಿ ಪ್ರಭುವಿನ ಸೇವೆಯಲ್ಲಿ ನಿರತಳಾಗಿರುತ್ತಾಳೆ. ಆಕೆ ತನ್ನ ದೇಹ ಮತ್ತು ಆತ್ಮಗಳನ್ನು ಸಂಪೂರ್ಣವಾಗಿ ಪ್ರಭುವಿಗೆ ಕೊಡಲು ಬಯಸುತ್ತಾಳೆ. ಆದರೆ ಮದುವೆಯಾದ ಸ್ತ್ರೀಯು ಈ ಲೋಕದ ಕಾರ್ಯಗಳಲ್ಲಿ ನಿರತಳಾಗಿರುತ್ತಾಳೆ. ಆಕೆ ತನ್ನ ಗಂಡನನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಇದರಿಂದ ಅವನ ಆಸಕ್ತಿಗಳಲ್ಲಿ ಭಿನ್ನತೆಯಿರುತ್ತದೆ. ಮದುವೆಯಾಗದ ಮಹಿಳೆ ಅಥವಾ ಕನ್ಯೆ ದೇಹಾತ್ಮಗಳಲ್ಲಿ ಕರ್ತ ಯೇಸುವಿಗೆ ಸಮರ್ಪಿತರಾಗಿರುವ ಉದ್ದೇಶ ಹೊಂದಿದವರಾಗಿ, ಕರ್ತ ಯೇಸುವಿನ ಕಾರ್ಯಗಳಲ್ಲಿ ಆಸಕ್ತಳಾಗಿರುತ್ತಾರೆ. ಆದರೆ ಮದುವೆಯಾದವಳು, ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಲಗಿನ್ ಹೊಯ್ನಸಲ್ಲೆ ಚೆಡು ನಾ ಹೊಲ್ಯಾರ್ ಬಾಯ್ಕೊಮಾನುಸ್ ಧನಿಯಾಚ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಚಿಂತಾ ಕರ್‍ತಾ, ಆಂಗಾನ್ ಅನಿ ಆತ್ಮ್ಯಾನ್ ಎಕ್ ಒಪ್ಸುನ್ ದಿಲ್ಲೆ ಜಿವನ್ ಕರುಕ್ ತಿ ಬಗ್ತಾ ಖರೆ ಲಗಿನ್ ಹೊಲ್ಲ್ಯಾ ಬಾಯ್ಕೊಮನ್ಸಿಕ್ ಸಂಸಾರಾಚ್ಯಾ ಸಂಗ್ತಿಯಾಂಚೊ ಉಸ್ಕೊ ಅಪ್ನಾಚ್ಯಾ ಘೊವಾಚ್ಯಾ ಮನಾಕ್ ಯೆಯ್ ಸರ್ಕೆ ಕಶೆ ರ್‍ಹಾತಲೆ ಮನುನ್ ತಿ ಚಿಂತಾ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:34
16 ತಿಳಿವುಗಳ ಹೋಲಿಕೆ  

ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ.


ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.


ಇಂಥ ಇನ್ನಿತರ ಕಷ್ಟಸಂಕಟಗಳನ್ನು ಅನುಭವಿಸಿದ್ದೇನೆ. ಅಷ್ಟೇ ಅಲ್ಲದೆ, ಎಲ್ಲ ಸಭೆಗಳ ಹಿತಚಿಂತನೆಯೂ ನನ್ನನ್ನು ಅನುದಿನವೂ ಕಾಡಿಸಿದೆ.


ನಿಮ್ಮ ದೇಹದ ಯಾವುದೇ ಅಂಗವು ದುಷ್ಕೃತ್ಯವನ್ನೆಸಗುವ ಸಾಧನವಾಗುವಂತೆ ಪಾಪದ ಕಾರ್ಯಕ್ಕೆ ಅದನ್ನು ಒಪ್ಪಿಸದಿರಿ. ಬದಲಾಗಿ ಸತ್ತು ಜೀವಕ್ಕೆ ಬಂದವರಂತೆ ದೇವರಿಗೆ ನಿಮ್ಮನ್ನೇ ಸಮರ್ಪಿಸಿಕೊಳ್ಳಿರಿ; ನಿಮ್ಮ ಅಂಗಗಳನ್ನು ಸತ್ಕಾರ್ಯ ಸಾಧನಗಳನ್ನಾಗಿ ದೇವರಿಗೆ ಒಪ್ಪಿಸಿಕೊಡಿರಿ.


ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ನಿಮ್ಮ ಮೇಲೆ ನನಗಿರುವ ಅದೇ ಅಕ್ಕರೆಯನ್ನು ತೀತನಲ್ಲೂ ಮೂಡಿಸಿದ ದೇವರಿಗೆ ಕೃತಜ್ಞತೆ ಸಲ್ಲಬೇಕು.


ತನ್ನ ಕುಟುಂಬವನ್ನೇ ಜವಾಬ್ದಾರಿಯುತವಾಗಿ ನಡೆಸಲು ತಿಳಿಯದವನು ದೇವರ ಸಭೆಯನ್ನು ಹೇಗೆ ತಾನೇ ಪರಿಶೀಲಿಸಿಯಾನು?


ಅವನು ಕೇವಲ ಕೂಲಿಯಾಳು; ಕುರಿಗಳ‍ ಚಿಂತೆ ಅವನಿಗಿಲ್ಲ.


ಮದುವೆ ಆದವನು ಲೋಕವ್ಯವಹಾರಗಳಲ್ಲಿ ಮಗ್ನನಾಗುತ್ತಾನೆ. ತನ್ನ ಸತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಾನೆ.


ನಿಮ್ಮನ್ನು ಬಂಧಿಸಲು ಅಲ್ಲ, ಬೆಂಬಲಿಸಲು ಇದನ್ನು ಹೇಳುತ್ತಿದ್ದೇನೆ. ನೀವು ಸಜ್ಜನರಾಗಿ ನಡೆದುಕೊಂಡು, ಭಿನ್ನಭಾವವಿಲ್ಲದೆ ಪ್ರಭುವಿನ ಪಾದಸೇವೆ ಮಾಡಬೇಕೆಂಬುದೇ ನನ್ನ ಆಶೆ.


ದಿಕ್ಕಿಲ್ಲದೆ ಒಬ್ಬಂಟಿಗಳಾಗಿರುವ ವಿಧವೆ ದೇವರ ಮೇಲೆ ಭರವಸೆಯಿಟ್ಟು ಹಗಲಿರುಳು ಪ್ರಾರ್ಥನೆಗಳಲ್ಲೂ ವಿಜ್ಞಾಪನೆಗಳಲ್ಲೂ ನಿರತಳಾಗಿರುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು