Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:4 - ಕನ್ನಡ ಸತ್ಯವೇದವು C.L. Bible (BSI)

4 ಸತಿಗೆ ತನ್ನ ದೇಹದ ಮೇಲೆ ಅಧಿಕಾರವಿಲ್ಲ. ಆದರೆ ಪತಿಗೆ ಆ ಅಧಿಕಾರವಿದೆ. ಪತಿಗೆ ತನ್ನ ದೇಹದ ಮೇಲೆ ಅಧಿಕಾರವಿಲ್ಲ, ಆದರೆ ಸತಿಗೆ ಆ ಅಧಿಕಾರವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಅದು ಹೆಂಡತಿಗುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಆಕೆಯ ಗಂಡನಿಗೆ ಆಕೆಯ ದೇಹದ ಮೇಲೆ ಅಧಿಕಾರವಿದೆ. ಅದೇರೀತಿ, ಗಂಡನಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಅವನ ಹೆಂಡತಿಗೆ ಅವನ ದೇಹದ ಮೇಲೆ ಅಧಿಕಾರವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೆಂಡತಿಯ ಸ್ವಂತ ದೇಹದ ಮೇಲೆ ಆಕೆಗೆ ಅಧಿಕಾರವಿಲ್ಲ, ಅದು ಗಂಡನಿಗಿದೆ. ಹಾಗೆಯೇ, ಗಂಡನ ಸ್ವಂತ ದೇಹದ ಮೇಲೆ ಅವನಿಗೆ ಅಧಿಕಾರವಿಲ್ಲ, ಅದು ಅವನ ಹೆಂಡತಿಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಬಾಯ್ಕೊಕ್ ಅಪ್ನಾಚ್ಯಾ ಆಂಗಾ ವೈರ್ ಹಕ್ಕ್ ನಾ, ಘೊವಾಕ್ ಹಕ್ಕ್ ಹಾಯ್! ತಸೆಚ್ ಘೊವಾಕ್ ಅಪ್ನಾಚ್ಯಾ ಆಂಗಾ ವೈರ್ ಹಕ್ಕ್ ನಾ, ಬಾಯ್ಕೊಕ್ ಹಕ್ಕ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:4
5 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೇಳುವುದನ್ನು ಕೇಳಿ; ತನ್ನ ಹೆಂಡತಿಯನ್ನು ಅವಳ ದುರ್ನಡತೆಯ ಕಾರಣದಿಂದಲ್ಲದೆ ಬಿಟ್ಟುಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನೂ ವ್ಯಭಿಚಾರಿಯಾಗುತ್ತಾನೆ.”


ಆಮೇಲೆ ಅವಳಿಗೆ: “ದೀರ್ಘಕಾಲ ನನ್ನವಳಾಗಿ ಜೀವಿಸು. ಇನ್ನು ಮುಂದೆ ವ್ಯಭಿಚಾರಮಾಡಬೇಡ. ಇತರರ ಸಹವಾಸ ನಿನಗೆ ಬೇಡ. ನಾನು ಸಹ ಅದರಂತೆಯೇ ನಿನ್ನವನಾಗಿ ಜೀವಿಸುವೆನು,” ಎಂದೆನು.


ಪತಿಯಾದವನು ತನ್ನ ಸತಿಗೆ ಸಲ್ಲತಕ್ಕ ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲಿ. ಅಂತೆಯೇ, ಸತಿಯಾದವಳು ತನ್ನ ಪತಿಗೆ ಸಲ್ಲತಕ್ಕ ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲಿ.


ಆದುದರಿಂದ ಸತಿಪತಿಯರು ಒಬ್ಬರಿಗೊಬ್ಬರು ದಾಂಪತ್ಯಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಧ್ಯಾನ, ಪ್ರಾರ್ಥನೆಗಳಲ್ಲಿ ನಿರತರಾಗಿರಲು, ಸ್ವಲ್ಪಕಾಲ ಒಬ್ಬರನ್ನೊಬ್ಬರು ಅಗಲಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿ ಇರಬೇಕು. ಅನಂತರ ಒಂದುಗೂಡಬೇಕು. ಇಲ್ಲದೆ ಹೋದರೆ, ನಿಮ್ಮಲ್ಲಿ ಸಂಯಮ ಇಲ್ಲದಿರುವುದನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋದಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು