Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 8:1 - ಕನ್ನಡ ಸತ್ಯವೇದವು C.L. Bible (BSI)

1 ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳ ವಿಷಯದಲ್ಲಿ ಈಗ ನೋಡೋಣ. ನಮ್ಮೆಲ್ಲರಿಗೆ ಜ್ಞಾನವುಂಟೆಂದು ಬಲ್ಲೆವು. ಜ್ಞಾನವು ಉಬ್ಬಿಸುತ್ತದೆ, ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಈಗ ವಿಗ್ರಹಕ್ಕೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳ ವಿಷಯ: “ನಮ್ಮೆಲ್ಲರಿಗೂ ತಿಳುವಳಿಕೆಯಿದೆ,” ಎಂದು ಬಲ್ಲೆವು. ತಿಳುವಳಿಕೆಯು ಅಹಂಕಾರಿಗಳನ್ನಾಗಿ ಮಾಡುತ್ತದೆ. ಆದರೆ ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅನಿ ಅತ್ತಾ ಮುರ್ತಿಯಾಕ್ನಿ ಭೆಟ್ವಲ್ಲ್ಯಾ ಖಾನ್ಯಾಚ್ಯಾ ವಿಶಯಾತ್ ತುಮಿ ಸಾಂಗ್ತ್ಯಾಶಿ ತಸೆಚ್ ಅಮ್ಕಾ ಸಗ್ಳೆ ಶಾನ್‍ಪಾನ್ ಹಾಯ್ ಮನುನ್ ಅಮ್ಕಾ ಗೊತ್ತ್ ಹಾಯ್ ಖರೆ ಶಾನ್‍ಪಾನ್ ಅಮ್ಕಾ ಹಂಕಾರಿ ಕರ್‍ತಾ, ಪ್ರೆಮ್ ಎವ್ಡೊಚ್ ಅಮ್ಕಾ ವಾಡಾವಳ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 8:1
35 ತಿಳಿವುಗಳ ಹೋಲಿಕೆ  

ಆದರೆ ಎಲ್ಲರಿಗೂ ಇದರ ಅರಿವಿಲ್ಲ. ಕೆಲವರು ಸಾಂಪ್ರದಾಯಕವಾಗಿ ಬಂದ ವಿಗ್ರಹಾರಾಧನೆಯಲ್ಲಿ ಭಾಗವಹಿಸಿ, ವಿಗ್ರಹಕ್ಕೆ ಅರ್ಪಿತವಾದ ನೈವೇದ್ಯಪದಾರ್ಥವನ್ನು ತಿನ್ನುತ್ತಾರೆ. ಆದರೆ ಅವರ ಮನಸ್ಸಾಕ್ಷಿ ದುರ್ಬಲವಾಗಿರುವುದರಿಂದ ತಾವು ಕಲುಷಿತರಾದೆವೆಂದು ಭಾವಿಸಿಕೊಳ್ಳುತ್ತಾರೆ.


ಮಾಂಸಾಹಾರಿಯು ಸಸ್ಯಾಹಾರಿಯನ್ನು ಹೀನೈಸಬಾರದು; ಸಸ್ಯಾಹಾರಿಯು ಮಾಂಸಾಹಾರಿಯನ್ನು ದೋಷಿಯೆಂದು ತೀರ್ಪುಕೊಡಬಾರದು. ಏಕೆಂದರೆ, ಇಬ್ಬರೂ ದೇವರಿಂದ ಅಂಗೀಕೃತರು.


ತಮ್ಮ ದೃಷ್ಟಿಯಲ್ಲಿ ತಾವೇ ಜ್ಞಾನಿಗಳೆಂದು ತಮ್ಮ ಗಣನೆಯಲ್ಲಿ ತಾವೇ ವಿವೇಕಿಗಳೆಂದು ಭಾವಿಸುವವರಿಗೆ ಧಿಕ್ಕಾರ !


ಇಷ್ಟಾದರೂ ನಿನ್ನ ವಿರುದ್ಧ ಹೇಳಬೇಕಾದ ಕೆಲವು ಆಪಾದನೆಗಳಿವೆ. ಬಿಳಾಮನ ದುರ್ಬೋಧನೆಯನ್ನು ಅವಲಂಬಿಸುವವರು ಕೆಲವರು ನಿನ್ನಲ್ಲಿ ಇದ್ದಾರೆ. ಈ ಬಿಳಾಮನೇ ಇಸ್ರಯೇಲ್ ಜನರು ಪಾಪದಲ್ಲಿ ಬೀಳುವಂತೆಮಾಡಲು ಬಾಲಾಕನನ್ನು ಪ್ರಚೋದಿಸಿದವನು. ಈ ಕಾರಣ, ಅವರು ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿಂದರು; ಲೈಂಗಿಕ ಅನೈತಿಕತೆಗೆ ತುತ್ತಾದರು.


ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.


ಯಾರಾದರೂ ತಾನು ಬಲ್ಲವನೆಂದು ಕೊಚ್ಚಿಕೊಳ್ಳುವುದಾದರೆ ತಾನು ತಿಳಿಯಬೇಕಾದುದನ್ನು ಅವನು ಸರಿಯಾಗಿ ತಿಳಿದಿರುವುದಿಲ್ಲ.


ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ.


ಇಡೀ ದೇಹವು ಕ್ರಿಸ್ತಯೇಸುವನ್ನೇ ಆಧರಿಸಿದೆ. ಅವರಲ್ಲಿಯೇ ಎಲ್ಲ ನರನಾಡಿಗಳು, ಕೀಲುಗಂಟು಼ಗಳು ಒಂದಾಗಿ ಕೆಲಸಮಾಡುತ್ತವೆ. ಪ್ರತಿಯೊಂದು ಅಂಗವೂ ತನ್ನ ಕೆಲಸವನ್ನು ಸೂಕ್ತರೀತಿಯಲ್ಲಿ ನಿರ್ವಹಿಸುವುದರಿಂದ ಇಡೀ ದೇಹ ಬೆಳೆಯುತ್ತಾ, ಪ್ರೀತಿಯಲ್ಲಿ ಪ್ರವರ್ಧಿಸುತ್ತಾ ಕ್ಷೇಮಾಭಿವೃದ್ಧಿಯನ್ನು ಪಡೆಯುತ್ತದೆ.


ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ಕೇಡನು ನೀ ಮಾಡಿದೆ ಭಯಪಡದೆ ನೋಡರಾರೂ ಎಂದುಕೊಂಡಿದ್ದೆ, ನೀನು ಜ್ಞಾನಿ ವಿವೇಕಿಯೆಂದು ತಿಳಿದುಕೊಂಡೇ ಮರುಳಾದೆ; ‘ಏಕೈಕಳು ನಾನೇ, ಇನ್ನಾರೂ ಇಲ್ಲ’ ಎಂದುಕೊಂಡೆ.


ಆ ಮಹಿಳೆಯರು ತಮ್ಮ ದೇವತೆಗಳಿಗೆ ಮಾಡಿದ ಬಲಿಔತಣಗಳಲ್ಲಿ ಭಾಗಿಗಳಾಗಲು ಇಸ್ರಯೇಲರನ್ನು ಆಹ್ವಾನಿಸುತ್ತಿದ್ದರು. ಇವರು ಪ್ರಸಾದ ಸ್ವೀಕರಿಸಿ ಆ ದೇವತೆಗಳಿಗೆ ತಲೆಬಾಗುತ್ತಿದ್ದರು.


ಆಗ ಯಾರಾದರೂ, “ಇದು ವಿಗ್ರಹಗಳಿಗೆ ಬಲಿಕೊಟ್ಟದ್ದು,” ಎಂದು ಹೇಳಿದರೆ, ಹಾಗೆ ತಿಳಿಸಿದವನ ಸಲುವಾಗಿ ಹಾಗೂ ಮನಸ್ಸಾಕ್ಷಿಯ ಸಲುವಾಗಿ ಅದನ್ನು ಊಟಮಾಡಬೇಡಿ.


ವಿಶ್ವಾಸಿಗಳಾಗಿರುವ ಯೆಹೂದ್ಯೇತರಿಗಾದರೋ ನಾವೀಗಲೇ ಪತ್ರವನ್ನು ಕಳುಹಿಸಿದ್ದೇವೆ. ಅದರಲ್ಲಿ ಅವರು ವಿಗ್ರಹಗಳಿಗೆ ಅರ್ಪಿಸಿದ ನೈವೇದ್ಯವನ್ನು ಸೇವಿಸಬಾರದು, ಅನೈತಿಕತೆಯಿಂದ ದೂರವಿರಬೇಕು, ರಕ್ತವನ್ನಾಗಲೀ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲೀ ತಿನ್ನಬಾರದು, ಎಂದು ತೀರ್ಮಾನಕೊಟ್ಟಿದ್ದೇವೆ,” ಎಂದರು.


ಆದುದರಿಂದ ನಮ್ಮ ಪೂರ್ವಜರಿಂದಾಗಲೀ ನಮ್ಮಿಂದಾಗಲೀ ಹೊರಲಾಗದಂಥ ಹೊರೆಯನ್ನು ಈ ಅನುಯಾಯಿಗಳ ಮೇಲೆ ಏಕೆ ಹೊರಿಸುತ್ತೀರಿ? ಹೀಗೆ ದೇವರನ್ನೇಕೆ ಕೆಣಕುತ್ತೀರಿ?


ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.


ನಿಮ್ಮಲ್ಲಿ ಕೆಲವರು ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದಾರೆ. ಲೌಕಿಕ ಜ್ಞಾನದಿಂದ ನಿರರ್ಥಕವಾಗಿ ಉಬ್ಬಿಕೊಂಡಿದ್ದಾರೆ. ತಾವು ಬಹಳ ವಿನಯಶಾಲಿಗಳೆಂದು ಹೆಚ್ಚಳಪಡುತ್ತಾರೆ. ಇಂಥವರು ನಿಮ್ಮನ್ನು ಕಡೆಗಾಣಿಸದಂತೆ ಎಚ್ಚರದಿಂದಿರಿ. ಇವರು ಯೇಸುಕ್ರಿಸ್ತರೆಂಬ ಶಿರಸ್ಸಿನಿಂದ ಬೇರ್ಪಟ್ಟಿದ್ದಾರೆ.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ನೀವು ಜಂಬ ಕೊಚ್ಚಿಕೊಳ್ಳುವುದು ತರವಲ್ಲ. ಒಂದಿಷ್ಟು ಹುಳಿ, ಹಿಟ್ಟನ್ನೆಲ್ಲಾ ಹುದುಗೆಬ್ಬಿಸುತ್ತದೆಂಬುದನ್ನು ನೀವು ಚೆನ್ನಾಗಿ ಬಲ್ಲಿರಿ.


ಹೀಗಿರಲು, ನೀವು ಸೊಕ್ಕಿನಿಂದ ಮೆರೆಯಲು ಕಾರಣವಾದರೂ ಎಲ್ಲಿದೆ? ಬದಲಿಗೆ, ನೀವು ವ್ಯಸನಪಟ್ಟು ಅವನನ್ನು ನಿಮ್ಮ ಸಭಾಕೂಟದಿಂದ ಬಹಿಷ್ಕರಿಸಬೇಕಾಗಿತ್ತಲ್ಲವೆ?


ಇನ್ನು ನಾನು ನಿಮ್ಮ ಬಳಿಗೆ ಬರುವುದಿಲ್ಲ ಎಂದು ಭಾವಿಸಿ ಕೆಲವರು ಅಹಂಕಾರಿಗಳಾಗಿ ಮೆರೆಯುತ್ತಿದ್ದಾರೆಂದು ತಿಳಿದುಬಂದಿದೆ.


ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ಧಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು!


ಏಕೆಂದರೆ, ಕ್ರಿಸ್ತಯೇಸುವಿನಲ್ಲಿ ನೀವು ಎಲ್ಲ ದೃಷ್ಟಿಯಿಂದಲೂ ಶ್ರೀಮಂತರು, ಜ್ಞಾನಸಂಪನ್ನರು ಮತ್ತು ವಾಕ್‍ಚತುರರು ಆಗಿದ್ದೀರಿ.


ಈ ವಿಷಯದಲ್ಲಿ ನಿನಗಿರುವ ವೈಯಕ್ತಿಕ ನಂಬಿಕೆ ದೇವರಿಗೆ ಮತ್ತು ನಿನಗೆ ಮಾತ್ರ ತಿಳಿದಿರಲಿ. ತಾನು ಅನುಮೋದಿಸಿ ಮಾಡಿದುದರ ಬಗ್ಗೆ ಅನುಮಾನಪಡದವನು ಧನ್ಯನು.


ಯಾವ ಪದಾರ್ಥವು ಸ್ವತಃ ಅಶುದ್ಧವಲ್ಲವೆಂದು ಪ್ರಭುಯೇಸುವಿನಲ್ಲಿ ನಾನು ಖಚಿತವಾಗಿ ಹೇಳಬಲ್ಲೆ. ಆದರೆ, ಒಂದು ಪದಾರ್ಥವನ್ನು ಅಶುದ್ಧವೆಂದು ಯಾರಾದರೂ ಭಾವಿಸಿದರೆ ಅದು ಅವನಿಗೆ ಅಶುದ್ಧವೇ ಆಗುತ್ತದೆ.


ಹೀಗಿರುವಲ್ಲಿ ಸಸ್ಯಾಹಾರಿಯೇ, ನೀನು ನಿನ್ನ ಸಹೋದರನನ್ನು ದೋಷಿಯೆಂದು ತೀರ್ಪಿಡುವುದೇಕೆ? ಮಾಂಸಹಾರಿಯೇ, ನಿನ್ನ ಸಹೋದರನನ್ನು ಹೀನೈಸುವುದೇಕೆ? ನಾವೆಲ್ಲರೂ ದೇವರ ನ್ಯಾಯಸ್ಥಾನದ ಮುಂದೆ ನಿಲ್ಲಬೇಕಲ್ಲವೆ?


ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ಆದ್ದರಿಂದ ಶಾಂತಿಸಮಾಧಾನಕ್ಕೂ ಪರಸ್ಪರ ಅಭ್ಯುದಯಕ್ಕೂ ಹಿತಕರವಾದವುಗಳನ್ನೇ ಅರಸೋಣ.


ಸಹೋದರರೇ, ನಿಮ್ಮ ಪ್ರಯೋಜನಕ್ಕಾಗಿ ಇದೆಲ್ಲವನ್ನು ನನಗೂ ಅಪೊಲೋಸನಿಗೂ ಅನ್ವಯಿಸಿ ಹೇಳಿದ್ದೇನೆ. ನೀವು ನಮ್ಮ ಆದರ್ಶವನ್ನು ಅನುಸರಿಸಬೇಕು. ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಬಾರದು. ನಿಮ್ಮಲ್ಲಿ ಯಾರೂ ಒಬ್ಬನ ಪಕ್ಷವಹಿಸಿ ಜಂಬ ಕೊಚ್ಚಿಕೊಂಡು ಮತ್ತೊಬ್ಬನನ್ನು ಕಡೆಗಣಿಸಬಾರದು.


ನೀವು ಅರಿತವರೆಂದು ತಿಳಿದೇ ಇದನ್ನು ಹೇಳುತ್ತಿದ್ಧೇನೆ. ನನ್ನ ಮಾತುಗಳನ್ನು ನೀವೇ ಪರಿಶೀಲಿಸಿನೋಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು