Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 8:13 - ಕನ್ನಡ ಸತ್ಯವೇದವು C.L. Bible (BSI)

13 ನಾನು ತಿನ್ನುವ ಆಹಾರ ನನ್ನ ಸಹೋದರನ ವಿಶ್ವಾಸಕ್ಕೆ ಅಡ್ಡಿಯಾಗುವುದಾದರೆ ಎಂದಿಗೂ ನಾನದನ್ನು ತಿನ್ನಲಾರೆ, ಅವನ ವಿಶ್ವಾಸಕ್ಕೆ ಅಡ್ಡಿಯನ್ನು ತರಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದದರಿಂದ ಭೋಜನಪದಾರ್ಥದಿಂದ ನನ್ನ ಸಹೋದರನಿಗೆ ವಿಘ್ನವಾಗುವದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವದಿಲ್ಲ; ನಾನು ನನ್ನ ಸಹೋದರನಿಗೆ ವಿಘ್ನವನ್ನುಂಟುಮಾಡಬಾರದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹೀಗಿರಲಾಗಿ, ನಾನು ತಿನ್ನುವ ಆಹಾರವು ನನ್ನ ಸಹೋದರನನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ. ನನ್ನ ಸಹೋದರನ ಪಾಪಕ್ಕೆ ನಾನು ಕಾರಣನಾಗಬಾರದೆಂದು ನಾನು ಮಾಂಸ ತಿನ್ನುವುದನ್ನು ನಿಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ನಾನು ತಿನ್ನುವಂಥದ್ದು ನನ್ನ ಸಹೋದರನನ್ನು ಪಾಪದಲ್ಲಿ ಬೀಳುವಂತೆ ಮಾಡುವುದಾದರೆ, ಎಂದಿಗೂ ನಾನು ಮಾಂಸವನ್ನು ತಿನ್ನುವುದೇ ಇಲ್ಲ. ಅವನ ಬೀಳುವಿಕೆಗೆ ಕಾರಣವಾಗುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತಸೆಮನುನ್ ಖಾನ್ ಮಾಜ್ಯಾ ಭಾವಾಕ್ ಪಾಪಾತ್ ಪಡುಕ್ ಕಾರನ್ ಹೊತಾ ಹೊಲ್ಯಾರ್ ಮಿಯಾ ಕನ್ನಾಚ್ ಮಾಸ್ ಖಾಯ್ನಾ, ಕಶ್ಯಾಕ್ ಮಟ್ಲ್ಯಾರ್ ಮಾಜೊ ಭಾವ್ ಪಾಪಾತ್ ಪಡ್ತಲೆ ಮಾಕಾ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 8:13
14 ತಿಳಿವುಗಳ ಹೋಲಿಕೆ  

ಮಾಂಸವನ್ನು ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ, ಅಥವಾ ಇನ್ನಾವುದೇ ಆಗಲಿ, ನಿನ್ನ ಸಹೋದರನಿಗೆ ಪಾಪಕ್ಕೆ ಕಾರಣವಾಗುವುದಾದರೆ ಅದನ್ನು ಬಿಟ್ಟುಬಿಡುವುದೇ ಲೇಸು.


ಒಬ್ಬನು ಬಲಹೀನನಾಗಿದ್ದರೆ, ಅವನೊಡನೆ ನಾನೂ ಬಲಹೀನನೇ. ಒಬ್ಬನು ಪಾಪಕ್ಕೆ ಬಲಿಯಾದರೆ ನಾನೂ ತಾಪದಿಂದ ಕುದಿಯುತ್ತೇನೆ.


ನಮ್ಮ ಸೇವಾಕಾರ್ಯವು ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಯಾವ ತೆರನಾದ ಅಡ್ಡಿಯನ್ನೂ ಒಡ್ಡಲಿಲ್ಲ.


“ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯ ಇದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ನನಗೆ ಪ್ರಯೋಜನಕರವಲ್ಲ. ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯವಿದೆ. ಆದರೆ ನಾನು ಯಾವುದಕ್ಕೂ ಗುಲಾಮನಲ್ಲ.


ನಾನಂತೂ ನನ್ನ ಸ್ವಂತ ಹಿತವನ್ನು ಲೆಕ್ಕಿಸದೆ ಸರ್ವರ ಉದ್ಧಾರಕ್ಕಾಗಿ ಅವರ ಹಿತವನ್ನು ಅಪೇಕ್ಷಿಸಿ, ಎಲ್ಲರನ್ನೂ ಎಲ್ಲದರಲ್ಲೂ ಮೆಚ್ಚಿಸಲು ಪ್ರಯತ್ನಿಸುತ್ತೇನೆ.


ಇತರರಿಗೆ ನಿಮ್ಮ ಮೇಲೆ ಇಂಥ ಹಕ್ಕಿದ್ದರೆ ಅದಕ್ಕಿಂತಲೂ ಹೆಚ್ಚು ಹಕ್ಕು ನಮಗಿರಬೇಕಲ್ಲವೇ? ಆದರೂ ನಾವು ಈ ಹಕ್ಕನ್ನು ಚಲಾಯಿಸಲೇ ಇಲ್ಲ. ಬದಲಿಗೆ, ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯಾವ ಅಡ್ಡಿಯೂ ಬಾರದಿರಲೆಂದು ಎಲ್ಲವನ್ನು ಸಹಿಸಿಕೊಂಡೆವು.


ಆದರೂ, ನಾವು ಇವರಿಗೆ ಅಡ್ಡಿಯಾಗಬಾರದು. ಎಂದೇ ನೀನು ಸರೋವರಕ್ಕೆ ಹೋಗಿ ಗಾಳಹಾಕು. ಮೊದಲು ಸಿಕ್ಕುವ ಮೀನನ್ನು ಎತ್ತಿಕೊಂಡು ಅದರ ಬಾಯಿ ತೆರೆದು ನೋಡು. ಅದರಲ್ಲಿ ಒಂದು ಬೆಳ್ಳಿ ನಾಣ್ಯ ದೊರಕುವುದು. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದರು.


ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು.


ಆದಕಾರಣ ಒಬ್ಬರ ವಿಷಯದಲ್ಲಿ ಒಬ್ಬರು ತೀರ್ಪುಮಾಡದೆ ಇರೋಣ. ಬದಲಾಗಿ ಸಹೋದರನಿಗೆ ಯಾವ ರೀತಿಯ ಅಡ್ಡಿಯನ್ನಾಗಲೀ ಅಡಚಣೆಗಳನ್ನಾಗಲೀ ಉಂಟುಮಾಡುವುದಿಲ್ಲವೆಂದು ತೀರ್ಮಾನಿಸಿಕೊಳ್ಳಿ.


ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಧರ್ಮಸಭೆಗಾಗಲಿ ಬಾಧಕರಾಗಿರಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು