Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 8:7 - ಕನ್ನಡ ಸತ್ಯವೇದವು C.L. Bible (BSI)

7 ಆದರೆ ಎಲ್ಲರಿಗೂ ಇದರ ಅರಿವಿಲ್ಲ. ಕೆಲವರು ಸಾಂಪ್ರದಾಯಕವಾಗಿ ಬಂದ ವಿಗ್ರಹಾರಾಧನೆಯಲ್ಲಿ ಭಾಗವಹಿಸಿ, ವಿಗ್ರಹಕ್ಕೆ ಅರ್ಪಿತವಾದ ನೈವೇದ್ಯಪದಾರ್ಥವನ್ನು ತಿನ್ನುತ್ತಾರೆ. ಆದರೆ ಅವರ ಮನಸ್ಸಾಕ್ಷಿ ದುರ್ಬಲವಾಗಿರುವುದರಿಂದ ತಾವು ಕಲುಷಿತರಾದೆವೆಂದು ಭಾವಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಈ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈ ವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಕ್ಕೆ ನೈವೇದ್ಯ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿದ್ದು ಕಲೆಯನ್ನು ಹೊಂದುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಎಲ್ಲಾ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಕೆಲವು ಜನರು ಇಂದಿನವರೆಗೂ ವಿಗ್ರಹಗಳನ್ನು ಆರಾಧಿಸುವ ರೂಢಿಯಲ್ಲಿದ್ದಾರೆ. ಹೀಗಿರಲಾಗಿ, ಆ ಜನರು ಮಾಂಸವನ್ನು ತಿನ್ನುವಾಗ ಅದು ವಿಗ್ರಹಕ್ಕೆ ಅರ್ಪಿತವಾದದ್ದೆಂದು ಆಲೋಚಿಸುತ್ತಾರೆ. ಆದರೆ ಈ ಮಾಂಸವನ್ನು ತಿನ್ನುವುದು ತಪ್ಪಲ್ಲ ಎಂಬ ದೃಢನಂಬಿಕೆ ಅವರಲ್ಲಿಲ್ಲ. ಆದ್ದರಿಂದ, ಅವರು ಮಾಂಸವನ್ನು ತಿನ್ನುವಾಗ ತಮ್ಮನ್ನು ದೋಷಿಗಳೆಂದು ಭಾವಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಈ ತಿಳುವಳಿಕೆಯು ಎಲ್ಲರಲ್ಲಿಯೂ ಇಲ್ಲ. ಕೆಲವರು ಇದುವರೆಗೂ ವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನುವ ರೂಢಿಯಲ್ಲಿದ್ದು, ಅವರು ವಿಗ್ರಹಕ್ಕೆ ನೈವೇದ್ಯ ಮಾಡಿ ತಿನ್ನುವುದಾಗಿ ಭಾವಿಸಿಕೊಳ್ಳುತ್ತಾರೆ. ಹೀಗೆ ಅವರ ಮನಸ್ಸಾಕ್ಷಿ ಬಲಹೀನವಾಗಿರುವುದರಿಂದ, ಅದು ಅಶುದ್ಧವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ಸಗ್ಳ್ಯಾಕ್ನಿ ಹೆ ಖರೆ ಗೊತ್ತ್ ನಾ. ಉಲ್ಲೆ ಜಾನಾ ಮುರ್ತಿ ಪುಜಾ ಕರ್‍ತಲ್ಯಾ ಸವಯಿತ್ ಪಡಲ್ಲೆ ಹಾತ್, ಕಾಲ್‍ ಪರ್ವಾ ಪತರ್‌ಬಿ ಪಡಲ್ಲೆ ಹಾತ್ ಅನಿ ಎವ್ಡೆ ತೆನಿ ಭುತ್ತುರ್ ಶಿರ್ಕುನ್ ಬಸ್ಲ್ಯಾತ್ ಕಿ ಮಟ್ಲ್ಯಾರ್ ಅತ್ತಾ ತೆನಿ ಖಾತಾತ್‍ ತೆ ಖಾನ್ ಖರೆಬಿ ಮುರ್ತಿಕ್ ಭೆಟ್ವಲ್ಲೆಚ್ ಮನುನ್ ತೆನಿ ಚಿಂತಾತ್, ಅನಿ ತೆಂಚೊ ಭುತ್ತುರ್‍ಲೊ ಬಳ್ ನಸಲ್ಲೊ ಮನ್ ಮ್ಹೆಳ್ವುತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 8:7
11 ತಿಳಿವುಗಳ ಹೋಲಿಕೆ  

ಯಾವ ಪದಾರ್ಥವು ಸ್ವತಃ ಅಶುದ್ಧವಲ್ಲವೆಂದು ಪ್ರಭುಯೇಸುವಿನಲ್ಲಿ ನಾನು ಖಚಿತವಾಗಿ ಹೇಳಬಲ್ಲೆ. ಆದರೆ, ಒಂದು ಪದಾರ್ಥವನ್ನು ಅಶುದ್ಧವೆಂದು ಯಾರಾದರೂ ಭಾವಿಸಿದರೆ ಅದು ಅವನಿಗೆ ಅಶುದ್ಧವೇ ಆಗುತ್ತದೆ.


ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು.


ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ.


ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ.


ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.


ಮನಸ್ಸಾಕ್ಷಿಯನ್ನು ಕೆದಕುವ ಪ್ರಶ್ನೆಗಳಿಗೆ ಎಡೆಕೊಡದೆ ಮಾಂಸದ ಮಾರುಕಟ್ಟೆಯಲ್ಲಿ ಮಾರುವುದೆಲ್ಲವನ್ನೂ ನೀವು ತಂದು ತಿನ್ನಬಹುದು.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು