1 ಕೊರಿಂಥದವರಿಗೆ 9:12 - ಕನ್ನಡ ಸತ್ಯವೇದವು C.L. Bible (BSI)12 ಇತರರಿಗೆ ನಿಮ್ಮ ಮೇಲೆ ಇಂಥ ಹಕ್ಕಿದ್ದರೆ ಅದಕ್ಕಿಂತಲೂ ಹೆಚ್ಚು ಹಕ್ಕು ನಮಗಿರಬೇಕಲ್ಲವೇ? ಆದರೂ ನಾವು ಈ ಹಕ್ಕನ್ನು ಚಲಾಯಿಸಲೇ ಇಲ್ಲ. ಬದಲಿಗೆ, ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯಾವ ಅಡ್ಡಿಯೂ ಬಾರದಿರಲೆಂದು ಎಲ್ಲವನ್ನು ಸಹಿಸಿಕೊಂಡೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಈ ಹಕ್ಕು ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಹಕ್ಕನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತಮಗೆ ಅಗತ್ಯವಾದುವುಗಳನ್ನು ನಿಮ್ಮಿಂದ ಪಡೆದುಕೊಳ್ಳಲು ಇತರರಿಗೆ ಹಕ್ಕಿದೆ. ಆದ್ದರಿಂದ ಖಂಡಿತವಾಗಿ ನಮಗೂ ಈ ಹಕ್ಕಿದೆ. ಆದರೆ ನಾವು ಈ ಹಕ್ಕನ್ನು ಉಪಯೋಗಿಸುವುದಿಲ್ಲ. ಕ್ರಿಸ್ತನ ಸುವಾರ್ತೆಗೆ ವಿಧೇಯರಾಗಲು ಯಾರಿಗೂ ತೊಂದರೆ ಆಗಕೂಡದೆಂದು ನಾವು ಪ್ರತಿಯೊಂದನ್ನು ಸಹಿಸಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇತರರಿಗೆ ನಿಮ್ಮ ಸಹಾಯದಲ್ಲಿ ಪಾಲು ಇದ್ದರೆ, ಅದರಲ್ಲಿ ನಮಗೂ ಹೆಚ್ಚು ಪಾಲು ಇರಬೇಕಲ್ಲಾ? ಆದರೆ ನಾವು ಈ ಅಧಿಕಾರವನ್ನು ಚಲಾಯಿಸಿಲ್ಲ. ಕ್ರಿಸ್ತ ಯೇಸುವಿಗೆ ಸೇರಿದ ಸುವಾರ್ತೆಗೆ ಅಡ್ಡಿಯಾಗಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ದುಸ್ರ್ಯಾಕ್ನಿ ತುಮ್ಚ್ಯಾ ವೈರ್ ಹೊ ಹಕ್ಕ್ ಹಾಯ್ ಹೊಲ್ಯಾರ್, ಅಮ್ಕಾ ಉಲ್ಲೊಸೊ ಜಾಸ್ತಿಚೊ ಹಕ್ಕ್ ಹಾಯ್ ನ್ಹಯ್? ಖರೆ ಅಮಿ ಹ್ಯೊ ಹಕ್ಕ್ ವಾಪ್ರುಕ್ ನಾವ್, ಹೆಚ್ಯಾ ಬದ್ಲಾಕ್, ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಕಸ್ಲಿಬಿ ಅಡ್ಕಳ್ ಯೆವ್ಚೆ ನ್ಹಯ್ ಮನುನ್ ಸಗ್ಳ್ಯಾ ಸಂಗ್ತಿಯಾ ಅಮಿ ಸೊಸುನ್ ಘೆವ್ನ್ ಜಾತಾಂವ್. ಅಧ್ಯಾಯವನ್ನು ನೋಡಿ |