Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:13 - ಕನ್ನಡ ಸತ್ಯವೇದವು C.L. Bible (BSI)

13 ದೇವಾಲಯದ ಸೇವೆಯಲ್ಲಿರುವವರು ದೇವಾಲಯದ ಆದಾಯದಿಂದ ಜೀವಿಸುತ್ತಾರೆ. ಬಲಿಪೀಠದ ಬಳಿ ಸೇವೆಮಾಡುವವರು ಅರ್ಪಿತವಾದ ಬಲಿಯಿಂದ ಪಾಲನ್ನು ಪಡೆಯುತ್ತಾರೆ. ಇದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೇವಾಲಯದ ಊಳಿಗವನ್ನು ನಡಿಸುವವರು ದೇವಾಲಯದ ಆದಾಯದಿಂದ ಊಟಮಾಡುತ್ತಾರೆಂಬದೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬದೂ ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವಾಲಯದಲ್ಲಿ ಸೇವೆಮಾಡುವ ಜನರು ದೇವಾಲಯದಿಂದಲೇ ತಮ್ಮ ಆಹಾರವನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಯಜ್ಞವೇದಿಕೆಯ ಬಳಿ ಸೇವೆ ಮಾಡುವವರು ಯಜ್ಞವೇದಿಕೆಯ ಮೇಲೆ ಅರ್ಪಿತವಾದದ್ದರಲ್ಲಿ ಸ್ವಲ್ಪಭಾಗವನ್ನು ಪಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವಾಲಯದಲ್ಲಿ ಸೇವೆಮಾಡುವವರು, ದೇವಾಲಯದಲ್ಲಿ ಊಟ ಪಡೆಯುತ್ತಾರೆಂಬುದೂ; ಬಲಿಪೀಠದ ಬಳಿಯಲ್ಲಿ ಸೇವೆಮಾಡುವವರು, ಆ ಬಲಿಪೀಠದ ಮೇಲೆ ಸಮರ್ಪಿಸಿದ್ದರಲ್ಲಿ ಪಾಲು ಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜೆ ಕೊನ್ ದೆವಾಚ್ಯಾ ಗುಡಿತ್ ಸೆವಾ ಕರ್ತಾತ್ ತೆನಿ ಥೈ ಯೆತಲ್ಯಾ ಕಮಾಯಿತ್ನಾ ಖಾತಾತ್, ಅನಿ ಜೆವ್ತಾತ್ ಅನಿ ಅಲ್ತಾರಿಚಿ ಸೆವಾ ಕರ್ತಲ್ಯಾಕ್ನಿ ಅಲ್ತಾರಿ ವೈರ್ ಭೆಟ್ವಲ್ಲ್ಯಾಚೊ ವಾಟೊ ಹಾಯ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:13
15 ತಿಳಿವುಗಳ ಹೋಲಿಕೆ  

ಅದು ಮಹಾಪರಿಶುದ್ಧವಾದ್ದರಿಂದ ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಅದನ್ನು ಪವಿತ್ರ ಸ್ಥಳದೊಳಗೆ, ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಊಟಮಾಡಬೇಕು.


ಇಸ್ರಯೇಲರ ಪದ್ಧತಿಯನ್ನು ಗಮನಿಸಿರಿ: ಬಲಿಯಾಗಿ ಅರ್ಪಿತವಾದುದನ್ನು ಭುಜಿಸುವವರು ಬಲಿಪೀಠದ ಸೇವೆಯಲ್ಲಿ ಭಾಗಿಯಾಗುತ್ತಾರಷ್ಟೆ.


ಇಸ್ರಯೇಲರ ಕುಟುಂಬಗಳಲ್ಲೆಲ್ಲಾ ಅವರನ್ನೇ, ಯಾಜಕ ಸೇವಾವೃತ್ತಿಗೆ ಆರಿಸಿಕೊಂಡೆ: ಅಂದರೆ, ಬಲಿಯರ್ಪಿಸುವುದಕ್ಕೆ, ಧೂಪಾರತಿ ಎತ್ತುವುದಕ್ಕೆ ಹಾಗು ‘ಏಫೋದ’ನ್ನು ಧರಿಸಿಕೊಳ್ಳುವುದಕ್ಕೆ ಆರಿಸಿಕೊಂಡೆ; ಇಸ್ರಯೇಲರು ಅರ್ಪಿಸುವ ಬಲಿಶೇಷದ ಹಕ್ಕನ್ನೂ ಅವರಿಗೆ ಅನುಗ್ರಹಿಸಿದೆ.


ಆದುದರಿಂದ ಮಿಕ್ಕ ಇಸ್ರಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ವಾಸ್ತ್ಯ ದೊರಕಲಿಲ್ಲ. ನಿಮ್ಮ ದೇವರಾದ ಸರ್ವೇಶ್ವರ ಅವರಿಗೆ ಹೇಳಿದಂತೆ ಸರ್ವೇಶ್ವರಸ್ವಾಮಿಯೇ ಅವರ ಸೊತ್ತು.


ಯಾಜಕನು ಆ ಕೊಬ್ಬನ್ನು ಬಲಿಪೀಠದ ಮೇಲೆ ಹೋಮಮಾಡಬೇಕು. ಎದೆಯ ಭಾಗ ಆರೋನನಿಗೂ ಅವನ ವಂಶಜರಿಗೂ ಸೇರಬೇಕು.


ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದುದನ್ನೂ ಮಹಾಪರಿಶುದ್ಧವಾದುದನ್ನೂ ಅವನು ಊಟಮಾಡಬಹುದು.


ನೀವು ಮತ್ತು ನಿಮ್ಮ ಮನೆಯವರು ಅದನ್ನು ಯಾವ ಸ್ಥಳದಲ್ಲಿಯಾದರೂ ಊಟಮಾಡಬಹುದು. ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ಪ್ರತಿಫಲ.


ಯಾರ ಕೈಕೆಳಗೆ ಗುಲಾಮರಾಗಿರಲು ನಿಮ್ಮನ್ನೇ ಒಪ್ಪಿಸಿಕೊಳ್ಳುತ್ತೀರೋ ಅವರಿಗೆ ನೀವು ಶರಣಾಗುತ್ತೀರಿ. ನೀವು ಪಾಪಕ್ಕೆ ಗುಲಾಮರಾದರೆ ಮರಣವೇ ನಿಮಗೆ ಗತಿ; ದೇವರಿಗೆ ಶರಣಾದರೆ ಸತ್ಸಂಬಂಧವೇ ಅದರ ಸತ್ಪರಿಣಾಮ.


ನಿಮಗೆ ತಿಳಿದಿರುವಂತೆ ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಆದರೆ ಪ್ರಥಮ ಬಹುಮಾನ ದೊರಕುವುದು ಒಬ್ಬನಿಗೆ ಮಾತ್ರ. ಅಂತೆಯೇ ಬಹುಮಾನವನ್ನು ಪಡೆದುಕೊಳ್ಳಲು ನೀವೂ ಓಡಿ.


ಹೊತ್ತು ಮುಳುಗಿದ ನಂತರ ಅವನು ಶುದ್ಧನಾಗಿ ನೈವೇದ್ಯ ಪದಾರ್ಥಗಳನ್ನು ಊಟಮಾಡಬಹುದು. ಏಕೆಂದರೆ ಅದು ಅವನ ಜೀವನಾಂಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು