Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:14 - ಕನ್ನಡ ಸತ್ಯವೇದವು C.L. Bible (BSI)

14 ಅದೇ ಪ್ರಕಾರ ಶುಭಸಂದೇಶ ಪ್ರಚಾರಕರು ಶುಭಸಂದೇಶ ಪ್ರಚಾರದ ಆದಾಯದಿಂದಲೇ ಜೀವನ ನಡೆಸಬೇಕೆಂದು ಪ್ರಭುವೇ ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸುವಾರ್ತೆಯನ್ನು ಬೋಧಿಸುವ ಜನರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸುವಾರ್ತೆಯನ್ನು ಬೋಧಿಸುವವರು ತಮಗೆ ಅಗತ್ಯವಾದುವುಗಳನ್ನು ಈ ಸೇವೆಯ ಮೂಲಕ ಪಡೆದುಕೊಳ್ಳಬೇಕೆಂದು ಪ್ರಭುವು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು, ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ಕರ್ತದೇವರು ಸಹ ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆಚ್ ಬರಿ ಖಬರ್ ಪ್ರಚಾರ್ ಕರ್ತಲ್ಯಾಕ್ನಿ ಬರ್‍ಯಾ ಖಬ್ರೆ ವೈನಾಚ್ ಜಿವನ್ ಕರುಕ್ ಪಾಜೆ ಮನುನ್ ಧನಿಯಾನುಚ್ ಹುಕುಮ್ ದಿಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:14
13 ತಿಳಿವುಗಳ ಹೋಲಿಕೆ  

ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು.


ದೇವರ ವಾಕ್ಯದ ಉಪದೇಶ ಪಡೆಯುವವನು ಉಪದೇಶ ಮಾಡುವವನೊಂದಿಗೆ ತನಗೆ ಇರುವ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ನಿಮ್ಮಿಂದ ಅನ್ನಪಾನಗಳನ್ನು ಪಡೆಯಲು ನನಗೆ ಹಕ್ಕಿಲ್ಲವೇ?


ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು.


“ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ.


ಅವರು ತನ್ನಂತೆಯೇ ಗುಡಾರಮಾಡುವ ಕಸುಬಿನವರಾಗಿದ್ದರಿಂದ ಅವರಲ್ಲೇ ತಂಗಿದ್ದು ಅವರೊಡನೆ ಕೆಲಸಮಾಡುತ್ತಾ ಬಂದನು.


ನಿಮಗೆ ಕ್ರಿಸ್ತಯೇಸುವಿನಲ್ಲಿ ಸಾವಿರಾರು ಮಂದಿ ಶಿಕ್ಷಕರು ಇರಬಹುದು. ಆದರೆ ನಿಮಗೆ ನಾನೊಬ್ಬನೇ ತಂದೆ. ಶುಭಸಂದೇಶದ ಮೂಲಕ ನಾನೇ ನಿಮ್ಮನ್ನು ಕ್ರಿಸ್ತಯೇಸುವಿನಲ್ಲಿ ಪಡೆದ ತಂದೆ.


ನಿಮ್ಮಲ್ಲಿ ಆಧ್ಯಾತ್ಮಿಕ ಬೀಜವನ್ನು ಬಿತ್ತನೆಮಾಡಿದ ನಾವು ಪ್ರತಿಫಲವಾಗಿ ದೈನಂದಿನ ಅಗತ್ಯಗಳನ್ನು ಅಪೇಕ್ಷಿಸುವುದು ಅತಿಯಾಯಿತೇ?


ಇತರರಿಗೆ ನಿಮ್ಮ ಮೇಲೆ ಇಂಥ ಹಕ್ಕಿದ್ದರೆ ಅದಕ್ಕಿಂತಲೂ ಹೆಚ್ಚು ಹಕ್ಕು ನಮಗಿರಬೇಕಲ್ಲವೇ? ಆದರೂ ನಾವು ಈ ಹಕ್ಕನ್ನು ಚಲಾಯಿಸಲೇ ಇಲ್ಲ. ಬದಲಿಗೆ, ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯಾವ ಅಡ್ಡಿಯೂ ಬಾರದಿರಲೆಂದು ಎಲ್ಲವನ್ನು ಸಹಿಸಿಕೊಂಡೆವು.


ಶುಭಸಂದೇಶವನ್ನು ನಾನು ಸಾರುತ್ತಿದ್ದೇನೆಂದು ಕೊಚ್ಚಿಕೊಳ್ಳುವುದಕ್ಕೂ ನನಗೆ ಆಸ್ಪದವಿಲ್ಲ. ಏಕೆಂದರೆ, ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಬದ್ಧನಾಗಿದ್ದೇನೆ. ಸಾರದಿದ್ದರೆ ನನಗೆ ಧಿಕ್ಕಾರವಿರಲಿ!


ಯೇಸುಕ್ರಿಸ್ತರ ಶುಭಸಂದೇಶವನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಬಂದಾಗ, ಪ್ರಭುವಿನ ಕೃಪೆಯಿಂದ ನನಗೆ ಸದವಕಾಶದ ಬಾಗಿಲು ತೆರೆದಿತ್ತು.


ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು