Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:15 - ಕನ್ನಡ ಸತ್ಯವೇದವು C.L. Bible (BSI)

15 ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ಚಲಾಯಿಸಲಿಲ್ಲ. ಚಲಾಯಿಸಬೇಕೆಂಬ ಉದ್ದೇಶದಿಂದಲೂ ಇದನ್ನು ಬರೆಯುತ್ತಿಲ್ಲ. ಅದಕ್ಕಿಂತಲೂ ಸಾಯುವುದೇ ಲೇಸು. ಈ ನನ್ನ ಹೆಮ್ಮೆಯನ್ನು ಯಾರೂ ಅಪಹರಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನಂತೂ ಇವುಗಳಲ್ಲಿ ಒಂದನ್ನೂ ಪಾಲಿಸಲಿಲ್ಲ. ನನಗೆ ಏನಾದರೂ ಸಿಕ್ಕಬೇಕೆಂಬ ಉದ್ದೇಶದಿಂದ ನಾನು ಇದನ್ನು ಬರೆಯುತ್ತಿಲ್ಲ. ಯಾರಾದರೂ ಈ ಹೊಗಳಿಕೆಯನ್ನು ವ್ಯರ್ಥಮಾಡುವುದಕ್ಕಿಂತ ಸಾಯುವುದೇ ನನಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ನಡಿಸಲಿಲ್ಲ; ನನ್ನ ವಿಷಯದಲ್ಲಿಯೂ ಹೀಗಾಗಬೇಕೆಂದು ಈ ಸಂಗತಿಗಳನ್ನು ನಾನು ಬರೆಯಲಿಲ್ಲ. ಅದಕ್ಕಿಂತ ಸಾಯುವದೇ ನನಗೆ ಲೇಸು. ಹೊಗಳಿಕೊಳ್ಳುವದಕ್ಕೆ ನನಗಿರುವ ಈ ಆಸ್ಪದವನ್ನು ಯಾರೂ ತೆಗೆದುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ಉಪಯೋಗಿಸಲಿಲ್ಲ. ನನಗೆ ಅಗತ್ಯವಾದುವುಗಳನ್ನು ಪಡೆದುಕೊಳ್ಳುವುದಕ್ಕಾಗಿಯೂ ನಾನು ಪ್ರಯತ್ನಿಸುತ್ತಿಲ್ಲ. ನಿಮಗೆ ಇದನ್ನು ಬರೆಯುತ್ತಿರುವ ಉದ್ದೇಶವೂ ಅದಲ್ಲ. ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವನ್ನು ಕಳೆದುಕೊಳ್ಳುವುದಕ್ಕಿಂತ ಸಾಯುವುದೇ ನನಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ನಾನಂತೂ ಇವುಗಳಲ್ಲಿ ಒಂದು ಹಕ್ಕನ್ನೂ ಉಪಯೋಗಿಸಿಕೊಂಡಿಲ್ಲ. ಅಂಥವುಗಳನ್ನು ನನಗೆ ನೀವು ಮಾಡಬೇಕೆಂಬ ಅಪೇಕ್ಷೆಯಿಂದ ಈ ಸಂಗತಿಗಳನ್ನು ನಾನು ಬರೆಯಲಿಲ್ಲ. ಯಾರಾದರೂ ಈ ಹೆಮ್ಮೆಯನ್ನು ನನ್ನಿಂದ ಅಪಹರಿಸುವುದಕ್ಕಿಂತಲೂ ಸಾಯುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ಮಿಯಾ ಅಸ್ಲ್ಯಾ ಖಲ್ಯಾಬಿ ಹಕ್ಕಾಂಚೊ ಅಧಿಕಾರ್ ವಾಪ್ರುಕ್ ನಾ ಅನಿ ಅತ್ತಾ ತಿ ಹಕ್ಕಾ ಮಾಕಾ ಗಾವ್ಕ್ ಪಾಜೆ ಮನುನ್‌ಬಿ ಮಿಯಾ ತುಮ್ಕಾ ಲಿವಿನಾ ಹೊಲಾ, ತಸೆ ಕರ್‍ತಲ್ಯಾಚ್ಯಾನ್ಕಿ ಮಿಯಾ ಮರಲ್ಲೆ ಬರೆ; ಮಾಜೆ ಮೊಟೆಪಾನ್ ಕೊನಾಚ್ಯಾಬಿ ಪಾಯ್ದ್ಯಾಕ್ ಪಡಿನಸಲ್ಲೆ ಸಾರ್ಕೆ ಕರುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:15
14 ತಿಳಿವುಗಳ ಹೋಲಿಕೆ  

ಸಹೋದರರೇ, ನಮ್ಮ ಶ್ರಮೆ ಹಾಗೂ ದುಡಿಮೆಗಳನ್ನು ನೀವು ಮರೆಯುವಂತಿಲ್ಲ. ನಿಮ್ಮಲ್ಲಿ ಯಾರಿಗೂ ನಾವು ಹೊರೆಯಾಗಬಾರದೆಂದು, ಬದುಕಿಗಾಗಿ ಹಗಲಿರುಳೂ ದುಡಿಯುತ್ತಾ ದೇವರ ಶುಭಸಂದೇಶವನ್ನು ಸಾರಿದೆವು.


ಪುಕ್ಕಟೆಯಾಗಿ ನಾವು ಯಾರ ಅನ್ನವನ್ನೂ ಉಣ್ಣಲಿಲ್ಲ. ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳೂ ನಾವೇ ಕಷ್ಟಪಟ್ಟು ದುಡಿದಿದ್ದೇವೆ.


ಇತರರಿಗೆ ನಿಮ್ಮ ಮೇಲೆ ಇಂಥ ಹಕ್ಕಿದ್ದರೆ ಅದಕ್ಕಿಂತಲೂ ಹೆಚ್ಚು ಹಕ್ಕು ನಮಗಿರಬೇಕಲ್ಲವೇ? ಆದರೂ ನಾವು ಈ ಹಕ್ಕನ್ನು ಚಲಾಯಿಸಲೇ ಇಲ್ಲ. ಬದಲಿಗೆ, ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯಾವ ಅಡ್ಡಿಯೂ ಬಾರದಿರಲೆಂದು ಎಲ್ಲವನ್ನು ಸಹಿಸಿಕೊಂಡೆವು.


ನನ್ನ ಹಾಗೂ ನನ್ನ ಸಂಗಡಿಗರ ಅವಶ್ಯಕತೆಗಳನ್ನು ನೀಗಿಸಲು ಈ ಕೈಗಳೇ ದುಡಿದಿವೆಯೆಂಬುದು ನಿಮ್ಮೆಲ್ಲರಿಗೂ ತಿಳಿದಿದೆ.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಅವರು ತನ್ನಂತೆಯೇ ಗುಡಾರಮಾಡುವ ಕಸುಬಿನವರಾಗಿದ್ದರಿಂದ ಅವರಲ್ಲೇ ತಂಗಿದ್ದು ಅವರೊಡನೆ ಕೆಲಸಮಾಡುತ್ತಾ ಬಂದನು.


ಸ್ವಂತ ದುಡಿಮೆಯಿಂದ ಜೀವಿಸುತ್ತೇವೆ; ನಮ್ಮನ್ನು ಶಪಿಸುವವರನ್ನು ಆಶೀರ್ವದಿಸುತ್ತೇವೆ; ಹಿಂಸೆಗೊಳಗಾದಾಗ ಸಹಿಸಿಕೊಳ್ಳುತ್ತೇವೆ.


ಇತ್ತ ಸೌಲನು ಧರ್ಮಸಭೆಯನ್ನು ನಾಶಪಡಿಸಲು ತೊಡಗಿದನು; ಮನೆಮನೆಗೂ ನುಗ್ಗಿ ಸ್ತ್ರೀಪುರುಷರೆನ್ನದೆ ಭಕ್ತರನ್ನು ಎಳೆದುತಂದು ಸೆರೆಮನೆಗೆ ತಳ್ಳುತ್ತಿದ್ದನು.


“ನನ್ನಲ್ಲಿ ವಿಶ್ವಾಸವಿಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ ಅಂಥವನು ದೊಡ್ಡ ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು, ಆಳವಾದ ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು.


ನಾನು ಯಾರ ಬೆಳ್ಳಿಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ.


ಹಾಗಾದರೆ ನನಗೆ ಸಿಗುವ ಸಂಭಾವನೆಯಾದರೂ ಏನು? ಶುಭಸಂದೇಶವನ್ನು ಸಾರುವಾಗ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳದೆ ಉಚಿತವಾಗಿ ಸಾರುವ ಸೌಭಾಗ್ಯವೇ ನನ್ನ ಸಂಭಾವನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು