Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:16 - ಕನ್ನಡ ಸತ್ಯವೇದವು C.L. Bible (BSI)

16 ಶುಭಸಂದೇಶವನ್ನು ನಾನು ಸಾರುತ್ತಿದ್ದೇನೆಂದು ಕೊಚ್ಚಿಕೊಳ್ಳುವುದಕ್ಕೂ ನನಗೆ ಆಸ್ಪದವಿಲ್ಲ. ಏಕೆಂದರೆ, ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಬದ್ಧನಾಗಿದ್ದೇನೆ. ಸಾರದಿದ್ದರೆ ನನಗೆ ಧಿಕ್ಕಾರವಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇಬೇಕೆಂಬ ನಿರ್ಬಂಧ ನನಗುಂಟು. ಸಾರದಿದ್ದರೆ ನನ್ನ ಗತಿಯನ್ನು ಏನು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸುವಾರ್ತೆಯನ್ನು ಬೋಧಿಸುತ್ತೇನೆಂಬುದು ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವಲ್ಲ. ಸುವಾರ್ತೆಯನ್ನು ಬೋಧಿಸುವುದು ನನ್ನ ಕರ್ತವ್ಯವಾಗಿದೆ. ಅದನ್ನು ನಾನು ಮಾಡಲೇಬೇಕು. ನಾನು ಸುವಾರ್ತೆಯನ್ನು ಬೋಧಿಸದಿದ್ದರೆ, ನನ್ನ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಸಿಕೊಳ್ಳುವ ಯಾವ ಆಸೆಯೂ ನನಗೆ ಇಲ್ಲ. ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಸಾಲಗಾರನಾಗಿದ್ದೇನೆ. ಸುವಾರ್ತೆಯನ್ನು ಸಾರದಿದ್ದರೆ, ನನ್ನ ಗತಿ ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಿಯಾ ಬರಿ ಖಬರ್ ಪ್ರಚಾರ್ ಕರ್‍ತಾ ಹೊಯ್, ಖರೆ ಹೆಚ್ಯಾ ವಿಶಯಾತ್ ಮೊಟೆಪಾನ್ ಬೊಲುಕ್ ಮಾಕಾ ಕಸ್ಲೆಚ್ ನೆವಾನ್ ನಾ. ಹೆ ಕಾಮ್ ಕರ್‍ತಲೊ ಮಾಜೊ ಖಾಯ್ದೊ, ಬರಿ ಖಬರ್ ಪ್ರಚಾರ್ ಕರಿನಾ ಹೊಲ್ಯಾರ್ ಮಾಜಿ ಗತ್ ಕಾಯ್ ಸಾಂಗು!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:16
21 ತಿಳಿವುಗಳ ಹೋಲಿಕೆ  

ಜನರು ನಾಗರೀಕರೇ ಆಗಿರಲಿ, ಅನಾಗರಿಕರೇ ಆಗಿರಲಿ, ವಿದ್ಯಾವಂತರೇ ಆಗಿರಲಿ, ಅವಿದ್ಯಾವಂತರೇ ಆಗಿರಲಿ, ಅವರೆಲ್ಲರಿಗೂ ನಾನು ಕರ್ತವ್ಯಬದ್ಧನಾಗಿದ್ದೇನೆ.


ತನಗೆ ಒಪ್ಪಿಸಿದ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕೆಂಬುದಾಗಿ ಅರ್ಖಿಪ್ಪನಿಗೆ ತಿಳಿಸಿರಿ.


‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.


ಯೇಸು ಅವನನ್ನು ನೋಡಿ, “ನೇಗಿಲಿಗೆ ಕೈಹಾಕಿ ಹಿಂದಕ್ಕೆ ನೋಡುವವನು ದೇವರ ಸಾಮ್ರಾಜ್ಯಕ್ಕೆ ತಕ್ಕವನಲ್ಲ,” ಎಂದರು.


ನಾವಂತೂ ಕಣ್ಣಾರೆ ಕಂಡು, ಕಿವಿಯಾರೆ ಕೇಳಿದ ವಿಷಯನ್ನು ಕುರಿತು ಮೌನದಿಂದಿರಲಾಗದು,” ಎಂದು ಬದಲು ನುಡಿದರು.


ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”


ದೇವರಿಗಾಗಿ ಸಲ್ಲಿಸುವ ಈ ಸೇವೆಯನ್ನು ಕುರಿತು ನಾನು ಕ್ರಿಸ್ತಯೇಸುವಿನಲ್ಲಿ ಹೆಮ್ಮೆಪಡಲು ಕಾರಣ ಉಂಟು.


ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು,” ಎಂದು ಆ ವಾಣಿ ಹೇಳಿತು.


ಆತನು ತನ್ನ ಸತ್ಕಾರ್ಯಗಳಿಂದ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರೆ ಆಗ ಹೊಗಳಿಕ್ಕೊಳ್ಳುವುದಕ್ಕೆ ಆತನಿಗೆ ಆಸ್ಪದವಿರುತ್ತಿತ್ತು; ಆದರೆ ಅದು ದೇವರ ಸಾನ್ನಿಧ್ಯದಲ್ಲಿ ಅಲ್ಲ.


ಮಂದೆ ಕಾಯುವುದರಿಂದ ಸರ್ವೇಶ್ವರ ನನ್ನನ್ನು ಬಿಡಿಸಿದರು. ನೀನು ಹೋಗಿ ನನ್ನ ಜನರಾದ ಇಸ್ರಯೇಲರಿಗೆ ಪ್ರವಾದನೆಮಾಡು’ ಎಂದು ಹೇಳಿಕಳುಹಿಸಿದರು.


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂತ ಬಲಿಷ್ಠರಲ್ಲವೆ? ಎಲ್ಲರು ನನ್ನನ್ನು ಅಣಕಿಸುವವರೆ, ದಿನವೆಲ್ಲ ನಾನು ಅಪಹಾಸ್ಯಕ್ಕೆ ಬಲಿಯಾದೆ.


ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು.


ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ.


ನಿಮಗೆ ಕ್ರಿಸ್ತಯೇಸುವಿನಲ್ಲಿ ಸಾವಿರಾರು ಮಂದಿ ಶಿಕ್ಷಕರು ಇರಬಹುದು. ಆದರೆ ನಿಮಗೆ ನಾನೊಬ್ಬನೇ ತಂದೆ. ಶುಭಸಂದೇಶದ ಮೂಲಕ ನಾನೇ ನಿಮ್ಮನ್ನು ಕ್ರಿಸ್ತಯೇಸುವಿನಲ್ಲಿ ಪಡೆದ ತಂದೆ.


ಇತರರಿಗೆ ನಿಮ್ಮ ಮೇಲೆ ಇಂಥ ಹಕ್ಕಿದ್ದರೆ ಅದಕ್ಕಿಂತಲೂ ಹೆಚ್ಚು ಹಕ್ಕು ನಮಗಿರಬೇಕಲ್ಲವೇ? ಆದರೂ ನಾವು ಈ ಹಕ್ಕನ್ನು ಚಲಾಯಿಸಲೇ ಇಲ್ಲ. ಬದಲಿಗೆ, ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯಾವ ಅಡ್ಡಿಯೂ ಬಾರದಿರಲೆಂದು ಎಲ್ಲವನ್ನು ಸಹಿಸಿಕೊಂಡೆವು.


ಅದೇ ಪ್ರಕಾರ ಶುಭಸಂದೇಶ ಪ್ರಚಾರಕರು ಶುಭಸಂದೇಶ ಪ್ರಚಾರದ ಆದಾಯದಿಂದಲೇ ಜೀವನ ನಡೆಸಬೇಕೆಂದು ಪ್ರಭುವೇ ಆಜ್ಞಾಪಿಸಿದ್ದಾರೆ.


ಯೇಸುಕ್ರಿಸ್ತರ ಶುಭಸಂದೇಶವನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಬಂದಾಗ, ಪ್ರಭುವಿನ ಕೃಪೆಯಿಂದ ನನಗೆ ಸದವಕಾಶದ ಬಾಗಿಲು ತೆರೆದಿತ್ತು.


ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು